ಕಾಮನ್ವೆಲ್ತ್ ಗೇಮ್ಸ್ಗೆ ಭಾರತ ಹಾಕಿ ತಂಡಗಳ ಗೈರು?
Team Udayavani, Sep 4, 2021, 9:30 AM IST
ನವದೆಹಲಿ: ಭಾರತ ಪುರುಷ ಮತ್ತು ಮಹಿಳಾ ಹಾಕಿ ತಂಡಗಳು ಮುಂದಿನ ವರ್ಷ ಇಂಗ್ಲೆಂಡ್ನ ಬರ್ಮಿಂಗ್ ಹ್ಯಾಮ್ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿಲ್ಲ.
ಅದೇ ವರ್ಷ ನಡೆಯಲಿರುವ ಏಷ್ಯನ್ ಗೇಮ್ಸ್ನಲ್ಲಿ ಅದ್ಭುತ ಪ್ರದರ್ಶನ ನೀಡಿ, 2024ರ ಒಲಿಂಪಿಕ್ಸ್ಗೆ ಅರ್ಹತೆ ಪಡೆಯುವುದು ಇದರ ಹಿಂದಿನ ಉದ್ದೇಶ.
ಇದನ್ನೂ ಓದಿ:ಟೆಸ್ಟ್ ತಂಡದಲ್ಲೂ ಅಶ್ವಿನ್ ರನ್ನೇಕೆ ಕಡೆಗಣಿಸಲಾಗುತ್ತಿದೆ?
ಅಂತಾರಾಷ್ಟ್ರೀಯ ಹಾಕಿ ಸಂಸ್ಥೆಯ ಅಧ್ಯಕ್ಷ, ಭಾರತ ಹಾಕಿ ಸಂಸ್ಥೆಯ ಮಾಜಿ ಅಧ್ಯಕ್ಷ ನರೇಂದ್ರ ಬಾತ್ರಾ ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಈ ಬಗ್ಗೆ ಭಾರತ ಕ್ರೀಡಾ ಪ್ರಾಧಿಕಾರದ ಮನವೊಲಿಸಿರುವುದಾಗಿ ಅವರು ಹೇಳಿದ್ದಾರೆ.