ನೆರೆಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ


Team Udayavani, Jul 27, 2021, 6:24 PM IST

27-13

ಹರಪನಹಳ್ಳಿ: ಮಲೆನಾಡಿನ ಘಟ್ಟಪ್ರದೇಶ ಸೇರಿದಂತೆ ವಿವಿಧೆಡೆ ನಿರಂತರವಾಗಿ ಸುರಿದ ಭಾರೀ ಮಳೆಯಿಂದಾಗಿ ತಾಲೂಕಿನ ಸರಹದ್ದಿನಲ್ಲಿ ಹಾದುಹೋಗಿರುವ ತುಂಗಭದ್ರಾ ನದಿಯಲ್ಲಿ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಸೋಮವಾರ ಉಪವಿಭಾಗಾಧಿ ಕಾರಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಹಲುವಾಗಲು ಗ್ರಾಮದ ನದಿಪಾತ್ರದ ಜಮೀನುಗಳಿಗೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ ಎಚ್‌.ಜಿ ಅವರು, ಜಮೀನಿನಲ್ಲಿ ಬೆಳೆಯಲಾಗಿದ್ದ ಚೆಂಡುಹೂವು, ಹೈಬ್ರಿàಡ್‌ ಜೋಳ, ಮೆಕ್ಕೆಜೋಳ ಹಾಗೂ ಕಬ್ಬು ಸೇರಿದಂತೆ ಬಿತ್ತನೆಯಾಗಿರುವ ಫಸಲಿನಲ್ಲಿ ನದಿ ನೆರೆಯ ನೀರು ನುಗ್ಗಿದೆ.

ಮೂರ್ನಾಲ್ಕು ದಿನಗಳಿಂದಲೂ ಬೆಳೆಯಲ್ಲಿ ನೀರು ನಿಂತಿರುವ ಪರಿಣಾಮ ಬೆಳೆಗಳೆಲ್ಲ ಕೊಳೆಯುವ ಭೀತಿ ಎದುರಾಗಿದೆ. ನಲವತ್ತು-ಐವತ್ತು ಸಾವಿರ ರೂ. ಖರ್ಚುಮಾಡಿ ಜತನದಿಂದ ಬೆಳೆಯಲಾಗಿದ್ದ ಫಸಲು ನೀರಿನಲ್ಲಿ ಮುಳುಗಡೆಯಾಗಿದೆ. ಬಿತ್ತನೆಬೀಜ, ರಸಗೊಬ್ಬರ, ಆಳಿನ ಕೂಲಿ ಸೇರಿದಂತೆ ಬೇಸಾಯಕ್ಕಾಗಿ ಸಾಲಶೂಲ ಮಾಡಿ, ಬಿತ್ತನೆ ಮಾಡಿದ್ದೇವೆ. ಆದರೆ ಈಗ ಪ್ರವಾಹದಲ್ಲಿ ಬೆಳೆ ಕೊಳೆತುಹೋಗುತ್ತಿವೆ.

ಹೀಗಾಗಿ ರೈತರ ಬದುಕು ಪ್ರತಿವರ್ಷವೂ ಹೀಗೆ, ತುಂಗಭದ್ರೆ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದೆ. ಕೂಡಲೇ ವೈಜ್ಞಾನಿಕ ಮಾರ್ಗಸೂಚಿ ಅನ್ವಯ ಪರಿಹಾರ ನೀಡುವ ಮೂಲಕ ಹಾನಿಗೊಳಗಾದ ರೈತ ಕುಟುಂಬಗಳಿಗೆ ನೆರವಾಗಬೇಕು ಎಂದು ರೈತರು ಮನವಿ ಮಾಡಿದರು. ನಿಟ್ಟೂರು, ಕಡತಿ, ವಟ್ಲಹಳ್ಳಿ ಸೇರಿದಂತೆ ವಿವಿಧೆಡೆ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ ನೇತೃತ್ವದ ವಿವಿಧ ಅಧಿ ಕಾರಿಗಳ ತಂಡ ಭೇಟಿ ನೀಡಿ, ಹಾನಿಗೊಳಗಾದ ಬೆಳೆ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ಇದ್ದ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗೆ ಬೆಳೆಹಾನಿ ಬಗ್ಗೆ ಪಾರದರ್ಶಕವಾಗಿ ಸಮೀಕ್ಷೆ ನಡೆಸುವ ಮೂಲಕ ನಿಯಮಾನುಸಾರ ಪರಿಹಾರಕ್ಕಾಗಿ ಸೂಕ್ತ ದಾಖಲೆಗಳೊಂದಿಗೆ ಕೂಡಲೇ ಶಿಫಾರಸು ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಜತೆಗೆ, ಜಮೀನುಗಳಲ್ಲಿ ನೀರು ನುಗ್ಗಿದ ಪರಿಣಾಮ, ಹಾನಿಯಾದ ರೈತರು ಸಹ, ಜಮೀನಿನ ಪಹಣಿ ಹಾಗೂ ಫೋಟೊ ಸೇರಿದಂತೆ ಅ ಧಿಕಾರಿಗಳು ಕೇಳುವ ಸೂಕ್ತ ದಾಖಲೆ ಒದಗಿಸಿ, ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬೇಕು ಎಂದು ಸಂತ್ರಸ್ತ ರೈತರಿಗೆ ಸೂಚಿಸಿದ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ ಅವರು, ಪ್ರಕೃತಿ ವಿಕೋಪ ಪರಿಹಾರ ನಿಯಮಾನುಸಾರ ಪರಿಹಾರ ವಿತರಣೆಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮುಂಗಾರು ಹಂಗಾಮಿನ ಆಗಸ್ಟ್‌ ತಿಂಗಳಲ್ಲಿಯೂ ಮಳೆ ಪ್ರಮಾಣದಲ್ಲಿ ಸಾಕಷ್ಟು ಹೆಚ್ಚಳವಾಗುವ ಸಂಭವ ಇದ್ದು, ನದಿಯಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಬಹುದು. ಹೀಗಾಗಿ ನದಿಪಾತ್ರದ ಜನರು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಹಾಗೂ ಜಾಗೃತಿವಹಿಸುವಂತೆ ರೈತರಿಗೆ ಸೂಚಿಸಿದರು.

ಜತೆಗೆ, ಗ್ರಾಮಲೆಕ್ಕಾಧಿಕಾರಿಗಳು ಕಂದಾಯ ನಿರೀಕ್ಷಕರು ತಮ್ಮ ಕೇಂದ್ರ ಸ್ಥಳದಲ್ಲಿಯೇ ಹಾಜರಿದ್ದು, ಇನ್ನೂ ಎರಡು ತಿಂಗಳು ಕಾಲ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಜ್ಜಾಗಿರಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ನಂದೀಶ್‌, ತೆಲಿಗಿ ಹೋಬಳಿಯ ಉಪತಹಶೀಲ್ದಾರ್‌ ಮಂಜುಳಾ, ಕೃಷಿ ಇಲಾಖೆ ಅಧಿ ಕಾರಿ ಬೀರಪ್ಪ ಹಾಗೂ ಅಬ್ದುಲ್‌ ಸಾಲಿಯಾನ್‌, ತೋಟಗಾರಿಕೆ ಇಲಾಖೆಯ ರವೀಂದ್ರ ಹಿರೇಮಠ, ತೆಲಿಗಿ ಹೋಬಳಿ ಕಂದಾಯ ನಿರೀಕ್ಷಕ ದರಸಪ್ಪನವರ ರಾಜಪ್ಪ, ಹಲುವಾಗಲು ಗ್ರಾಮ ಪಂಚಾಯಿತಿ ಅಧ್ಯಕ್ಷ ದ್ಯಾಮಪ್ಪ ಹಾಗೂ ನಿಟ್ಟೂರು, ಹಲುವಾಗಲು ವೃತ್ತದ ಗ್ರಾಮಲೆಕ್ಕಾ ಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.