ನಾರಾಯಣ ಗುರುಗಳಿಂದ ವಿಶ್ವ ಮಾನವ ಸಂದೇಶ:ವೀರಮಲ್ಲಪ್ಪ

Team Udayavani, Aug 24, 2021, 6:33 PM IST

24-14

ದಾವಣಗೆರೆ: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವವನ್ನು ಪ್ರತಿಪಾದಿಸಿ ವಿಶ್ವ ಮಾನವ ಸಂದೇಶವನ್ನು ಕೇರಳದಿಂದ ಪ್ರಾರಂಭ ಮಾಡಿ, ದೇಶದೆಲ್ಲೆಡೆ ಪಸರಿಸಿದ ಮಹಾನ್‌ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳಾಗಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಮಾತನಾಡಿದರು. ಸಾಮಾಜಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಒತ್ತು ನೀಡುವುದರ ಮೂಲಕ ಸಮಾಜದಲ್ಲಿ ಸುಧಾರಣೆ ತರಲು ಯತ್ನಿಸಿದರು ಎಂದರು. ಹದಿನೆಂಟು ಮತ್ತು ಹತ್ತೂಂಭತ್ತನೇ ಶತಮಾನದ ಬ್ರಿಟಿಷ್‌ ಆಳ್ವಿಕೆಯಲ್ಲಿ ಭಾರತೀಯರು ಗುಲಾಮರಾಗಿದ್ದ ಇತಿಹಾಸವಿದೆ.

ಕೇರಳದ ಬಹುಸಂಖ್ಯಾತ ಈಳವ ಜನಾಂಗದವರನ್ನು ಅಸ್ಪಶ್ಯ ವರ್ಗವೆಂದು ಪರಿಗಣಿಸಲಾಗುತ್ತಿತ್ತು, ಹೀಗಾಗಿ ಅವರಿಗೆ ದೇವಾಲಯಗಳಿಗೆ ಪ್ರವೇಶವಿರಲಿಲ್ಲ. ಸಾಮಾಜಿಕ ಕ್ರೂರ ಶೋಷಣೆಗೆ ಒಳಗಾದ ಕೆಳ ವರ್ಗದವರಿಗಾಗಿ ನಾರಾಯಣ ಗುರುಗಳು ಅರವಿಪುರಂನಲ್ಲಿ 1888ರಲ್ಲಿ ಮೊಟ್ಟ ಮೊದಲು ಶಿವರಾತ್ರಿ ದಿನದಂದು ಶಿವಲಿಂಗ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಿ ದಲಿತರಿಗೆ ಪ್ರವೇಶಿಸುವ, ಪೂಜೆ ಮಾಡುವ ವ್ಯವಸ್ಥೆ ಮಾಡಿದರು.

ಕ್ರಿಶ 1912ರಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಭಾರತ ಮತ್ತು ಶ್ರೀಲಂಕಾದಲ್ಲಿ ಒಟ್ಟು 79 ದೇವಾಲಯಗಳನ್ನು ಸ್ಥಾಪಿಸಿದ ಸಮಾನತೆಯ ಹೋರಾಟ ಮುಂದೆ ಸಾಮಾಜಿಕ ಮತ್ತು ಧಾರ್ಮಿಕ ಪರಿವರ್ತನೆಗೆ ಕಾರಣವಾಯಿತು ಎಂದು ಸ್ಮರಿಸಿದರು. ವಿಶ್ವ ಕವಿ ರವೀಂದ್ರನಾಥ ಠ್ಯಾಗೋರ್‌ ಕೂಡ ಕೇರಳದ ನಾರಾಯಣ ಗುರುಗಳಿಗೆ ಸರಿಸಮಾನರಾದ ಮಹಾಪುರುಷರನ್ನು ಕಂಡಿಲ್ಲ ಎಂದು ಉದ್ಗರಿಸಿದ್ದರು.

ಗಾಂಧೀಜಿಯವರು ಹರಿಜನೋದ್ಧಾರಕ್ಕೆ ಸ್ಫೂರ್ತಿ ಪಡೆದದ್ದು ನಾರಾಯಣ ಗುರುಗಳಿಂದ. ಹಾಗಾಗಿ ನಾರಾಯಣ ಗುರುಗಳ ಸಾಮಾಜಿಕ ಕಾರ್ಯಕ್ರಮಗಳಿಗೂ ಮತ್ತು ಗಾಂಧೀಜಿಯವರ ಸಾಮಾಜಿಕ ಚಟುವಟಿಕೆ ಹೋಲಿಕೆಯನ್ನು ರೋಮನ್‌ ಕ್ಯಾಲೆಂಡರ್‌ನಲ್ಲಿ ಕಾಣಬಹುದು ಎಂದು ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ಬಿ. ಆನಂದ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಬ್ರಹ್ಮರ್ಷಿ ನಾರಾಯಣಗುರು ಸಮಾಜದ ಅಧ್ಯಕ್ಷ ಎಚ್‌. ಶಂಕರ್‌, ಕಾರ್ಯದರ್ಶಿ ಎ. ನಾಗರಾಜ್‌, ಉಪಾಧ್ಯಕ್ಷ ಶಾಂತಾರಾಮ್‌, ಸಿ.ವಿ. ರವೀಂದ್ರಬಾಬು, ಖಜಾಂಚಿ ಇ. ದೇವೇಂದ್ರಪ್ಪ, ಜಂಟಿ ಕಾರ್ಯದರ್ಶಿ ಇ. ಭರಮಪ್ಪ, ನಿರ್ದೇಶಕರಾದ ರಾಜಣ್ಣ, ಮಹಾಬಲೇಶ್‌, ರಾಮದಾಸ್‌ ಇತರರು ಉಪಸ್ಥಿತರುಇದ್ದರು.

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.