ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮಿರಾಬಾಯ್ ಚಾನು
Team Udayavani, Jul 24, 2021, 12:16 PM IST
ಟೋಕಿಯೊ: ಜಪಾನ್ ನಲ್ಲಿ ನಡೆಯುತ್ತಿರುವ ಟೋಕಿಯೊ ಒಲಿಂಪಿಕ್ಸ್ ನ ಮೊದಲ ದಿನವೇ ಭಾರತ ಪದಕ ಬಾಚಿಗೊಂಡಿದೆ. 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಮಿರಾಬಾಯ್ ಚಾನು ಬೆಳ್ಳಿ ಪದಕ ಪಡೆದಿದ್ದಾರೆ.
ಚೀನಾದ ಜೀಹೂಹು ಮೊದಲ ಸ್ಥಾನ ಪಡೆದರು. 84 ಕೆಜಿ ಮತ್ತು 87 ಕೆಜಿ ಭಾರವನ್ನು ಯಶಸ್ವಿಯಾಗಿ ಎತ್ತಿದ ಮಿರಾಬಾಯ್ ಚಾನು 89 ಕೆಜಿ ಭಾರ ಎತ್ತುವಲ್ಲಿ ವಿಫಲರಾದರು. ಆದರೆ ಚೀನಾದ ಸ್ಪರ್ಧಿ 94 ಕೆಜಿ ಭಾರ ಎತ್ತಿ ಒಲಿಂಪಿಕ್ ದಾಖಲೆ ಬರೆದರು.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್ ನ ಮೊದಲ ಬಂಗಾರಕ್ಕೆ ಗುರಿಯಿಟ್ಟ ಚೀನಾದ ಶೂಟರ್
ಇದು ಒಲಿಂಪಿಕ್ ಭಾರ ಎತ್ತುವ ಸ್ಪರ್ಧೆಯಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ. ಈ ಹಿಂದೆ ಸಿಡ್ನಿ ಒಲಿಂಪಿಕ್ ನಲ್ಲಿ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕ ಗೆದ್ದಿದ್ದರು. ಅವರು 69 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ