ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ


Team Udayavani, Jul 26, 2021, 6:45 AM IST

ಸವಾಲಿನ ಮಧ್ಯೆಯೂ ಮುಗಿದ ಯಶಸ್ವಿ 2ನೇ ವರ್ಷ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರೈಸಿದ್ದಾರೆ. ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪ್ರವಾಹ ಅದರ ಬೆನ್ನಲ್ಲೇ ಕೊರೊನಾ ಎದುರಾಗಿ ಸವಾಲು ತಂದೊಡ್ಡಿತಾದರೂ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾದರು. ಎರಡನೇ ವರ್ಷದಲ್ಲೂ ಕೊರೊನಾ ಹಾಗೂ ಪ್ರವಾಹ ಬೆನ್ನು ಬಿಡಲಿಲ್ಲ. ಸತತ ಎರಡನೇ ವರ್ಷದ ಸವಾಲು ಸಾಕಷ್ಟು ಸಮಸ್ಯೆಗಳನ್ನೂ ತಂದೊಡ್ಡಿತು. ಇದರ ನಡುವೆಯೂ ಕೃಷಿ, ಕೈಗಾರಿಕೆ, ನೀರಾವರಿ, ಶಿಕ್ಷಣ, ಆರೋಗ್ಯ ನಮ್ಮ ಸರಕಾರದ ಆದ್ಯತೆ ಎಂದು ಘೋಷಿಸಿದ್ದ ಅವರು ಸಾಧ್ಯವಾದಷ್ಟೂ ಆ ಕ್ಷೇತ್ರಗಳಿಗೆ ಹೆಚ್ಚು ಒತ್ತು ನೀಡಿದ್ದಾರೆ. ಸಂಪನ್ಮೂಲ ಕ್ರೋಢೀಕರಣ­ದಲ್ಲೂ ರಾಜ್ಯ ಸರಕಾರಕ್ಕೆ ಅಂತಹ ಹಿನ್ನಡೆಯೇನೂ ಆಗಲಿಲ್ಲ ಎನ್ನಬಹುದು.

ಯಡಿಯೂರಪ್ಪ ಅವರ ವಿಶೇಷತೆ ಎಂದರೆ ಜನರ ಜತೆ ಹಾಗೂ ನಿರಂತರವಾಗಿ ಚಟುವಟಿಕೆಯಿಂದ ಇರುವುದು. ಇಲಾಖೆಗಳ ಸಭೆ, ಪಕ್ಷದ ಕಾರ್ಯಕ್ರಮ­ಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಿ ಅಧಿಕಾರಿಗಳು ಹೇಳುವುದನ್ನೂ ಸಂಪೂರ್ಣ­ವಾಗಿ ಕೇಳಿಸಿಕೊಂಡು ಅನಂತರ ತಮ್ಮ ಅಭಿಪ್ರಾಯ ತಿಳಿಸುವುದು. ಅನಂತರ ಅನುಷ್ಠಾನಕ್ಕೆ ತರುವುದು. ಅಭಿವೃದ್ಧಿ ವಿಚಾರಕ್ಕೆ ಬಂದರೆ ಕೊರೊನಾ ಆರ್ಥಿಕ ಸಂಕಷ್ಟದಿಂದ ಬಜೆಟ್‌ನಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇಲಾಖಾವಾರು ನಿಗದಿಗೊಳಿಸಿದ ಅನುದಾನ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಆದರೆ ಸಾಧ್ಯವಾದಷ್ಟೂ ತುರ್ತು ಕಾಮಗಾರಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಕೆಲಸ ಮಾಡಲಾಗಿದೆ.

ಹಳೇ ಮೈಸೂರು, ಉತ್ತರ ಕರ್ನಾಟಕ, ಮುಂಬಯಿ ಕರ್ನಾಟಕ, ಕಲ್ಯಾಣ ಕರ್ನಾಟಕ ಹೀಗೆ ಎಲ್ಲ ಭಾಗಗಳಿಂದಲೂ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಿದ್ದಂತೆ ಅತಿಯಾದ ನಿರೀಕ್ಷೆಗಳೇ ಇದ್ದವು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಸರಕಾರದಿಂದ ಜನತೆಯೂ ಹೆಚ್ಚಿನದನ್ನು ನಿರೀಕ್ಷೆ ಮಾಡಲು ಆಗಲಿಲ್ಲ. ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಹಣ ವೆಚ್ಚವಾಗುವಂತಾಯಿತು.

ರಾಜಕೀಯವಾಗಿಯೂ ಯಡಿಯೂರಪ್ಪ ಎರಡು ವರ್ಷಗಳಲ್ಲಿ ಸಾಕಷ್ಟು ಸವಾಲು ಎದುರಿಸಿದರು. ವರ್ಷ ಮುಗಿಯುತ್ತಿದ್ದಂತೆ ನಾಯಕತ್ವ ಬದಲಾವಣೆ ವಿಚಾರದ ಮಾತುಗಳು ಪ್ರಾರಂಭವಾಗಿ ಎರಡು ವರ್ಷ ಪೂರೈಸುತ್ತಿರುವ ಈ ಹಂತದವರೆಗೂ ಮುಂದು­ವರಿದಿದೆ. ಇದರ ನಡುವೆಯೂ ಯಡಿಯೂರಪ್ಪ ಅಂದು­ಕೊಂಡಷ್ಟು ತೃಪ್ತಿಯಾಗಿ ಕೆಲಸ ಮಾಡಲು ಸಾಧ್ಯವಾಗದಿದ್ದರೂ ಇದ್ದಂತಹ ಪರಿಸ್ಥಿತಿಯಲ್ಲಿ ಆದಷ್ಟೂ ಉತ್ತಮ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಪಟ್ಟಿದ್ದಾರೆ.

ಇದರ ನಡುವೆ ಸದ್ದು ಮಾಡಿರುವುದು ರಾಜಕೀಯ ಅಸ್ಥಿರತೆ. ಈ ವಿಚಾರ ಒಮ್ಮೆ ಪ್ರಸ್ತಾವವಾದರೆ ಇಡೀ ಆಡಳಿತ ಯಂತ್ರ ಯಾವ ರೀತಿ ಸ್ಥಗಿತವಾಗುತ್ತದೆ ಎಂಬುದಕ್ಕೆ ಹಿಂದಿನ ಹಲವಾರು ಉದಾಹರಣೆಗಳೇ ಸಾಕ್ಷಿ ಹೀಗಾಗಿ ಬಿಜೆಪಿ ಹೈಕಮಾಂಡ್‌ ಸಹ ಇಂತಹ ಸಂದರ್ಭದಲ್ಲಿ ಮೌನ ವಹಿಸುವುದು ಸರಿಯಲ್ಲ. ಸೂಕ್ತ ಕ್ರಮ ಅಥವಾ ಸಂದೇಶ ರವಾನಿಸಿದರೆ ಯಾವುದೇ ಗೊಂದಲಕ್ಕೆ ಅವಕಾಶ ಇರುವುದಿಲ್ಲ. ಮುಂದಿನ ದಿನಗಳಲ್ಲಾದರೂ ಅಂತಹ ಸಂದೇಶ ಬಂದು ರಾಜ್ಯದ ಆಡಳಿತ ಸುಸೂತ್ರವಾಗಿ ನಡೆಯುವುದೇ ಎಂಬುದನ್ನು ಕಾದುನೋಡಬೇಕಾಗಿದೆ.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.