ಅವೈಜ್ಞಾನಿಕವಾಗಿ ಸಾಗುತ್ತಿರುವ ಹೆದ್ದಾರಿ ಕಾಮಗಾರಿ: ಸುಮಲತಾ

Team Udayavani, Aug 19, 2021, 4:28 PM IST

ಅವೈಜ್ಞಾನಿಕವಾಗಿ ಸಾಗುತ್ತಿರುವ ಹೆದ್ದಾರಿ ಕಾಮಗಾರಿ: ಸುಮಲತಾ

ಮದ್ದೂರು: ಜಿಲ್ಲೆಯ ರೈತರ ಮತ್ತು ಸಾರ್ವಜನಿಕರ ದೂರಿನ ಮೇರೆಗೆ ಮೇಲ್ಸೇತುವೆ ಅವ್ಯವಸ್ಥೆ ಕಾಮಗಾರಿ ಕುರಿತಾಗಿ ಕೇಂದ್ರ ಸಚಿವರೊಟ್ಟಿಗೆ
ಚರ್ಚಿಸಿರುವುದಾಗಿ ಸಂಸದೆ ಸುಮಲತಾ ಅಂಬರೀಶ್‌ ತಿಳಿಸಿದರು.

ಶಿಂಷಾ ನದಿಗೆ ನಿರ್ಮಿಸಿರುವ ಮೇಲ್ಸೇತುವೆ ಬದಿ ಸರ್ವಿಸ್‌ ರಸ್ತೆ ನಿರ್ಮಾಣ ಕೈಬಿಟ್ಟಿರುವ ಕುರಿತಾಗಿ ತಾಲೂಕಿನ ಕೆ.ಕೋಡಿಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಅವರು, ಸ್ಥಳೀಯರಿಂದ ಅಹವಾಲು ಸ್ವೀಕರಿಸಿದರು.
ಬಳಿಕ ಮಾತನಾಡಿ, ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿಯು ವೈಜ್ಞಾನಿಕ ರೀತಿಯಲ್ಲಿ ಸಾಗುತ್ತಿಲ್ಲ. ಕೆಲವೆಡೆ ಸರ್ವಿಸ್‌ ರಸ್ತೆಗಳೂ ಸೇರಿದಂತೆ ಗ್ರಾಮಗಳನ್ನು ಸಂಪರ್ಕಿಸುವ ಒಳ ಪ್ರವೇಶ ಮತ್ತು ಹೊರ ಹೋಗುವ ಅಂಡರ್‌ ಪಾಸ್‌ಗಳ ಸಂಪರ್ಕ ವ್ಯವಸ್ಥೆಯನ್ನು
ಕೈಬಿಟ್ಟಿರುವುದಾಗಿ ದೂರಿದರು.

ಇದನ್ನೂ ಓದಿ:ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಷರತ್ತುಬದ್ಧ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ಕೇಂದ್ರ ಭೂ ಸಾರಿಗೆ ಸಚಿವ ನಿತೀನ್‌ ಗಡ್ಕರಿ ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಅವ್ಯವಸ್ಥೆಗಳ ಕುರಿತಾಗಿ ಚರ್ಚಿಸಿದ್ದು, ಸರಿಪಡಿಸುವ ಸಂಬಂಧ ಭರವಸೆ ನೀಡುತ್ತಿರುವ ಕುರಿತು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಸಂಬಂಧ ಹಾಗೂ ಎತ್ತಿದಾಗಲೆಲ್ಲ ಕೆಲವರು ಅದನ್ನು ಬೇರೆ ರೀತಿಯೇ ಬಿಂಬಿಸುತ್ತಿದ್ದು, ಹೆದ್ದಾರಿ ಕಾಮಗಾರಿಗೆ ತಡೆ ಮಾಡುತ್ತಿದ್ದಾರೆಂಬ ಅರ್ಥ ಬರುವ ರೀತಿ ಬಿಂಬಿಸುತ್ತಿರುವುದಾಗಿ ಯಾರ ಹೆಸರೇಳದೆ ಆರೋಪಿಸಿದರು.

ಸರ್ವಿಸ್‌ ರಸ್ತೆ ಕೈಬಿಟ್ಟಲ್ಲಿ ಆತ್ಮಹತ್ಯೆ: ಕೆ.ಕೋಡಿಹಳ್ಳಿ, ಅಗರಲಿಂಗನದೊಡ್ಡಿ, ಹುಣಸೇಮರದದೊಡ್ಡಿ, ತೈಲೂರು, ಮಾದನಾಯಕನಹಳ್ಳಿ ಒಳಗೊಂಡಂತೆ ಎಂಟತ್ತು ಹಳ್ಳಿಗಳ ಸಾರ್ವಜನಿಕರು ಶಿಂಷಾ ನದಿಗೆ ಸರ್ವಿಸ್‌ ರಸ್ತೆ ನಿರ್ಮಿಸಿದ ಹೊರತಾಗಿ 6 ಕಿ.ಮೀ. ಹೆಚ್ಚು ದೂರವನ್ನು ಸೋಮನಹಳ್ಳಿ ಮಾರ್ಗವಾಗಿ ಕ್ರಮಿಸಬೇಕಾದ ಆತಂಕ ತೋಡಿಕೊಂಡ ರೈತರ ಗುಂಪಿನಲ್ಲಿದ್ದ ನೀಲೇಗೌಡ, ಸರ್ವಿಸ್‌ ರಸ್ತೆ ಕೈಬಿಟ್ಟಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಂಸದೆ ಸುಮಲತಾ, ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳಕ್ಕೆಕರೆಯಿಸಿ ಶಿಂಷಾನದಿಗೆ ಸರ್ವಿಸ್‌ ರಸ್ತೆ ನಿರ್ಮಾಣ ಸಂಬಂಧ ಕ್ರಮವಹಿಸುವ ಭರವಸೆ ನೀಡಿದರು. ಮನ್‌ಮುಲ್‌ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಪಿ. ಅಮರ್‌ಬಾಬು, ಗ್ರಾಪಂ ಸದಸ್ಯರಾದ ಸುಜಾತ, ಸರಸ್ವತಿ, ಮುಖಂಡರಾದ ಧರಣಿ, ಮಹದೇವಯ್ಯ, ಅಪ್ಪೇಗೌಡ , ಮರೀಗೌಡ, ಶಂಕರ್‌, ಶಿವರಾಜು, ಸುರೇಂದ್ರ, ಶಿವಣ್ಣ, ಪ್ರದೀಪ್‌, ವೆಂಕಟೇಶ್‌ ಇತರರಿದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.