ಶಾಲೆಗೆ ಬೀಗ; ಓದು ಮರೆತು ದನ ಕಾಯ್ತಿದ್ದಾರೆ ಮಕ್ಕಳು!

ಹಸಿವಿಗೆ ಹೆದರಿದ ಪೋಷಕರು ಹಸುಗಳ ಹಿಂದೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ.

Team Udayavani, Aug 2, 2021, 6:03 PM IST

ಶಾಲೆಗೆ ಬೀಗ; ಓದು ಮರೆತು ದನ ಕಾಯ್ತಿದ್ದಾರೆ ಮಕ್ಕಳು!

ವಾಡಿ: ಶಾಲೆಗೆ ಬೀಗ ಬಿದ್ದು ವರ್ಷಗಳೇ ಕಳೆದಿವೆ. ತರಗತಿ ಕೋಣೆಗಳಲ್ಲೀಗ ಮದ್ಯದ ಬಾಟಲಿಗಳು ಬಿದ್ದಿವೆ. ಆಟದ ಅಂಗಳದಲ್ಲಿ ದನ-ಕರುಗಳು ಹುಲ್ಲು ಮೇಯುತ್ತಿವೆ. ಪಾಠಗಳಿಂದ ದೂರ ಉಳಿದ ವಿದ್ಯಾರ್ಥಿಗಳು ತಮ್ಮದೇ ಶಾಲೆ ಎದುರು ಹಸುಗಳ ಮಧ್ಯೆ ಮೈಮರೆಯುತಿದ್ದಾರೆ. ಬೂಟು, ಬೆಲ್ಟಾ, ಟಾಯ್‌ ಧರಿಸಿ ಪುಸ್ತಕ ಹಿಡಿದು ಬರುತ್ತಿದ್ದ ಗ್ರಾಮೀಣ ಮಕ್ಕಳು ಈಗ ಊಟದ ಬುತ್ತಿ, ಬೆತ್ತ ಹಿಡಿದು ದನಗಳ ಕಾಯುವಂತಾಗಿದೆ.

ಮಹಾಮಾರಿ ಕೊರೊನಾ ಹಳ್ಳಿಗಾಡಿನ ವಿದ್ಯಾವಂತ ಹುಡುಗರ ಬಾಳಿನ ಮೇಲೆ ಕ್ರೌರ್ಯ ಮೆರೆದಿರುವುದು ವಾಸ್ತವ ಸತ್ಯ. “ಬಾ ಮರಳಿ ಶಾಲೆಗೆ’ ಎನ್ನುತ್ತಿದ್ದ ಸರ್ಕಾರ ಸೋಂಕಿನ ಭೀತಿಯಿಂದ ಶಾಲೆಗೆ ಬೀಗ ಜಡಿದಿದೆ. ಶಾಲೆ, ಶಿಕ್ಷಣ ಮತ್ತು ಶಿಕ್ಷಕರಿಂದ ದೀರ್ಘ‌ ಕಾಲ ದೂರ ಉಳಿದ ಮಕ್ಕಳ ಮಾನಸಿಕ ಸ್ಥಿತಿಮಿತಿ ಹದಗೆಟ್ಟಿದೆ. ಸರಕಾರ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಶಾಲೆಗಳನ್ನು ಬಂದ್‌ ಮಾಡಿದ್ದರೆ, ಹಸಿವಿಗೆ ಹೆದರಿದ ಪೋಷಕರು ಹಸುಗಳ ಹಿಂದೆ ಮಕ್ಕಳನ್ನು
ಕಳುಹಿಸುತ್ತಿದ್ದಾರೆ.

ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಸಮರ್ಪಕವಾದ ಕಾಂಪೌಂಡ್‌ ಇಲ್ಲದ ಕಾರಣ ಮಕ್ಕಳ ಆಟದ ಮೈದಾನ ಅಕ್ಷರಶಃ ಗೋಮಾಳವಾಗಿ ಪರಿವರ್ತನೆಯಾಗಿದೆ. ತಾವು ಪಾಠ ಕೇಳಲು ಬರುತ್ತಿದ್ದ ಶಾಲೆ ಅಂಗಳದಲ್ಲಿ ತಾವೇ ದನ ಕಾಯುವ ಸ್ಥಿತಿ ಬರುತ್ತದೆ ಎಂದು ವಿದ್ಯಾರ್ಥಿಗಳು ಕನಸು ಮನಸ್ಸಿನಲ್ಲೂ ಯೋಚಿಸಿರಲಿಕ್ಕಿಲ್ಲ. ಈ ಮನಕಲುಕುವ ಘಟನೆಗಳು ಪ್ರಸಕ್ತ ಶೈಕ್ಷಣಿಕ ವ್ಯವಸ್ಥೆಗೆ ಹಿಡಿದ ಕನ್ನಡಿಯಂತಾಗಿವೆ. ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಯ ದನಗಳ ಜತೆಗೆ ಊರಿನ ದನಗಳನ್ನು ಕೂಲಿಗಾಗಿ ಕಾಯಲು ಮುಂದಾಗಿದ್ದಾರೆ. ಶಾಲೆಗಳು ಅನೈತಿಕ ಚಟುವಟಿಕೆಗಳ ತಾಣವಾಗಿರುವುದು ಒಂದೆಡೆಯಾದರೆ, ವಿದ್ಯಾರ್ಥಿಗಳು ಜೀವನೋ ಪಾಯಕ್ಕೆ ಅನ್ಯಮಾರ್ಗ ತುಳಿದಿರುವ ಆತಂಕ ಇನ್ನೊಂದೆಡೆಯಾಗಿದೆ.

ಶಾಲೆ ತೆರೆಯದೆ ವರ್ಷವೇ ಕಳೆಯಿತು. ಆಟದ ಅಂಗಳದಲ್ಲಿ ಸಾಕಷ್ಟು ಹುಲ್ಲು-ಮುಳ್ಳುಕಂಟಿ ಬೆಳೆದಿವೆ. ಊರಿನ ಪುಂಡ ಹುಡುಗರೆಲ್ಲ ಸಂಜೆ ಆಗುತ್ತಿದ್ದಂತೆ ಶಾಲೆಗೆ ನುಗ್ಗುತ್ತಾರೆ. ಮದ್ಯ ಕುಡಿದು ಬಾಟಲಿ ಬಿಸಾಡುತ್ತಾರೆ. ಪರಿಣಾಮ ಇಡೀ ಶಾಲೆ ಆವರಣದಲ್ಲಿ ಗಾಜುಗಳು ಹರಡಿಕೊಂಡಿವೆ. ಕಾಂಪೌಂಡ್‌ ನಿರ್ಮಾಣ ಅರ್ಧಂಬರ್ಧ ಆಗಿದ್ದರಿಂದ ದನಕರುಗಳು ಶಾಲೆಗೆ ಬರುತ್ತವೆ. ಶಾಲೆ ವಂಚಿತ ಮಕ್ಕಳು ಅನಿವಾರ್ಯವಾಗಿ ದನ ಕಾಯಲು ಹೋಗುತ್ತಿದ್ದಾರೆ.
ಭೀಮಣ್ಣ ಕೇಸಬಳ್ಳಿ, ಎಸ್‌ಡಿಎಂಸಿ ಅಧ್ಯಕ್ಷ,
ಸರ್ಕಾರಿ ಪ್ರೌಢ ಶಾಲೆ, ರಾವೂರ

*ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.