ರಾಯಚೂರು: ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಬದು ನಿರ್ಮಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು, ಕಳೆ ಕೀಳುವ ಕಾಯಕದಲ್ಲಿ ತೊಡಗಿದ್ದಾರೆ.

Team Udayavani, Jul 15, 2021, 7:04 PM IST

Rain

ರಾಯಚೂರು: ಬಯನ್‌ ಬೆಂಗಾಲದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಜೋರು ಮಳೆ ಸುರಿಯುತ್ತಿದೆ. 15ರವರೆಗೆ ನಿರೀಕ್ಷಿಸಿದ್ದ ಮಳೆ ಇನ್ನೂ ಮೂರ್‍ನಾಲ್ಕು ದಿನ ಸುರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆರಿದ್ರಾ ಮಳೆಯಿಂದ ಕೃಷಿ ಚಟುವಟಿಕೆಗಳು ಆಗಲೇ ಚುರುಕು ಪಡೆದಿದ್ದವು. ಆದರೆ, ಈ ತೂಫಾನ್‌ ನಿಂದ ನೀರಿಲ್ಲದೇ ಒಣಗುತ್ತಿದ್ದ ಬೆಳೆಗಳಿಗೆ ಜೀವ ಕಳೆ ಬಂದಿದೆ. ಮಳೆ ಅಗತ್ಯಕ್ಕಿಂತ ಹೆಚ್ಚಾದರೂ ಬೆಳೆ ಕೊಳೆಯುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

ಸೋಮವಾರ ಸಂಜೆಯಿಂದಲೇ ಜಿಲ್ಲೆಯಲ್ಲಿ ಮಳೆ ಶುರುವಾಗಿದೆ. ಮಂಗಳವಾರ, ಬುಧವಾರ ಜೋರಾಗಿದೆ. ಮಂಗಳವಾರ ಒಂದೇ ದಿನ 12 ಮಿ.ಮೀ ಮಳೆ ಸುರಿದಿದೆ. ಬುಧವಾರ ಕೂಡ ಉತ್ತಮ ಮಳೆ ಸುರಿದಿದೆ. ಆದರೆ, ಇಡೀ ಜಿಲ್ಲಾದ್ಯಂತ ಏಕ ರೂಪದಲ್ಲಿ ಮಳೆಯಾಗಿಲ್ಲ. ಕೆಲವೆಡೆ ಸಣ್ಣ ಪ್ರಮಾಣದಲ್ಲಿದ್ದರೆ ಕೆಲವೆಡೆ ಜೋರಾಗಿದೆ.

ಮೂರ್‍ನಾಲ್ಕು ದಿನ ಮಳೆ: ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗುರುವಾರದ ಬಳಿಕ ಮಳೆ ಪ್ರಮಾಣ ತಗ್ಗಬೇಕಿತ್ತು. ಆದರೆ, ಈಗಿನ ಮಾಹಿತಿ ಇನ್ನೂ ಮೂರ್‍ನಾಲ್ಕು ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜಿಲ್ಲೆಯಲ್ಲಿ ಬಹುತೇಕ ಮುಂಗಾರು ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಮಳೆಗಾಗಿ ಕಾದಿದ್ದ ರೈತರಿಗೆ ಇದು ವರವಾಗಿ ಪರಿಣಮಿಸಿದೆ. ಹತ್ತಿ, ತೊಗರಿ ಬಿತ್ತನೆ ಹೆಚ್ಚಾಗಿದೆ. ಈ ಕಾರಣಕ್ಕೆ ರೈತರು ಮಳೆಯಲ್ಲೇ ಹೊಲದ ಚಟುವಟಿಕೆ ಮುಂದುವರಿಸಿದ್ದು, ಬದು ನಿರ್ಮಿಸಿ ನೀರು ಸರಾಗವಾಗಿ ಹರಿಯುವಂತೆ ಮಾಡುವುದು, ಕಳೆ ಕೀಳುವ ಕಾಯಕದಲ್ಲಿ ತೊಡಗಿದ್ದಾರೆ.

ಜನಜೀವನ ಅಸ್ತವ್ಯಸ್ತ: ಈಗ ತಾನೆ ಲಾಕ್‌ ಡೌನ್‌ ತೆರವುಗೊಂಡಿದ್ದು ಎಲ್ಲೆಡೆ ಮಾರುಕಟ್ಟೆ ವ್ಯಾಪಾರ-ವಹಿವಾಟಿಗೆ ಮುಕ್ತವಾಗಿತ್ತು. ಆದರೆ, ಜಿಟಿ ಜಿಟಿ ಮಳೆ ಸುರಿಯುತ್ತಿರುವುದು ವ್ಯಾಪಾರ-ವಹಿವಾಟು ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಜನ ಎಂದಿನಂತೆ ಹೊರಗೆ ಓಡಾಡುವುದು ಕಡಿಮೆಯಾಗಿದೆ. ಇದರಿಂದ ವ್ಯಾಪಾರ-ವಹಿವಾಟು ಕೂಡ ಮಂಕಾಗಿದೆ ಎನ್ನುತ್ತಾರೆ ವರ್ತಕರು. ಇನ್ನೂ ಮೂರ್‍ನಾಲ್ಕು ಮಳೆ ಮುಂದುವರಿದರೆ ನಮಗೆ ಲಾಕ್‌ಡೌನ್‌ನಲ್ಲೇ ಇದ್ದ ಸ್ಥಿತಿ ಅನುಭವಕ್ಕೆ ಬರುತ್ತಿದೆ ಎನ್ನುತ್ತಿದ್ದಾರೆ.

ಮಲೆನಾಡಿನ ವಾತಾವರಣ ನಿರ್ಮಾಣಗೊಂಡಿದೆ. ವಾಯುಭಾರ ಕುಸಿತದಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಈ ಮಳೆ ಮುಂದಿನ ಮೂರ್‍ನಾಲ್ಕು ದಿನಗಳವರೆಗೆ ಬರುವ ಸಾಧ್ಯತೆ ಇದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಿಲ್ಲೆಯಲ್ಲೂ ಸರಾಸರಿ 12 ಮಿ.ಮೀ ಮಳೆಯಾಗಿದೆ. ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
ಡಾ| ಶಾಂತಪ್ಪ, ಹವಾಮಾನ ತಜ್ಞ
ರಾಯಚೂರು ವಿವಿ

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.