ನಾಡಿನ ದೊರೆಗೆ ಮಳೆ ಆಗಮನದ ಸ್ವಾಗತ

Team Udayavani, Jul 10, 2021, 4:50 PM IST

eರತಯುದ್ತರತರತೆಯ4

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಜು.10ರಂದು ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಕಲಬುರಗಿ ನಗರ ಸಜ್ಜುಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಒಂಭತ್ತು ತಿಂಗಳ ನಂತರ ಜಿಲ್ಲೆಗೆ ಬರುತ್ತಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಉಂಟಾದ ಪ್ರವಾಹ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ಕೊಟ್ಟಿದ್ದರು. ಆಗ ವಿಮಾನ ನಿಲ್ದಾಣದಲ್ಲೇ ಅಧಿಕಾರಿಗಳ ಸಭೆ ನಡೆಸಿದ್ದರು. ಈಗ ಅವರು ಆಗಮಿಸುವ ಮುನ್ನ ದಿನವಾದ ಶುಕ್ರವಾರ ಸಂಜೆ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ವರ್ಷಾಧಾರೆ ಸ್ವಾಗತ ಕೋರಿದಂತೆ ಆಗಿದೆ. ನೂತನ ತರಕಾರಿ ಮಾರುಕಟ್ಟೆಗೆ ಅಡಿಗಲ್ಲು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಸಿಎಂ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಭದ್ರತೆ ಸೇರಿದಂತೆ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಕೈಗೊಂಡಿದೆ.

ಗುರುವಾರದಿಂದಲೇ ಆಯಾಕಟ್ಟಿನ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿ ನಿಗಾ ವಹಿಸುವ ಕೆಲಸ ಮಾಡಿದರು. ಸಿಎಂ ಬಂದಿಳಿಯುವ ವಿಮಾನ ನಿಲ್ದಾಣ, ಅವರು ಭಾಗವಹಿಸುವ ಕಾರ್ಯಕ್ರಮಗಳ ಸ್ಥಳಗಳಲ್ಲಿ ಅಧಿಕ ನಿಗಾ ವಹಿಸಿದ್ದಾರೆ. ಸಿಎಂ ಅವರನ್ನು ಸ್ವಾಗತ ಕೋರುವ ಮುಖ್ಯ ರಸ್ತೆಗಳಲ್ಲಿ ಕಾಮಾನುಗಳನ್ನು ಸ್ಥಾಪನೆ ಮಾಡಲಾಗಿದೆ. ವಿಮಾನ ನಿಲ್ದಾಣ ಮುಂಭಾಗ, ವಿಶ್ವವಿದ್ಯಾಲಯದ ಮುಂದಿನ ಮುಖ್ಯ ರಸ್ತೆ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ, ಸರ್ದಾರ ವಲ್ಲಭಬಾಯಿ ಪಟೇಲ್‌ ವೃತ್ತ ಹೀಗೆ ಸಿಎಂ ಸಂಚರಿಸುವ ಮಾರ್ಗದಲ್ಲಿ ಸ್ವಾಗತ ಕಾಮಾನುಗಳು ರಾರಾಜಿಸುತ್ತವೆ. ಇತ್ತ, ರಸ್ತೆ ವಿಭಜಕಗಳ ಮಧ್ಯೆ ಸ್ವತ್ಛತೆ ಮತ್ತು ರಸ್ತೆಯಲ್ಲಿನ ತಗ್ಗು-ಗುಂಡಿಗಳನ್ನು ಮುಚ್ಚುವ ಕೆಲಸವನ್ನೂ ಮಹಾನಗರ ಪಾಲಿಕೆ ಮಾಡಿದೆ. ಈ ನಡುವೆ ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸಾ ° ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಆಯಾ ಇಲಾಖೆ ಅ ಧಿಕಾರಿಗಳು ಶಿಷ್ಠಾಚಾರದಂತೆ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.

ಜಿಲ್ಲೆಯ ಎಲ್ಲ ಇಲಾಖೆಯ ಅ ಧಿಕಾರಿಗಳು ಸಮನ್ವಯತೆ ಕಾಪಾಡಿಕೊಂಡು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ ಯಶಸ್ವಿಗೊಳಿಸಲು ಶ್ರಮಿಸಬೇಕು. ಕೊರೊನಾ ಭೀತಿ ಕಾರಣ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನಸಂದಣಿ ಆಗದಂತೆ ಮತ್ತು ಅವರು ಸಂಚರಿಸುವ ಮಾರ್ಗ ಮಧ್ಯೆ ಸೂಕ್ತ ಪೊಲೀಸ್‌ ಬಂದೋಬಸ್ತ್ ಮಾಡಬೇಕೆಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿ ಕಾರಿ ಡಾ| ಸಿಮಿ ಮರಿಯಂ ಜಾರ್ಜ್‌, ಜಿಲ್ಲಾ ಪಂಚಾಯಿತಿ ಸಿಇಒ ಡಾ|ದಿಲೀಷ್‌ ಸಸಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್‌ ಸುಧಾಕರ್‌ ಲೋಖಂಡೆ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಶ್ರೀಕಾಂತ ಬಿ.ಕಟ್ಟಿಮನಿ, ಹೆಚ್ಚುವರಿ ಜಿಲ್ಲಾ ಧಿಕಾರಿ ಡಾ| ಶಂಕರ ವಣಿಕ್ಯಾಳ, ನಗರಾಭಿವೃದ್ಧಿ ಪ್ರಾ ಧಿಕಾರದ ಆಯುಕ್ತ ರಾಚಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಜೇರಟಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಶರಣಬಸಪ್ಪ ಗಣಜಲಖೇಡ, ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಚಿದಾನಂದ ನಿಂಬಾಳ ಹಾಗೂ ಜಿಲ್ಲಾ ಮಟ್ಟದ ಅ ಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.