ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ : ಬಿ.ಸಿ.ಪಾಟೀಲ್
Team Udayavani, Jul 28, 2021, 12:53 PM IST
ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾಗಿದ್ದಾರೆಯೇ ಹೊರತು ಪಕ್ಷವಲ್ಲ.ಈಗಲೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದೆ ಎಂದು ಮಾಜಿ ಸಚಿವ ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಿಯೋಜಿತ ಸಿಎಂ ಬಸವರಾಜಬೊಮ್ಮಾಯಿ ಅವರನ್ನಿಂದು ಭೇಟಿ ಮಾಡಿ ಶುಭಕೋರಿದ ಬಿ.ಸಿ.ಪಾಟೀಲ್, ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ನೂತನ ಸಿಎಂ ಅವರು ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಬಿಜೆಪಿಯಲ್ಲಿಯೇ ಇದ್ದಾರೆ. ಪಕ್ಷಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನವಿದೆ. ಮುಂದೆಯೂ ಕೂಡ ಬಿಜೆಪಿಯೇ ಆಡಳಿತಕ್ಕೆ ಬರುತ್ತದೆ. ನಾವು ಮಂತ್ರಿಯಾಗಿ ಮುಂದುವರೆಯುತ್ತೇವೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನಮಾಡುತ್ತಾರೆ.
ಯಡಿಯೂರಪ್ಪನವರ ಮಾರ್ಗದರ್ಶನ ಎಲ್ಲರಿಗೂ ಇದ್ದೇ ಇರುತ್ತದೆ. ಹಾಗೆಂದ ಮಾತ್ರಕ್ಕೆ ಅದು ಶಾಡೋ ಎಂದು ಭಾವಿಸುವುದು ತಪ್ಪು. ಯಡಿಯೂರಪ್ಪ ಹಿರಿಯರು ಅನುಭವಿಗಳು ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇವೆಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದರಂತೆ ಅವರು ನಡೆಯುತ್ತಾರೆ. ನಾವು ಸಚಿವ ಸ್ಥಾನಕ್ಕಾಗಿ ಯಾರ ಮೇಲೂ ಒತ್ತಡ ತರುವುದಿಲ್ಲ. ಬೆಂಗಳೂರು ನಂಬಿ ಬಂದಿದ್ದೇವೆ. ದೆಹಲಿ ವರಿಷ್ಠರು ಆಶೀರ್ವಾದ ಮಾಡುತ್ತಾರೆಂದು ಬಿಸಿಪಿ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ