ಗೋವಾದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಇಳಿಕೆ, ಪ್ರವಾಸಿಗರ ಸಂಖ್ಯೆ ಏರಿಕೆ..!


Team Udayavani, Aug 10, 2021, 1:46 PM IST

Goa Udayavani News

ಪ್ರಾತಿನಿಧಿಕ ಚಿತ್ರ

ಪಣಜಿ : ಗೋವಾದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದಂತೆಯೇ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿನ ವಿವಿಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ರಾಜ್ಯದಲ್ಲಿ ಕ್ಯಾಸಿನೊ ಆರಂಭಗೊಂಡ ನಂತರ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇನ್ನೂ ಹೆಚ್ಚಳವಾಗಲಿದೆ ಎಂದು ಗೋವಾ ಟ್ರಾವೆಲ್ ಆ್ಯಂಡ್ ಟೂರಿಸಂ ಅಸೋಸಿಯೇಶನ್ ಅಭಿಪ್ರಾಯಪಟ್ಟಿದೆ.
ರಾಜ್ಯದಲ್ಲಿ ಸದ್ಯ ವಿವಿಧ ಹೋಟೆಲ್‍ ಗಳಲ್ಲಿ ರೂಂ ಬುಕಿಂಗ್ ಹೆಚ್ಚಳವಾಗುತ್ತಿದೆ. ಸದ್ಯ ಹೋಟೆಲ್ ರೂಂ ಬುಕ್ ಆಗುವ ಪ್ರಮಾಣ ಶೇ 25 ರಿಂದ 30 ಕ್ಕೆ ತಲುಪಿದೆ. ಗೋವಾಕ್ಕೆ ಆಗಮಿಸುವ ಹೆಚ್ಚಿನ ಪ್ರವಾಸಿಗರು ಮುಂಗಡವಾಗಿ ರೂಂ ಬುಕ್ ಮಾಡುತ್ತಿರುವುದು ಹೆಚ್ಚಳವಾಗಿದೆ. ರಾಜ್ಯದಲ್ಲಿ ಈಗಾಗಲೇ ಬಹುತೇಕ ಹೋಟೆಲ್‍ ಗಳು ಆರಂಭಗೊಂಡಿದ್ದರೂ ಕೂಡ ಸಣ್ಣ ಸಣ್ಣ ಹೋಟೆಲ್‍ ಗಳು ಪ್ರವಾಸಿಗರ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ : ಸೆ. 30ರೊಳಗೆ ಈ ನಿಯಮ ಪಾಲಿಸದಿದ್ದಲ್ಲಿ 1000ರೂ. ದಂಡ..! : ಎಸ್ ಬಿ ಐ ಹೇಳಿದ್ದೇನು..?

ರಾಜ್ಯದಲ್ಲಿ ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಸದ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕ್ಯಾಸಿನೊಗಳು ಬಂದ್ ಇವೆ. ಗೋವಾಕ್ಕೆ ಕ್ಯಾಸಿನೊಕ್ಕೆ ಭೇಟಿ ನೀಡಲೆಂದೇ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದಾಗಿ ಕ್ಯಾಸಿನೊ ಆರಂಭಗೊಂಡ ನಂತರ ರಾಜ್ಯಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇನ್ನೂ ಹೆಚ್ಚಳವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಪಣಜಿಯ ಪ್ರಸಿದ್ಧ ಮೇರಿ ಇಮ್ಯಾಕ್ಯುಲೆಟ್ ಚರ್ಚ್, ಮೀರಾಮಾರ್ ಬೀಚ್, ಹಳೇಯ ಸಚಿವಾಲಯ, ದೋನಾಪಾವುಲ್, ಓಲ್ಡ್ ಗೋವಾದ ಹಲವು ಐತಿಹಾಸಿಕ ಸ್ಥಳಗಳು, ಕಲಂಗುಟ್, ಬಾಗಾ, ಹರಮಲ್, ಮಾಂದ್ರೆ, ಬಾಣಾವಲಿ ಸೇರಿದಂತೆ ಪ್ರಮುಖ ಬೀಚ್‍ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಂಡುಬರುತ್ತಿದ್ದಾರೆ. ಸದ್ಯ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವುದು ಕಂಡುಬರುತ್ತಿದೆ.

ಇದನ್ನೂ ಓದಿ :  ‘ಲವ್ ಯೂ ರಚ್ಚು’ ದುರಂತ : ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

ಟಾಪ್ ನ್ಯೂಸ್

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.