ಇಸ್ರೋ ನೆರವಿನಿಂದ ಹೈಟೆಕ್‌ ಶೌಚಾಲಯ ನಿರ್ಮಾಣ

Team Udayavani, Jul 10, 2021, 10:45 AM IST

ಇಸ್ರೋ ನೆರವಿನಿಂದ ಹೈಟೆಕ್‌ ಶೌಚಾಲಯ ನಿರ್ಮಾಣ

ಚಳ್ಳಕೆರೆ: ನಗರದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಸಾರ್ವಜನಿಕರಿಗೆ ಶೌಚಾಲಯದ ಸೌಲಭ್ಯ ಒದಗಿಸಲು ನಿರ್ಧರಿಸಿರುವ ನೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌(ಇಸ್ರೋ) ಕಂಪನಿಯ ಕಾರ್ಯ ಸ್ವಾಗತಾರ್ಹ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ಶೌಚಾಲಯದ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೇರಿದಂತೆ ಹಲವಾರು ರೋಗಗಳಿಂದ ಜನರು ಮುಕ್ತರಾಗುವ ಸಂದರ್ಭ ಒದಗಿಬಂದಿದೆ. ಕೋವಿಡ್ ನಿಯಂತ್ರಣಕ್ಕೆ ವೈದ್ಯರು ಮತ್ತು ಸಿಬ್ಬಂದಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ನಗರದ ಸಾರ್ವಜನಿಕ ಆಸ್ಪತ್ರೆಗೆ ಇನ್ನೂ ಹಲವಾರು ರೀತಿಯ ಸೌಲಭ್ಯ ಕಲ್ಪಿಸಬೇಕಿದೆ. ಉತ್ತಮ ಕಟ್ಟಡ ನಿರ್ಮಾಣಗೊಂಡು ಸಾರ್ವಜನಿಕ ಸೇವೆಗೆ ಆದಷ್ಟು ಬೇಗ ಸಮರ್ಪಿತವಾಗಲಿ ಎಂದು ಹಾರೈಸುತ್ತೇನೆ ಎಂದರು.

ನೂ ಸ್ಪೇಸ್‌ ಇಂಡಿಯಾ ಲಿಮಿಟೆಡ್‌ನ‌ ಚೇರ್ಮೆನ್‌ ಜಿ.ನಾರಾಯಣ್‌ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಇಸ್ರೋ ಸಹಕಾರದಿಂದ ಈ ಕಾರ್ಯವನ್ನು ನಾಡಿದೆಲ್ಲೆಡೆ ಮಾಡಲಾಗುತ್ತಿದೆ. ಒಟ್ಟು 60 ಸಾವಿರ ಸಿಬ್ಬಂದಿ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ರಾಜ್ಯದ 20 ಜಿಲ್ಲಾ ಕೇಂದ್ರಗಳಲ್ಲಿ ಸುಲಭ ಇಂಟರ್‌ ನ್ಯಾಷನಲ್‌ ಸಹಯೋಗದೊಂದಿಗೆ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಕಟ್ಟಡ ನಿರ್ಮಾಣವನ್ನು ನಮ್ಮ ಸಂಸ್ಥೆ ಮಾಡಲಿದ್ದು, ಸುಲಭ ಇಂಟರ್‌ ನ್ಯಾಷನಲ್‌ ಸೇವೆ ಮುಂದುವರಿಸುತ್ತಿದೆ. ದೇಶದೆಲ್ಲೆಡೆ 15 ಲಕ್ಷ ಶೌಚಾಲಯ ನಿರ್ಮಿಸಲಾಗಿದೆ. ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಚಳ್ಳಕೆರೆಯಲ್ಲಿ ಈಶೌಚಾಲಯ ನಿರ್ಮಿಸಲಾಗುತ್ತಿದೆ. ಸ್ವತ್ಛ ಭಾರತ ಅಭಿಯಾನ ಯೋಜನೆಯಡಿ ಈ ಕಾರ್ಯ ಮುಂದುವರಿಯುವುದು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಡಳಿತಾಧಿಕಾರಿ ಡಾ.ಜೆ.ಡಿ.ವೆಂಕಟೇಶ್‌, ಕೇವಲ ಎರಡು ದಿನಗಳ ಅವಧಿಯಲ್ಲಿ ಈ ಸಂಸ್ಥೆ ಅತ್ಯಂತ ಕಾಳಜಿಯಿಂದ ಶೌಚಾಲಯ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದಾಗ ಕೂಡಲೇ ಹಿರಿಯ ಅಧಿಕಾರಿಗಳಿಗೆ ತಿಳಿಸಿ ಅನುಮತಿ ಪಡೆಯಲಾಗಿದೆ. ಎಲ್ಲಾ ರೀತಿಯ ಸುಸಜ್ಜಿತ ಸುಲಭ ಶೌಚಾಲಯ ಇದಾಗಲಿದೆ. ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಗಳಿಗೆ ಇದು ಹೆಚ್ಚಿನ ಸದುಪಯೋಗವಾಗಲಿದೆ ಎಂದರು.

ನಗರಸಭಾ ಅಧ್ಯಕ್ಷೆ ಸಿ.ಬಿ.ಜಯಲಕ್ಷ್ಮಿ ಕೃಷ್ಣಮೂರ್ತಿ, ಮಹಡಿ ಶಿವಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಟಿ.ರಮೇಶ್‌ ಗೌಡ, ಗುಜ್ಜಾರಪ್ಪ, ಎಂ.ವಿಶ್ವನಾಥ, ಆರ್ಥಿಕ ತಜ್ಞ ಅಗೇಸಿಯ, ಡಾ.ಆದಿಮನಿ, ಡಾ.ಆರ್‌.ವೆಂಕಟೇಶ್‌, ಹಿರಿಯ ಫಾರ್ಮಾಸಿಸ್ಟ್‌ ಎನ್‌.ಪ್ರೇಮಕುಮಾರ್‌, ಸಹಾಯಕ ಆಡಳಿತಾಧಿಕಾರಿ ಶ್ರೀದೇವಿ, ಅಧೀಕ್ಷಕಿ ರಾಜೇಶ್ವರಿ, ಮ್ಯಾಟ್ರನ್‌ ಮಂಜುಳಾ, ಕೃಷ್ಣಮೂರ್ತಿ, ಆರ್‌.ಪ್ರಸನ್ನಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.