ಮಲಪ್ರಭೆ ತೀರದ ಕೆರೆಗೆ ಘಟಪ್ರಭೆ ನೀರು

13 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಂಜೂರು|ಕೋಟೆಕಲ್‌ ಕೆರೆಗೆ ಹರಿಯಲಿದೆ ನೀರು

Team Udayavani, Aug 12, 2021, 1:35 PM IST

rgwr

ವಿಶೇಷ ವರದಿ

ಬಾಗಲಕೋಟೆ: ಜಿಲ್ಲೆಯ ಬಾದಾಮಿ ಮತಕ್ಷೇತ್ರ ವ್ಯಾಪ್ತಿಯ ಮಲಪ್ರಭಾ ತೀರದ ಕೆರೆಗಳಿಗೆ ಘಟಪ್ರಭಾ ನದಿಯ (ಆಲಮಟ್ಟಿ ಡ್ಯಾಂ ಹಿನ್ನೀರು) ತುಂಬಿಸುವ ಮಹತ್ವದ ಯೋಜನೆಗೆ ಮಂಜೂರಾತಿ ಕೊಡಿಸುವಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಸಣ್ಣ ನೀರಾವರಿ ಇಲಾಖೆ ಮತ್ತು ಜಿಪಂನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಇರುವ 13 ಕೆರೆಗಳಿಗೆ ನೀರು ತುಂಬಿಸಲು ಕೃಷ್ಣಾ ಭಾಗ್ಯ ಜಲ ನಿಗಮದ ಬೋರ್ಡ್‌ ಸಭೆಯಲ್ಲಿ ಈ ಮಹತ್ವದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಬಾದಾಮಿ ಕ್ಷೇತ್ರದ ಕೋಟೆಕಲ್‌, ಕೆಲವಡಿ, ತಿಮ್ಮಸಾಗರ, ತೊಗುಣಶಿ, ತೊಗುಣಶಿ ತಾಂಡಾ, ಹಿರೇಬೂದಿಹಾಳ, ತೆಗ್ಗಿ, ಹಂಸನೂರ, ಹಂಗರಗಿ, ಲಿಂಗಾಪುರ, ಶಿರೂರ, ನೀಲಾನಗರ ಗ್ರಾಮಗಳ ಒಟ್ಟು 13 ಸಣ್ಣ ನೀರಾವರಿ ಹಾಗೂ ಜಿಪಂ ಕೆರೆಗಳಿಗೆ ಆಲಮಟ್ಟಿ ಅಣೆಕಟ್ಟಿನ ಹಿನ್ನೀರಿನಿಂದ (ಮಹಾರುದ್ರಪ್ಪನ ಹಳ್ಳದ) (ಘಟಪ್ರಭಾ ನದಿಯಿಂದ) ಪೈಪ್‌ಲೈನ್‌ ಮೂಲಕ ನೀರು ತುಂಬಿಸುವ ಯೋಜನೆಯ ಕ್ರಿಯಾ ಯೋಜನೆ ರೂಪಿಸಲಾಗಿದೆ.

ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುವ ಮೊದಲು ಕೃಷ್ಣಾ ಭಾಗ್ಯ ಜಲ ನಿಗಮದ 130ನೇ ಬೋರ್ಡ್‌ ಸಭೆಯಲ್ಲಿ 82 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ. ಈ ಭಾಗದ ಕೆರೆಗೆ ನೀರು ತುಂಬಿಸುವುದರಿಂದ ಜನ-ಜಾನುವಾರುಗಳು, ರೈತರಿಗೆ ಬಹಳ ಅನುಕೂಲಕರವಾಗಲಿದೆ ಎಂದು ಯುವ ಮುಖಂಡ ಹೊಳಬಸು ಶೆಟ್ಟರ ತಿಳಿಸಿದ್ದಾರೆ. ಮಹತ್ವದ ಕೆರೆಗಳು: ಗುಳೇದಗುಡ್ಡ ಸಮೀಪದ ಕೋಟಿಕಲ್‌ ಕೆರೆ ಅದ್ಭುತವಾಗಿದ್ದು, ನೀರಿಲ್ಲದೇ ಸೊರಗಿದೆ. ಅಲ್ಲದೇ ಬಾಗಲಕೋಟೆ ತಾಲೂಕಿನ ಶಿರೂರ ಬಳಿಯ ನೀಲಾನಗರದ ಕೆರೆ ಸೇರಿದಂತೆ ಬಾದಾಮಿ ಕ್ಷೇತ್ರದ ಬೆಡ್ಡ-ಗುಡ್ಡಗಳ ಮಧ್ಯ ಅದ್ಭುತ ಕೆರೆಗಳಿದ್ದು, ನೀರು ತುಂಬಿಸುವ ಯೋಜನೆ ಅಗತ್ಯವಿತ್ತು. ಈ ಬೇಡಿಕೆ ಅರಿತ ಕ್ಷೇತ್ರದ ಶಾಸಕ ಸಿದ್ದರಾಮಯ್ಯ, ಬರೋಬ್ಬರಿ 82 ಕೋಟಿ ಮೊತ್ತದ ಮಹತ್ವ ಯೋಜನೆಗೆ ಮಂಜೂರಾತಿ ಪಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಈಗಾಗಲೇ ಕೆಂದೂರ ಕೆರೆಗೆ ನೀರು ತುಂಬಿಸುವ ಯೋಜನೆ ಕೂಡ ಕೈಗೊಳ್ಳಲಾಗುತ್ತಿದ್ದು, ಇದರಿಂದ ಕೆಂದೂರ ಸುತ್ತಲಿನ ಗ್ರಾಮಗಳಿಗೆ ಅನುಕೂಲವಾಗಲಿದೆ.

ಕೆರೆಗಳಿಗೆ ತುಂಬಲಿ ಜೀವಜಲ: ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ 63 ಹಾಗೂ ಜಿಪಂ ಅಡಿ 172 ಕೆರೆಗಳಿದ್ದು, ಬಹುತೇಕ ಕೆರೆಗಳಿಗೆ ನೀರಿನ ಅಭಾವವಿದೆ. ಜಿಲ್ಲೆಯಲ್ಲಿ ಕೃಷ್ಣೆ, ಘಟಪ್ರಭೆ ಹಾಗೂ ಮಲಪ್ರಭೆ ಸಹಿತ ತ್ರಿವೇಣಿ ನದಿಗಳಿದ್ದು, ಮೂರು ನದಿಗಳ ಎಡ-ಬಲ ಕಾಲುವೆಗಳೂ ಇವೆ. ಹೀಗಾಗಿ ಕೆರೆಗಳಿಗೆ ನೀರು ತುಂಬಿಸಲು ಅಷ್ಟೊಂದು ಕಷ್ಟದ ಕೆಲಸವೇನಲ್ಲ. ಕಾಲುವೆಗಳ ಪಕ್ಕ ಹಾಗೂ ನದಿ ಸಮೀಪ ಇರುವ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಮಹತ್ವದ ನಿರ್ಧಾರ ಮಾಡಬೇಕಿದೆ. ಜಿಲ್ಲೆಯ ಮೂರು ನದಿಗಳ ಪ್ರವಾಹ ಬಂದಾಗ, ಜೀವಜಲ ಯಥೇತ್ಛವಾಗಿ ಹರಿದು ಹೋಗುತ್ತಿದ್ದು, ಆ ನೀರು ಸದ್ಬಳಕೆ ಮಾಡಿಕೊಳ್ಳಬೇಕಿದೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.