ಅಂತಿಮ ತೀರ್ಮಾನದ ಅಧಿಕಾರ ಆಯೋಗಕ್ಕಿದೆ

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ; ಹೈಕೋರ್ಟ್‌ಗೆ ಸರ್ಕಾರ ಸ್ಪಷ್ಟನೆ

Team Udayavani, Aug 14, 2021, 2:19 PM IST

ಅಂತಿಮ ತೀರ್ಮಾನದ ಅಧಿಕಾರ ಆಯೋಗಕ್ಕಿದೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಅವಧಿ ಮುಗಿದ ರಾಜ್ಯದ ಹಲವು ನಗರ ಸಂಸ್ಥೆ ಯ ಸಂಸ್ಥೆಗಳಿಗೆ ನಿಗದಿತ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವ ಸಂಬಂಧ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಲು ಹೈಕೋರ್ಟ್‌ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ಎ.ಎಸ್‌.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಶುಕ್ರವಾರ ಸರ್ಕಾರ ಈ ಮಾಹಿತಿ ನೀಡಿತು.

ನಗರ ಸ್ಥಳೀಯಸಂಸ್ಥೆಗಳು ಸೇರಿ ಎಲ್ಲಾ ಚುನಾವಣೆಗಳನ್ನು 2021ರ ಡಿಸೆಂಬರ್‌ ಅಂತ್ಯದವರೆಗೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಸಚಿವ ಸಂಪುಟ ಮೇ 17ರಂದು ಕೈಗೊಂಡಿದ್ದ ನಿರ್ಣಯಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಹೈಕೋರ್ಟ್‌, ಈ ಬಗ್ಗೆ ಸಮರ್ಥನೆ ನೀಡುವಂತೆ ಕಳೆದ ಬಾರಿಯ ವಿಚಾರಣೆ ವೇಳೆ ರಾಜ್ಯ ಸರ್ಕಾರಕ್ಕೆ ಹೇಳಿತ್ತು.

ಇದನ್ನೂ ಓದಿ:ರಂಜನ್ ದೇಶಪ್ರೇಮಕ್ಕೆ ಸಲಾಂ…ಒಂದು ಲಕ್ಷಕ್ಕೂ ಅಧಿಕ ರಾಷ್ಟ್ರಧ್ವಜ ಸಂಗ್ರಹ; ಏನಿದರ ಉದ್ದೇಶ?

ಅದರಂತೆ, ಶುಕ್ರವಾರ ಅರ್ಜಿ ವಿಚಾರ ಣೆಗೆ ಬಂದಾಗ ಸರ್ಕಾರದ ಪರ ಹಾಜರಾದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ್‌ ಕೆ.ನಾವದಗಿ, ಮೇ ತಿಂಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆ ಉತ್ತುಂಗದಲ್ಲಿತ್ತು. ಒಂದು ಹಂತದಲ್ಲಿ ದಿನಕ್ಕೆ40 ಸಾವಿರಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳು ದಾಖಲಾಗಿತ್ತು. ಪಾಸಿಟಿವಿಟಿ ದರ ಶೇ.39ರ ಅಸುಪಾಸಿನಲ್ಲಿತ್ತು. ಹಾಗಾಗಿ, ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಚುನಾವಣೆ ನಡೆಸಲು ಆಯೋಗ ಸರ್ಕಾರದ ಆಡಳಿತ ಯಂತ್ರವನ್ನು ಅವಲಂಬಿಸಿದೆ.

ಮೇ ತಿಂಗಳಲ್ಲಿ ಅಧಿಕಾರಿಗಳು ಕೋವಿಡ್‌ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದರು. ಹಾಗಾಗಿ, ಆಗಿನ ಪರಿಸ್ಥಿತಿಯ ಹಿನ್ನಲೆಯಲ್ಲಿ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು ಎಂದು ಸರ್ಕಾರದ ನಿಲುವು ಸಮರ್ಥಿಸಿಕೊಂಡರು. ಅಡ್ವೋಕೇಟ್‌ ಜನರಲ್‌ ಹೇಳಿಕೆಯನ್ನು ದಾಖಲಿಸಿಕೊಂಡು, ಚುನಾವಣೆ ಮುಂದೂಡುವ ರಾಜ್ಯ ಸರ್ಕಾರದ ತೀರ್ಮಾನ ಒಪ್ಪುವುದು, ಬಿಡುವುದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.