ಕೊಪ್ಪಳ:ಜಿಲ್ಲಾದ್ಯಂತ ಕೋವಿಡ್‌ ಲಸಿಕಾ ಮೇಳ

ಪಿಎಚ್‌ಸಿ,ಉಪ ಕೇಂದ್ರದಲ್ಲಿಲಸಿಕಾಕರಣ| ಕೊರೊನಾ ತಡೆಗೆಲಸಿಕೆಪಡೆಯುವುದು ಅನಿವಾರ್ಯ 

Team Udayavani, Aug 27, 2021, 1:25 PM IST

fyrdtt

ವರದಿ: ದತ್ತು ಕಮ್ಮಾರ

ಕೊಪ್ಪಳ:ಜಿಲ್ಲೆಯಲ್ಲಿಕೊರೊನಾಸೋಂಕುನಿಯಂತ್ರಣಕ್ಕೆ ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದೆ. ಇಷ್ಟಾದರೂ ಜನರಲ್ಲಿ ಲಸಿಕೆ ಪಡೆಯಬೇಕೆನ್ನುವ ಜಾಗೃತಿ ಬರುತ್ತಿಲ್ಲ. ಎಲ್ಲರಿಗೂ ಲಸಿಕೆ ಹಾಕಬೇಕು ಎನ್ನುವ ಉದ್ದೇಶದಿಂದ ಜಿಲ್ಲಾಡಳಿತ ಆದ್ಯತಾ ವಲಯದಲ್ಲಿನ ಜನರಿಗೆ ಆ. 27ರಂದು ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್‌ ಲಸಿಕಾ ಮೇಳ ಹಮ್ಮಿಕೊಂಡಿದೆ.

ಕೊರೊನಾ ಸೋಂಕು ಜಗತ್ತಿನಲ್ಲಿ ಕಾಣಿಸಿಕೊಂಡು ಎರಡು ವರ್ಷ ಕಳೆದಿವೆ. ಕೊರೊನಾ ಸೋಂಕಿನ ಬಗ್ಗೆ ಜನರಲ್ಲಿ ಭಯವಿದೆ. ಆದರೆ ನಮ್ಮ ಆರೋಗ್ಯವನ್ನು ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎನ್ನುವ ಜಾಗೃತಿ ಜನರಲ್ಲಿ ಇನ್ನೂ ಬರುತ್ತಿಲ್ಲ. ಕೆಲವರು ಮಾಸ್ಕ್ ಧರಿಸಿದರೆ, ಇನ್ನು ಕೆಲವರು ಹಾಗೇ ಎಲ್ಲೆಂದರಲ್ಲಿ ಸುತ್ತಾಡಿ ಆರೋಗ್ಯವಂತರಿಗೂ ಸೋಂಕು ತಗುಲಿಸುತ್ತಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬರಬೇಕು ಎಂದರೆ ಪ್ರತಿಯೊಬ್ಬ ವ್ಯಕ್ತಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುತ್ತಲೇ ಇವೆ.

ಇಷ್ಟಾದರೂ ಜನರಲ್ಲಿ ಲಸಿಕೆ ಹಾಕಿಸಿಕೊಂಡರೆ ನಮಗೆ ಏನಾಗುತ್ತೋ ಏನೋ? ಎನ್ನುವ ಭಯದಿಂದಲೇ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಜಿಲ್ಲಾಡಳಿತವು ವಿವಿಧ ಹಂತಗಳಲ್ಲಿಯೂ ಜನರಿಗೆ ಲಸಿಕೆ ಹಾಕಿಸಿ ಜಾಗೃತಿ ಮೂಡಿಸುತ್ತಿದೆ. ಇಷ್ಟಾದರೂ ಸಾಮಾಜಿಕ ಜಾಲತಾಣದಲ್ಲಿ ಯಾವುದೋ ವೀಡಿಯೋಗಳನ್ನು ನೋಡಿ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುವಂತಹ ಸಂದರ್ಭಗಳೂ ಜಿಲ್ಲೆಯಲ್ಲಿ ನಡೆದಿವೆ. ಇದೆಲ್ಲವನ್ನು ಗಮನಿಸಿರುವ ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಜಿಲ್ಲಾ, ತಾಲೂಕು, ಸಮುದಾಯ, ಪ್ರಾಥಮಿಕ ಹಾಗೂ ಉಪ ಕೇಂದ್ರಗಳಲ್ಲಿ ಲಸಿಕಾ ಕೋವಿಡ್‌ ಮೇಳ ಹಮ್ಮಿಕೊಂಡಿದೆ. ಇದೇ ಆ. 27ರಂದು ಜಿಲ್ಲಾದ್ಯಂತ ಲಸಿಕಾ ಮೇಳ ನಡೆಯಲಿದ್ದು, ಜನರು ತಮ್ಮ ಆಧಾರ್‌ ಕಾರ್ಡ್‌ ತೆಗೆದುಕೊಂಡು ಹೋಗಿ ಲಸಿಕೆ ಹಾಕಿಸಿಕೊಳ್ಳಬಹುದಾಗಿದೆ.

ಯಾರಿಗೆಲ್ಲಾ ಲಸಿಕೆ ಹಾಕಲಾಗುತ್ತೆ? ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ 1ನೇ ಡೋಸ್‌ ಪಡೆಯದವರಿಗೆ 1ನೇ ಡೋಸ್‌ ಲಸಿಕೆ ಹಾಕಲಾಗುವುದು. ಇನ್ನೂ 1ನೇ ಡೋಸ್‌ ಪಡೆದ ಎಲ್ಲ ಅರ್ಹರಿಗೂ 2ನೇ ಡೋಸ್‌ ಲಸಿಕೆ ಹಾಕಲು ಜಿಲ್ಲಾಡಳಿತ ಮುಂದಾಗಿದೆ. ಲಸಿಕೆ ಪಡೆಯುವ ವ್ಯಕ್ತಿಗಳು ಕಡ್ಡಾಯವಾಗಿ ಆಧಾರ್‌ ಕಾರ್ಡ್‌ ಮತ್ತು ಮೊಬೈಲ್‌ ನಂಬರ್‌ ತೆಗೆದುಕೊಂಡು ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಸಮೀಪದ ಆರೋಗ್ಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದಾಗಿದೆ. ಲಸಿಕೆ ಪಡೆಯಿರಿ: ಕೊರೊನಾ ಸೋಂಕು ನಿಯಂತ್ರಣವಾಗಬೇಕೆಂದರೆ ಜಿಲ್ಲೆಯ ಪ್ರತಿಯೊಬ್ಬ ನಾಗರಿಕನು ಲಸಿಕೆ ಪಡೆಯಬೇಕಿದೆ. ಸೋಂಕು ನಿಯಂತ್ರಣಕ್ಕೆ ಲಸಿಕೆಯೊಂದೇ ಮಾರ್ಗ ಎನ್ನುವುದನ್ನು ಅರಿಯಬೇಕಿದೆ. ಲಸಿಕೆ ಬಗ್ಗೆ ಅಸಡ್ಯ ಭಾವನೆ ತಾಳದೇ, ನಿರ್ಲಕ್ಷ್ಯ ತಾಳದೇ ಸ್ವಇಚ್ಛೆಯಿಂದ ಆರೋಗ್ಯ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಬೇಕಿದೆ. ಜಿಲ್ಲಾಡಳಿತವು 18 ವರ್ಷ ಮೇಲ್ಪಟ್ಟ ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.