ಕೃಷಿ ಸೌಲಭ್ಯ ಪಡೆಯಲು ಆ್ಯಪ್‌ ಸಹಕಾರಿ

Team Udayavani, Jul 17, 2021, 10:17 AM IST

ಕೃಷಿ ಸೌಲಭ್ಯ ಪಡೆಯಲು ಆ್ಯಪ್‌ ಸಹಕಾರಿ

ಸಿರುಗುಪ್ಪ: ತಾಲೂಕಿನ ರೈತರು ಪೂರ್ವಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆ ಸಮೀಕ್ಷೆಗೆ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ಮಂಜುನಾಥ ತಿಳಿಸಿದರು.

ನಗರದ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ ಬೆಳೆಸಾಲ, ವಿಮೆ, ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ, ಬೆಳೆ ಪರಿಹಾರ ಮತ್ತಿತರ ಯೋಜನೆಯ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಮಾನದಂಡವಾಗಿ ಪರಿಗಣಿಸಲಾಗುತ್ತಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿದರೆ ರೈತರಿಗೆ ಅನುಕೂಲವಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ಮಾಡುವ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕೆಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ನಜೀರ ಅಹಮ್ಮದ್‌ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆ ಸಮೀಕ್ಷೆಯನ್ನು ಮೊಬೈಲ್‌ ಆ್ಯಪ್‌ ಮೂಲಕ ದಾಖಲಿಸಲಾಗುತ್ತದೆ. ಜಮೀನಿನಲ್ಲಿ ಬೆಳೆದ ಬೆಳೆಗಳವಿವರಗಳನ್ನು ರೈತರೇ ಮೊಬೈಲ್‌ ಆ್ಯಪ್‌ ಮೂಲಕ ದಾಖಲಿಸಿ ಬೆಳೆ ಸಮೀಕ್ಷೆ ಮಾಡಬೇಕು. ರೈತರ ಬೆಳೆ ಸಮೀಕ್ಷೆ ಮೊಬೈಲ್‌ ಅಪ್ಲಿಕೇಷನ್‌ ಬಳಸಲು ಆಯಾ ಗ್ರಾಮಕ್ಕೆ ನೇಮಕವಾದ ಖಾಸಗಿ ವ್ಯಕ್ತಿಗಳ ಸಹಾಯ ಪಡೆಯಬಹುದಾಗಿದೆ.

ರೈತರೇ ತಮ್ಮ ಮೊಬೈಲ್‌ ನ ಪ್ಲೇಸ್ಟೋರ್‌ನಲ್ಲಿ ಪೂರ್ವ ಮುಂಗಾರು ರೈತರ ಬೆಳೆ ಸಮೀಕ್ಷೆ 2021-22 ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಆರ್ಥಿಕ ವರ್ಷ, ಋತು ದಾಖಲಿಸಬೇಕು. ರೈತರು ತಮ್ಮಹೆಸರು, ಮೊಬೈಲ್‌ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸಿದಾಗ ನಮೂದಿಸಿದ ಮೊಬೈಲ್‌ ಸಂಖ್ಯೆಗೆ ಒಟಿಪಿ ಬರುತ್ತದೆ. ನಂತರ ಒಟಿಪಿ ದಾಖಲಿಸಬೇಕು. ಮಾಸ್ಟರ್‌ ವಿವರ, ಪಹಣಿ, ಮಾಲೀಕರ ವಿವರ, ಪಾಲಿಗ್ರಾನ್‌ ನಮೂದಿಸಿ ಜಿಐಎಸ್‌ ಮ್ಯಾಪ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು, ಹೆಚ್ಚಿನ ಮಾಹಿತಿಗಾಗಿ ಕೃಷಿ, ಕಂದಾಯ, ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ತಿಳಿಸಿದರು.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿಶ್ವನಾಥ,ಕಂದಾಯ ನಿರೀಕ್ಷಕರಾದ ಬಸವರಾಜ, ಮಂಜುನಾಥ, ಶೆಕ್ಷಾವಲಿ, ಕೃಷಿ ಅಧಿಕಾರಿಗಳಾದ ವಾಣಿಶ್ರೀ, ಗರ್ಜೆಪ್ಪ, ಬಾಲಾಜಿನಾಯ್ಕ, ಪರಮೇಶ್ವರರೆಡ್ಡಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು, ಕೃಷಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.