3ನೇ ಅಲೆ ಭೀತಿ ನಡುವೆ ಸುಧಾರಣೆ ಪರ್ವ


Team Udayavani, Aug 26, 2021, 6:59 PM IST

26-18

„ಸಂದೀಪ ಜಿ.ಎನ್‌. ಶೇಡ್ಗಾರ್‌

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡು ಒಂದೂವರೆ ವರ್ಷ ಕಳೆದಿದ್ದು, ಕೋವಿಡ್‌ ಮೊದಲ ಅಲೆ ಮತ್ತು 2ನೇ ಅಲೆಯನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಸಮರ್ಥವಾಗಿ ಎದುರಿಸಿದೆ. ಸದ್ಯ ಕೋವಿಡ್‌ 3ನೇ ಅಲೆಯ ಭೀತಿ ಜನರ ಮುಂದಿದೆ. ಕಳೆದ ಒಂದೂವರೆ ವರ್ಷದಲ್ಲಿ ಜಿಲ್ಲೆಯಲ್ಲಿರುವ ವೈದ್ಯಕೀಯ ವ್ಯವಸ್ಥೆಯಲ್ಲಿ ಕೆಲವೊಂದು ಸುಧಾರಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗಿದೆ. ಜಿಲ್ಲೆಯ ಸರ್ಕಾರಿ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಈ ಹಿಂದೆ ಐಸಿಯು ಬೆಡ್‌ ವ್ಯವಸ್ಥೆಯನ್ನು ಒಳಗೊಂಡಿರಲಿಲ್ಲ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ವ್ಯಾಪಕವಾಗಿ ಹರಡಲು ಆರಂಭಿಸಿದ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರ ಚಿಕಿತ್ಸೆ ಅನುಕೂಲವಾಗುವ ದೃಷ್ಟಿಯಿಂದ 50 ಐಸಿಯು ಬೆಡ್‌ಗಳನ್ನು ನಿರ್ಮಿಸಲಾಗಿದೆ. ಈ ಹಿಂದೆ 3 ವೆಂಟಿಲೇಟರ್‌ಗಳನ್ನು ಮಾತ್ರ ಆಸ್ಪತ್ರೆ ಹೊಂದಿತ್ತು. ಕೋವಿಡ್‌ ಸೋಂಕಿನ ಬಳಿಕ ಜಿಲ್ಲಾಸ್ಪತ್ರೆಯಲ್ಲಿ 30 ವೆಂಟಿಲೇಟರ್‌ ಸೌಲಭ್ಯವನ್ನು ಒಳಗೊಂಡಿದೆ.

ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ಆಕ್ಸಿಜನ್‌ ಟ್ಯಾಂಕ್‌ ನಿರ್ಮಾಣ ಮಾಡಲಾಗಿದೆ. ಹಾಗೆಯೇ ಆಕ್ಸಿಜನ್‌ ಕೊರತೆಯನ್ನು ನಿಗೀಸುವ ನಿಟ್ಟಿನಲ್ಲಿ ಆಕ್ಸಿಜನ್‌ ಉತ್ಪಾದನಾ ಘಟಕದ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 1 ಸಾವಿರ ಲೀಟರ್‌ ಎಲ್‌ಪಿಎಂ ಆಕ್ಸಿಜನ್‌ ಉತ್ಪಾದನೆ ಮಾಡಲು ಸಾಧ್ಯವಾಗಲಿದ್ದು, ಸದ್ಯದಲ್ಲೇ ಸಾರ್ವಜನಿಕರ ಬಳಕೆಗೆ ಸಿದ್ಧಗೊಳ್ಳಲಿದೆ. ತಾಲೂಕು ಆಸ್ಪತ್ರೆಗಳಲ್ಲಿ ಈ ಹಿಂದೆ, 3 ಐಸಿಯೂ ಬೆಡ್‌, 3 ವೆಂಟಿಲೇಟರ್‌ ಸೌಲಭ್ಯವನ್ನು ಮಾತ್ರ ಹೊಂದಲಾಗಿತ್ತು.

ಸದ್ಯ ಪ್ರತೀ ತಾಲೂಕು ಆಸ್ಪತ್ರೆಗಳಲ್ಲಿ 25 ಐಸಿಯೂ ಬೆಡ್‌, 6 ವೆಂಟಿಲೇಟರ್‌, 19 ಐಡೆಂಟಿಟಿ ಯೂನಿಟ್‌ ತೆರೆಯಲಾಗಿದೆ. ಹೆಚ್ಚುವರಿಯಾಗಿ 9 ವೆಂಟಿ ಲೇಟರ್‌ ಸರ್ಕಾರದಿಂದ ಬಂದಿದ್ದು ತರೀಕೆರೆ ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್‌, ಕಡೂರು ತಾಲೂಕು ಆಸ್ಪತ್ರೆಗೆ 3 ವೆಂಟಿಲೇಟರ್‌ ಹಾಗೂ ಕೊಪ್ಪ ತಾಲೂಕು ಆಸ್ಪತ್ರೆಗೆ 2 ವೆಂಟಿಲೇಟರ್‌ ಹಾಗೂ ನರಸಿಂಹರಾಜಪುರ ತಾಲೂಕು ಆಸ್ಪತ್ರೆಗೆ 1 ವೆಂಟಿಲೇಟರ್‌ ಹೆಚ್ಚುವರಿಯಾಗಿ ನೀಡಲಾಗಿದೆ.

ಸದ್ಯ 3ನೇ ಅಲೆಯ ಭಯ ಜನತೆಯನ್ನು ಕಾಡುತ್ತಿದ್ದು 3ನೇ ಅಲೆ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಧಿಸಲಿದೆ ಎಂಬ ತಜ್ಞರ ವರದಿಯ ಹಿನ್ನೆಲೆಯಲ್ಲಿ ಸರ್ಕಾರ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ 12 ಮಕ್ಕಳ ವೆಂಟಿಲೇಟರ್‌ ಮತ್ತು ಪ್ರತೀ ತಾಲೂಕು ಆಸ್ಪತ್ರೆಗೆ 9 ಮಕ್ಕಳ ವೆಂಟಿಲೇಟರ್‌ ನೀಡಲಾಗಿದೆ. ಪ್ರಧಾನಮಂತ್ರಿ ಕೇರ್‌ ಫಂಡ್‌ ಹಾಗೂ ಸಿಎಸ್‌ ಆರ್‌ ಸಂಘ-ಸಂಸ್ಥೆಗಳ ಸಹಕಾರದಿಂದ ಪ್ರತೀ ತಾಲೂಕು ಆಸ್ಪತ್ರೆ ಆವರಣದಲ್ಲಿ 500 ಲೀಟರ್‌ ಎಲ್‌ಪಿಎಂ ಆಕ್ಸಿಜನ್‌ ಜನರೇಟ್‌ ಪ್ಲಾ Âಂಟ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ.

ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಿಗೆ ವೈದ್ಯರ ನೇಮಕ ಮಾಡಿಕೊಳ್ಳಲಾಗಿದ್ದು, 12 ಎಂ.ಡಿ. ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. 5 ಜನ ಸ್ಪೆಶಲಿಸ್ಟ್‌ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. 35 ಜನ ಎಂಬಿಬಿಎಸ್‌ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆಗೆ ಆಕ್ಸಿಜನ್‌ ಪೈಪ್‌ಲೈನ್‌ ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ತಲಾ 50 ಹಾಸಿಗೆಗಳಿಗೆ ಆಕ್ಸಿಜನ್‌ ಆಳವಡಿಸುವ ಕಾರ್ಯ ನಡೆಯಲಿದೆ. ಜಿಲ್ಲೆಯ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಾದರಿ ಪ್ರಾಥಮಿಕ ಆರೋಗ್ಯ ಮಾಡಲಾಗುತ್ತಿದೆ.

ಜಿಲ್ಲೆಯ ಒಂದು ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯಾಗಿ ಹೆಚ್ಚಿಸಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಕಾಣಿಸಿಕೊಂಡ ಬಳಿಕ ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಕೇಂದ್ರ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳನ್ನು ಹೆಚ್ಚಿಸಲಾಗಿದ್ದು ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆ ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಆಸ್ಪತ್ರೆಗಳಿಗೆ ಇನಷ್ಟು ಮೂಲ ಸೌಲಭ್ಯಗಳ ಅಗತ್ಯವಿದ್ದು, ಶೀಘ್ರವೇ ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ ಎಂಬುದು ಜಿಲ್ಲೆಯ ಜನರ ಆಗ್ರಹವಾಗಿದೆ.

ಕೋವಿಡ್‌ 3ನೇ ಅಲೆ ಎದುರಿಸಲು ಸಿದ್ಧತೆ: ಜಿಲ್ಲೆಯಲ್ಲಿ ಕೋವಿಡ್‌ 1ನೇ ಅಲೆ ಮತ್ತು 2ನೇ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದು 3ನೇ ಅಲೆ ಎದುರಾಗುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ 3ನೇ ಅಲೆಯನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಐಸಿಯು ಬೆಡ್‌ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. 3ನೇ ಅಲೆ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬಾಧಿ ಸಲಿದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ 12 ವೆಂಟಿಲೇಟರ್‌ ಅಳವಡಿಸಲಾಗಿದೆ.

ತಾಲೂಕು ಆಸ್ಪತ್ರೆಗಳಲ್ಲಿ 9 ಮಕ್ಕಳ ವೆಂಟಿಲೇಟರ್‌ ಅಳವಡಿಸಲಾಗಿದೆ. ಮೂರನೇ ಅಲೆ ನಿಭಾಯಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wew-e-wqe

Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆಗಳು.. ವಾಹನ ಸವಾರರ ಪರದಾಟ

Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

ICC T20 world cup 2024 warm up match schedule

T20 World Cup: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತಕ್ಕೆ ಒಂದೇ ಪಂದ್ಯ

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.