ಕೊವಿಶೀಲ್ಡ್ ಡೋಸ್ ಅಂತರ ತಗ್ಗಿಸಲು ಚಿಂತನೆ
Team Udayavani, Aug 6, 2021, 7:15 AM IST
ಹೊಸದಿಲ್ಲಿ: ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು ಇಳಿಸುವ ಬಗ್ಗೆ ಕೇಂದ್ರ ಸರಕಾರ ಪರಿಶೀಲನೆ ನಡೆಸುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಈ ಅಂತರ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಲಸಿಕೆಯ ಲಭ್ಯತೆ ಹೆಚ್ಚಳವಾಗಿರುವ ಕಾರಣ ಮತ್ತು ಅಂತರ ಹೆಚ್ಚಿರುವ ಕುರಿತು ಟೀಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರಕಾರ ಈ ಚಿಂತನೆ ನಡೆಸುತ್ತಿದೆ. ಪ್ರಸ್ತುತ ಕೊವಿಶೀಲ್ಡ್‌ನ ಒಂದು ಡೋಸ್ ಪಡೆದವರು 12-16 ವಾರಗಳ ಅನಂತರ ಎರಡನೇ ಡೋಸ್ ಪಡೆಯಬೇಕು ಎಂಬ ನಿಯಮ ಜಾರಿಯಲ್ಲಿದೆ. ಭಾರತೀಯ ಲಸಿಕೆ ಸಂಬಂಧಿ ರಾಷ್ಟ್ರೀಯ ತಾಂತ್ರಿಕ ಸಲಹೆ ಸಮಿತಿ (ಎನ್‌ಟಿಎಜಿಐ)ಯ ಸಭೆ ಮುಂದಿನ ವಾರ ನಡೆಯಲಿದ್ದು, ಈಗಾಗಲೇ ಸಂಗ್ರಹಿಸಿರುವ ವೈಜ್ಞಾನಿಕ ದತ್ತಾಂಶಗಳನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಿದೆ. ಕೊವಿಶೀಲ್ಡ್‌ನ ಒಂದೇ ಡೋಸ್ ಕೂಡ ಕೊರೊನಾ ಸೋಂಕಿನ ವಿರುದ್ಧ ಪರಿಣಾಮಕಾರಿ ಎಂಬ ಅಂಶವು ಈಗಾಗಲೇ ಸಾಬೀತಾಗಿದೆ ಎಂದು ಸಮಿತಿಯ ಮುಖ್ಯಸ್ಥ ಡಾ| ಎನ್.ಕೆ. ಅರೋರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ