ಹಕ್ಕಿಜ್ವರಕ್ಕೆ ದೇಶದಲ್ಲಿ ಮೊದಲ ಸಾವು :ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ

Team Udayavani, Jul 21, 2021, 9:32 PM IST

ಹಕ್ಕಿಜ್ವರಕ್ಕೆ ದೇಶದಲ್ಲಿ ಮೊದಲ ಸಾವು :ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ

ನವದೆಹಲಿ: ಹಕ್ಕಿಜ್ವರದಿಂದಾಗಿ ನವದೆಹಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 11 ವರ್ಷದ ಬಾಲಕ ಅಸುನೀಗಿದ್ದಾನೆ. ಪಕ್ಷಿಗಳಲ್ಲಿ ಕಂಡುಬರುವ ಈ ಜ್ವರದಿಂದಾಗಿ ದೇಶದಲ್ಲಿ ಅಸುನೀಗಿದ ಮೊದಲ ಬಲಿ ಈತ. ಹರ್ಯಾಣದ ಬಾಲಕನಾಗಿರುವ ಆತನನ್ನು ತೀವ್ರ ಜ್ವರದ ಹಿನ್ನೆಲೆಯಲ್ಲಿ ಜು.2ರಂದು ಏಮ್ಸ್‌ಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯ ಮೂಲಗಳು ತಿಳಿಸಿರುವ ಪ್ರಕಾರ ಬಾಲಕನಿಗೆ ಕೊರೊನಾ ಸೋಂಕು ಇರಬಹುದೆಂದು ತರ್ಕಿಸಲಾಗಿತ್ತು. ಆತನಿಗೆ ಸೋಂಕು ಪತ್ತೆ ಪರೀಕ್ಷೆ ನಡೆಸಿದಾಗ ವರದಿ ನೆಗೆಟಿವ್‌ ಬಂದಿತ್ತು. ಆತನನ್ನು ಇತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಹಕ್ಕಿಜ್ವರ ಇದ್ದದ್ದು ದೃಢವಾಯಿತು ಎಂದು ತಿಳಿಸಿವೆ.

15 ವರ್ಷಗಳಲ್ಲಿ ದೇಶದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದರೂ, ಕೋಳಿ ಸಾಕಣೆ ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತೊಂದರೆಯಾಗಿತ್ತು. ಆದರೆ, ಮಾನವರು ಅದರಿಂದಾಗಿ ಅಸುನೀಗಿರಲಿಲ್ಲ.

ಇದನ್ನೂ ಓದಿ :ತೆಲಂಗಾಣಕ್ಕೆ ಮೈಕ್ರೋಸ್ಟಾಫ್ಟ್ ಜಾಕ್‌ಪಾಟ್‌ :15000 ಕೋಟಿ ಮೌಲ್ಯದ ಡೇಟಾ ಸೆಂಟರ್‌ ಸ್ಥಾಪನೆ

ಐಸೊಲೇಷನ್‌ನಲ್ಲಿ ಕುಟುಂಬಸ್ಥರು:
ಅಸುನೀಗಿದ ಬಾಲಕನಿಂದಾಗಿ ಹಕ್ಕಿ ಜ್ವರ ಇತರರಿಗೆ ತಗಲಿದೆಯೇ ಎಂದು ದೃಢಪಡಿಸಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್‌ಸಿಡಿಸಿ) ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು ಮತ್ತು ಕುಟುಂಬ ಸದಸ್ಯರನ್ನು ಐಸೊಲೇಷನ್‌ನಲ್ಲಿ ಇರಿಸಲು ಸೂಚಿಸಲಾಗಿದೆ.

ಭಯ ಬೇಡ: ಡಾ. ಸುರ್ಜೆವಾಲಾ
ಮಾನವನಿಂದ ಮಾನವನಿಗೆ ಹಕ್ಕಿಜ್ವರ ಎಚ್‌5ಎನ್‌1 ಹರಡುವುದು ತೀರಾ ಅಪರೂಪ. ಹೀಗಾಗಿ, ಭೀತಿಗೆ ಒಳಗಾಗ ಬೇಕಾದ ಅಗತ್ಯವಿಲ್ಲ ಎಂದು ನವದೆಹಲಿ ಏಮ್ಸ್‌ ನಿರ್ದೇಶಕ ಡಾ.ರಣದೀಪ್‌ ಗುಲೇರಿಯಾ ಹೇಳಿದ್ದಾರೆ. ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆ ಕೂಡ ಬಾಲಕನಿಗೆ ಹಕ್ಕಿಜ್ವರ ತಗಲಿದ್ದನ್ನು ದೃಢಪಡಿಸಿದೆ ಎಂದು ಅವರು ಹೇಳಿದ್ದಾರೆ. ಹಕ್ಕಿಗಳಿಂದ ಮಾನವನಿಗೆ ಜ್ವರ ತಗಲುತ್ತದೆ ಎಂಬ ಅಂಶವನ್ನೂ ಇನ್ನೂ ಅಧ್ಯಯನದ ಮೂಲಕ ಸಾಬೀತುಪಡಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.