ಶಾಖೆಯ ಸಂತ ಕಚೇರಿ ಕನಸನ್ನು ನನಸಾಗಿಸೋಣ: ಸುರೇಶ್‌ ‌ಕುಂದರ್‌

ಮುಂದೆ ನಾವು ಸ್ವಂತ ಕಚೇರಿಯನ್ನು ಹೊಂದಿ ಜನರಿಗೆ ಇನ್ನೂ ಹೆಚ್ಚಿನ ಸೇವೆಯನ್ನು ನೀಡುವಂತಾಗಬೇಕು.

Team Udayavani, Jul 16, 2021, 4:31 PM IST

ಶಾಖೆಯ ಸಂತ ಕಚೇರಿ ಕನಸನ್ನು ನನಸಾಗಿಸೋಣ: ಸುರೇಶ್‌ ‌ಕುಂದರ್‌

ಮುಂಬಯಿ, ಜು. 15: ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿಯ ಇದರ ಮೀರಾ-ಭಾಯಂದರ್‌ ಶಾಖೆಯ ಹತ್ತನೇ ಸಂಸ್ಥಾಪನ ದಿನೋತ್ಸವವು ಜು. 10ರಂದು ಶಾಖೆಯ ಕಾರ್ಯಾಲಯದಲ್ಲಿ ನಡೆಯಿತು. ಮಂಡಳಿಯ ಸ್ಥಾಪಕ ಕಾಟಿಪಟ್ನ ಚಂದು ಮಾಸ್ಟರ್‌ ಅವರ ಬಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೀರಾ -ಭಾಯಂದರ್‌ ಶಾಖೆಯ ಕಾರ್ಯಾಧ್ಯಕ್ಷ ಸುರೇಶ್‌ ಕುಂದರ್‌ ಮಾತನಾಡಿ, ಶಾಖೆಯು 2011ರ ಜು. 10ರಂದು ಅಂಧೇರಿಯ ಶ್ರೀ ಲಕ್ಷ್ಮೀನಾರಾಯಣ ದೇವರ ಸಾನ್ನಿಧ್ಯದಲ್ಲಿ ಸ್ಥಾಪನೆಗೊಂಡು ನಿರಂತರವಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಜನಹಿತ ಕಾರ್ಯಗಳಿಂದ ಸದಸ್ಯರಿಂದಲೂ ಮಾತೃ ಸಂಸ್ಥೆಯಿಂದಲೂ ಪ್ರಶಂಸೆಗೆ ಪಾತ್ರವಾಗಿದೆ. ಮುಂದೆ ನಾವು ಸ್ವಂತ ಕಚೇರಿಯನ್ನು ಹೊಂದಿ ಜನರಿಗೆ ಇನ್ನೂ ಹೆಚ್ಚಿನ ಸೇವೆಯನ್ನು ನೀಡುವಂತಾಗಬೇಕು.

ಶೀಘ್ರದಲ್ಲೇ ಇದು ಕಾರ್ಯರೂಪಕ್ಕೆ ಬರಲು ನಾವು ಪ್ರಯತ್ನಿಸುತ್ತೇವೆ. ಯುವ ಜನಾಂಗ ಮುಂದೆ ಬಂದು ಹೆಚ್ಚಿನ ಸಂಖ್ಯೆಯಲ್ಲಿ ಮಂಡಳಿಯ ಸದಸ್ಯರಾಗಿ ಸಹಕರಿಸಬೇಕು. ನಾವೆಲ್ಲರೂ ಒಗ್ಗಟ್ಟಿನಿಂದ ಸಮಾಜಪರ ಕಾರ್ಯಗಳಿಗೆ ಮುಂದಾಗೋಣ ಎಂದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸೂರ್ಯಕಲಾ ಸುವರ್ಣ, ಉಪ ಕಾರ್ಯಾಧ್ಯಕ್ಷೆಯರಾದ ಪ್ರಭಾವತಿ ಎಚ್‌. ಅಮೀನ್‌ ಮತ್ತು ಪ್ರಜಾ ವಿ. ಅಮೀನ್‌ ಹಾಗೂ ಪೂಜಾ ವಿ. ಅಮೀನ್‌, ಸುಜಾತಾ ಮೆಂಡನ್‌, ದೇವಕಿ ಎಚ್‌. ಕೋಟ್ಯಾನ್‌, ಉಪಾಧ್ಯಕ್ಷ ಧನಂಜಯ ಸಾಲ್ಯಾನ್‌, ಕೋಶಾಧಿಕಾರಿ ತಿಲಕ್‌ ಎನ್‌. ಸುವರ್ಣ, ಜತೆ ಕೋಶಾಧಿಕಾರಿ ಹರೀಶ್‌ ಕೋಟ್ಯಾನ್‌, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂಪತ್‌ ಶ್ರೀಯಾನ್‌, ರವಿ ಪುತ್ರನ್‌, ರವಿ ಸುವರ್ಣ, ಶಿವರಾಜ್‌ ಕಾಂಚನ್‌ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿ ಶಾಖೆಯು ಇನ್ನೂ ಎತ್ತರಕ್ಕೆ ಬೆಳೆಯುವಂತಾಗಲಿ ಎಂದು ಶುಭ ಹಾರೈಸಿದರು.

ದಶಮಾನೋತ್ಸವದ ಅಂಗವಾಗಿ ಸದಸ್ಯರಿಂದ ಕೇಕ್‌ ಕತ್ತರಿಸಲಾಯಿತು. ಸುಜಾತಾ ಮೆಂಡನ್‌ ಮತ್ತು ದೇವಕಿ ಎಚ್‌. ಕೋಟ್ಯಾನ್‌ ಪ್ರಾರ್ಥನೆಗೈದರು. ಮೀರಾ – ಭಾಯಂದರ್‌ ಶಾಖೆಯ ಕಾರ್ಯದರ್ಶಿ ಗಂಗಾಧರ ಬಂಗೇರ ಸ್ವಾಗತಿಸಿ, ಶಾಖೆಯ ಕಳೆದ ಹತ್ತು ವರ್ಷಗಳ ಕಾರ್ಯಚಟುವಟಿಕೆಗಳ ವಿವರವನ್ನಿತ್ತರು ಹಾಗೂ ಮುಂದಿನ ಪ್ರಗತಿ ಬಗ್ಗೆ ಆಶಯ ವ್ಯಕ್ತಪಡಿಸಿದರು ಮತ್ತು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.