ಅಫ್ಗಾನಿಸ್ತಾನ :  ಜಲಾಲಾಬಾದ್‌ ನಿರಾಯಾಸವಾಗಿ ತಾಲಿಬಾನ್ ವಶಕ್ಕೆ..!

'ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ : ಅಫ್ಗಾನ್ ಅಧಿಕಾರಿ

Team Udayavani, Aug 15, 2021, 11:34 AM IST

Taliban occupied afghanistan jalalabad

ಕಾಬೂಲ್ : ರಾಜಧಾನಿ ಕಾಬೂಲ್‌ ಅನ್ನು ವಶಪಡಿಸಿಕೊಂಡ ಬೆನ್ನಿಗೆ ತಾಲಿಬಾನ್, ಅಫ್ಗಾನಿಸ್ತಾನದ ಪೂರ್ವ ಭಾಗದ ಪ್ರಮುಖ ನಗರವಾದ ಜಲಾಲಾಬಾದ್‌ ಅನ್ನು ತಾಲಿಬಾನ್‌ ಇಂದು(ಆದಿತ್ಯವಾರ, ಆಗಸ್ಟ್ 15) ಬೆಳಿಗ್ಗೆ ವಶಪಡಿಸಿಕೊಂಡಿದೆ.

ಜಲಾಲಾಬಾದ್‌ ನಲ್ಲಿ ಅಫ್ಗಾನಿಸ್ತಾನ ಸೇನೆ ತಾಲಿಬಾನ್‌ ಗೆ ಯಾವುದೇ ಪ್ರತಿರೋಧ ಒಡ್ಡಿಲ್ಲವೆಂದು ತಿಳಿದುಬಂದಿದ್ದು,  ಹೀಗಾಗಿ, ಜಲಾಲಾಬಾದ್‌ ನಗರವು ಯಾವುದೇ ಪರಿಶ್ರಮವಿಲ್ಲದೇ ತಾಲಿಬಾನ್‌ ಪಾಲಾಗಿದೆ.

ಇದನ್ನೂ ಓದಿ :  47 ಕೋಟಿ ರೂ. ಅತಿವೃಷ್ಠಿ ಹಾನಿ ಪರಿಹಾರಕ್ಕೆ ಪ್ರಸ್ತಾವನೆ: ಸಚಿವ  ಶಂಕರ ಪಾಟೀಲ

ಈ ಮೂಲಕ ಅಫ್ಗಾನಿಸ್ತಾನದಲ್ಲಿ ಘರ್ಷಣೆಗೆ ಅಂತ್ಯ ಕಾಣುವ ಲಕ್ಷಣ ಕಾಣಿಸಿಕೊಳ್ಳುತ್ತಿದೆ.

ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ ನನ್ನು ವಶಪಡಿಸಿಕೊಂಡು, ಬಹುತೇಕ ಇಡೀ ಅಫ್ಗಾನಿಸ್ತಾನವನ್ನು ಸುತ್ತುವರಿಯುವುದಕ್ಕೆ ದಾಪುಗಾಲು ಇಡುತ್ತಿದೆ.

ಜಲಾಲಾಬಾದ್ ನನ್ನು ತಾಲಿಬಾನ್ ಉಗ್ರ ಸಂಘಟನೆ ವಶಪಡಿಸಿಕೊಂಡ ಬೆನ್ನಿಗೆ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ ಗೆ ಪ್ರತಿಕ್ರಿಯಿಸಿದ ಅಫ್ಗಾನ್‌ ಅಧಿಕಾರಿಯೊಬ್ಬರು, ‘ಜಲಾಲಾಬಾದ್‌ನಲ್ಲಿ ಯಾವುದೇ ಘರ್ಷಣೆಗಳು ನಡೆಯುತ್ತಿಲ್ಲ. ಏಕೆಂದರೆ, ರಾಜ್ಯಪಾಲರು ತಾಲಿಬಾನ್‌ಗೆ ಶರಣಾಗಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನು,  ಅಫ್ಘಾನಿಸ್ಥಾನವನ್ನು ತನ್ನ ಮುಷ್ಟಿಗೆ ಪಡೆಯಲು ಸನ್ನದ್ಧವಾಗಿರುವ ತಾಲಿಬಾನ್‌, ಈಗ ಸಂಧಾನಕ್ಕೆ ಹೊಸ ಷರತ್ತುಗಳನ್ನು ವಿಧಿಸಿದೆ. ಉಗ್ರರು ವಿಧಿಸಿರುವ ಷರತ್ತು ಅಫ್ಘಾನ್‌ನ ಅಶ್ರಫ್ ಘನಿ ನೇತೃತ್ವದ ಸರಕಾರಕ್ಕೆ “ನುಂಗಲಾರದ ತುತ್ತಾಗಿ’ ಪರಿಣಮಿಸಿದೆ.

ಸಂಧಾನದ ಮೂಲಕ ಶಾಂತಿ ಕಾಪಾಡುವ ವಿಚಾರಕ್ಕೆ ಸಂಬಂಧಿಸಿ ಜಾಗತಿಕ ಒತ್ತಡ ಹೆಚ್ಚಿರುವಂತೆಯೇ, ತಾಲಿಬಾನ್‌ ಹೊಸ ಷರತ್ತುಗಳ ಮೂಲಕ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಜೈಲಲ್ಲಿರುವ ಉಗ್ರರ ಬಿಡುಗಡೆ, ಹೊಸ ಸರಕಾರದಲ್ಲಿ ಪ್ರಮುಖ ಎಲ್ಲ ಹುದ್ದೆಗಳಿಗೆ ಬೇಡಿಕೆ ಹಾಗೂ ವಿಶ್ವಸಂಸ್ಥೆಯ “ಉಗ್ರ ಪಟ್ಟಿ’ಯಿಂದ ಹೊರಗಿಡುವಂತೆ ಷರತ್ತು ವಿಧಿಸಿದೆ. ವಿಶೇಷವೆಂದರೆ, ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಭಯೋತ್ಪಾದನೆಯ ಬೆಂಬಲಿಗರು ಎಂದು ಪಟ್ಟಿ ಮಾಡುವ 1267 ನಿರ್ಬಂಧ ಸಮಿತಿಯ ನೇತೃತ್ವವನ್ನು ಸದ್ಯ ಭಾರತ ಹೊತ್ತಿದೆ.

ಇದನ್ನೂ ಓದಿ : ಧ್ವಜಾರೋಹಣಕ್ಕೆ ಬಂದ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ ಮಹಿಳಾ ಘಕದಿಂದ ಘೇರಾವ್!

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.