ಕಾರವಾರ : ಹೊರಗಿನವರಿಗೆ ನೆಗಟಿವ್‌ ವರದಿ ಕಡ್ಡಾಯ

ಧಾರ್ಮಿಕ, ಪ್ರವಾಸಿ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

Team Udayavani, Aug 5, 2021, 6:48 PM IST

uyg

ಕಾರವಾರ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಧಾರ್ಮಿಕ ಸ್ಥಳ, ಮದುವೆ ಕಾರ್ಯಕ್ರಮ, ಪ್ರವಾಸಿ ತಾಣ ಹಾಗೂ ಬೀಚ್‌ಗಳು ಸೇರಿದಂತೆ ಜನ ದಟ್ಟಣೆಯಿರುವ ಪ್ರದೇಶಗಳಲ್ಲಿ ಕೋವಿಡ್‌-19 ಮಾರ್ಗಸೂಚಿ ಪಾಲನೆಯಾಗುತ್ತಿರುವ ಬಗ್ಗೆ ತಹಶೀಲ್ದಾರರು, ಇಒ ಹಾಗೂ ಪಿಡಿಒ ಸೇರಿದಂತೆ ಪೊಲೀಸರು ಸೂಕ್ತವಾಗಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಸೂಚನೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಬುಧವಾರ ನಡೆಸಿದ ಗೂಗಲ್‌ ಮೀಟ್‌ನಲ್ಲಿ ಮಾತನಾಡಿದ ಅವರು, ಕೋವಿಡ್‌ ಸೋಂಕಿನ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕೆಲವು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ದೇವಸ್ಥಾನ ಹಾಗೂ ಇತರೆ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಇಂತಹ ಸ್ಥಳಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದ್ದು, ಅದರ ನಿರ್ವಹಣೆ ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದೆ. ಜೊತೆಗೆ ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಬಾರಿ ಕಡ್ಡಾಯವಾಗಿ ಸ್ಯಾನಿಟೈಜೇಷನ್‌ ಮಾಡಬೇಕು. ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶವಿದೆ. ಕಡ್ಡಾಯವಾಗಿ ಆಯಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಬಗ್ಗೆ ಆಯಾ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೊಬೈಲ್‌ ಸಂಖ್ಯೆಯೊಂದಿಗೆ ಸಂಗ್ರಹಿಸಬೇಕು. ಒಂದುವೇಳೆ ಮದುವೆಯಲ್ಲಿ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್‌ ಪರೀಕ್ಷೆ ಒಳಪಡಿಸಬೇಕು ಎಂದರು.

72 ತಾಸಿನ ನೆಗಟಿವ್‌ ವರದಿ ಕಡ್ಡಾಯ: ಜಿಲ್ಲೆಯ ಗಡಿಭಾಗಗಳಲ್ಲಿ, ರೈಲ್ವೆ ಸ್ಟೇಷನ್‌ಗಳಲ್ಲಿ ಹೊರರಾಜ್ಯದಿಂದ ಬಂದಂತಹ ಜನರ ಮೇಲೆ ಹೆಚ್ಚು ನಿಗಾವಹಿಸುವುದರ ಜೊತೆಗೆ ರಜಿಸ್ಟರ್‌ಗಳನ್ನು ನಿರ್ವಹಿಸಬೇಕು. ವಿಶೇಷವಾಗಿ ಕೇರಳಾ ಹಾಗೂ ಮಹಾರಾಷ್ಟ್ರದಿಂದ ಬರುವ ಜನರು ಕೋವಿಡ್‌ ಲಸಿಕೆ ಪಡೆದರೂ, ಪಡೆಯದಿದ್ದರೂ 72 ಗಂಟೆಯೊಳಗಿನ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗಟಿವ್‌ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಜಿಲ್ಲೆಯ ಪ್ರವಾಸಿ ತಾಣಗಳು, ಬೀಚ್‌ಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಖಚಿತತೆಗೆ ಪ್ರತಿ ಪ್ರವಾಸಿ ತಾಣಕ್ಕೆ ಇಬ್ಬರು ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ. ಇದರೊಂದಿಗೆ ಕೋವಿಡ್‌ ಮಾರ್ಗಸೂಚಿಯ ಕಟ್ಟುನಿಟ್ಟಿನ ಪಾಲನೆ ಜವಾಬ್ದಾರಿಯನ್ನು ಆಯಾ ಪೊಲೀಸ್‌ ವೃತ್ತ ನಿರೀಕ್ಷಕರಿಗೆ ವಹಿಸಲಾಗಿದೆ ಎಂದರು.

ಮಾಸ್ಕ ಕಡ್ಡಾಯ: ಜಿಲ್ಲೆಯ ಸಾರ್ವಜನಿಕರು ಕೋವಿಡ್‌ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸಬೇಕು. ಈ ಮೂಲಕ ಕೋವಿಡ್‌ ನಿಯಂತ್ರಣಕ್ಕೆ ಸಹಕರಿಸಬೇಕು. ಒಂದುವೇಳೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು. ಸರಕಾರ ಹಾಗೂ ಜಿಲ್ಲಾಡಳಿತದಿಂದ ಸೂಚಿಸಿದ ಕೋವಿಡ್‌ ಮಾರ್ಗಸೂಚಿಗಳನ್ನು ಮತ್ತು ಆದೇಶವನ್ನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆಯಂತೆ ಕ್ರಮ ಜರುಗಿಸಲಾಗುತ್ತದೆ ಎಂದರು. ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್‌.ಕೆ. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.