ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,353 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಇಳಿಕೆ
ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ 3,12,20,981 ಮಂದಿ ಗುಣಮುಖರಾಗಿದ್ದಾರೆ.
Team Udayavani, Aug 11, 2021, 10:58 AM IST
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,353 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 497 ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಆಗಸ್ಟ್ 11) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮಂಗಳೂರು ಸೇರಿ 12 ನಗರ ಮುಳುಗಡೆ?
ದೇಶದಲ್ಲಿ ಕೋವಿಡ್ ನಿಂದ ಈವರೆಗೆ 4,29,179 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,86,351ಕ್ಕೆ ಇಳಿಕೆಯಾಗಿದ್ದು, ಇದು ಕಳೆದ 140 ದಿನಗಳ ನಂತರದ ಕನಿಷ್ಠ ಪ್ರಮಾಣವಾಗಿದೆ.
ಕಳೆದ 24ಗಂಟೆಗಳಲ್ಲಿ 2,157 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 40,013 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ 3,12,20,981 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.45ರಷ್ಟಿದೆ. ದಿನದ ಪಾಸಿಟಿವಿಟಿ ದರ 2.16ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.2.34ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶ ತಿಳಿಸಿದೆ. ಈವರೆಗೆ ದೇಶದಲ್ಲಿ 51.90 ಕೋಟಿ ಡೋಸ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ