ರೈತರ ಮಹಾ ಪಂಚಾಯತ್ : ನಮ್ಮನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ : ಟಿಕಾಯತ್

ಉತ್ತರ ಪ್ರದೇಶದ ಮುಜಾಫರ್ ನಗರದ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್..!

Team Udayavani, Sep 4, 2021, 1:51 PM IST

farmers-mahapanchayat-tomorrow-will-break-and-reach-if-they-stop-us-says-rakesh-tikait

ನವ ದೆಹಲಿ : ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ದ ಸಂಯುಕ್ತ ಕಿಸಾನ್ ಮೋರ್ಚಾ ಅಡಿಯಲ್ಲಿ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಮಹಾ ಪಂಚಾಯತ್ ನನ್ನು ಆಯೋಜಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ಕಿಸಾನ್ ಒಕ್ಕೂಟದ ನಾಯಕ ರಾಕೇಶ್ ಟಿಕಾಯತ್, ಮಹಾ ಪಂಚಾಯತ್ ಗೆ ಸಾವಿರಾರು ಮಂದಿ ರೈತರು ಭಾಗವಹಿಸಲಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಚರ್ಚೆ ಮಾಡಲಾಗುತ್ತದೆ. ಎಷ್ಟು ಮಂದಿ ರೈತರು ಸೇರುತ್ತಾರೆ ಎನ್ನುವುದನ್ನು ಹೇಳುವುದಕ್ಕೆ ಸಾಧ್ಯವಿಲ್ಲ. ದೇಶದಾದ್ಯಂತ ಸಹಸ್ರಾರು ಮಂದಿ ಭಾಗಿಯಾಗಲಿದ್ದಾರೆ. ಕೇಂದ್ರ ಸರ್ಕಾರದ ವಿರುದ್ದ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಚೊಚ್ಚಲ ಸ್ವದೇಶಿ ನಿರ್ಮಿತ “ಸೂಪರ್‌ ಪವರ್‌ ಧ್ರುವ್‌”; ಭಾರತಕ್ಕೆ ಏನು ಲಾಭ?

ಮಹಾ ಪಂಚಾಯತ್ ಗೆ ಬರುವ ರೈತರನ್ನು ಯಾರಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ. ಒಂದು ವೇಳೆ ರೈತರನ್ನು ತಡೆದರೇ, ನಾವು ಅದನ್ನು ಮೀರುತ್ತೇವೆ. ನಮ್ಮ ಗುರಿಯನ್ನು ತಲುಪಿಯೇ ತಲುಪುತ್ತೇವೆ ಎಂದು ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.

ಪಂಜಾಬ್ ನಿಂದ ಬರಲಿದ್ದಾರೆ 2000 ಕ್ಕೂಅಧಿಕ ಮಂದಿ ರೈತರು..!

ಸರಿ ಸುಮಾರು 2000ಕ್ಕೂ ಅಧಿಕ ಮಂದಿ ರೈತರು ಅಮೃತಸರದಿಂದ ಬೆಳಿಗ್ಗೆ 4 ಗಂಟೆಗೆ, ಜಲಂಧರ್‌ ನಿಂದ 5 ಗಂಟೆಗೆ ಮತ್ತು ಲುಧಿಯಾನದಿಂದ ಬೆಳಿಗ್ಗೆ 6 ಗಂಟೆಗೆ ಎಕ್ಸ್‌ ಪ್ರೆಸ್ ರೈಲುಗಳ ಮೂಲಕ ಬರಲಿದ್ದಾರೆ.

ದೆಹಲಿ ಗಡಿಯಲ್ಲಿರುವ ಪ್ರತಿಭಟನಾ ಸ್ಥಳಗಳಿಂದ 400-500 ರೈತರು ಮಹಾಪಂಚಾಯತ್‌ ಗೆ ತೆರಳುತ್ತಾರೆ. ರೈತರು ಟಿಕ್ರಿ ಮತ್ತು ಗಾಜಿಪುರ ಗಡಿಗಳಿಂದ ಬಸ್ಸುಗಳಲ್ಲಿ ಹೊರಡುತ್ತಿದ್ದಾರೆ. ಪ್ರತಿಭಟನಾ ಸ್ಥಳಗಳಿಂದ ಎರಡು ಬಸ್ಸುಗಳು ಈಗಾಗಲೇ ಮುಜಫರ್ ನಗರಕ್ಕೆ ಶುಕ್ರವಾರ ರಾತ್ರಿ ಹೊರಟವು. ಇಂದು(ಶನಿವಾರ) ಬೆಳಿಗ್ಗೆ ಇನ್ನೆರಡು ಹೊರಟಿದ್ದವು ಮತ್ತು ಇನ್ನೂ ಎರಡು ಬಸ್ ಗಳು ಇಂದು ಸಂಜೆ 4 ಗಂಟೆಗೆ ಹೊರಡುತ್ತವೆ.

ಆದಾಗ್ಯೂ, ರೈತರು ಮುಖ್ಯವಾಗಿ  ಹಳ್ಳಿ ಹಳ್ಳಿಗಳಿಂದ ಬರುತ್ತಿದ್ದಾರೆ. ಹರಿಯಾಣ, ಮಹಾರಾಷ್ಟ್ರ ಮತ್ತು ಭಾರತದ ಇತರ ಭಾಗಗಳ ರೈತರು ಸಹ ಸೇರುವ ನಿರೀಕ್ಷೆಯಿದೆ ಎಂದು ಟಿಕಾಯತ್ ತಿಳಿಸಿದ್ದಾರೆ.

ಇನ್ನು,  ಈ ಮಹಾಪಂಚಾಯತ್ ಕೇವಲ ಚುನಾವಣೆಗೆ ಸಂಬಂಧಿಸಿಲ್ಲ. ಚುನಾವಣೆ ಆರು ತಿಂಗಳ ನಂತರ. ಯುಪಿಯಲ್ಲಿ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯುಪಿಯಲ್ಲಿ ವಿದ್ಯುತ್ ದರಗಳು ಕೂಡ ಹೆಚ್ಚಾಗಿದೆ. ಕಳೆದ 2016 ರಿಂದ ಕಬ್ಬಿನ ದರ ಏರಿಕೆಯಾಗಿಲ್ಲ. ಕೇಂದ್ರವು ಇದನ್ನು ಪ್ರತಿ ಕಿಲೋಗ್ರಾಂಗೆ ಐದು ಪೈಸಯಂತೆ ಹೆಚ್ಚಿಸಿದೆ. ನೀವು ರೈತರನ್ನು ಅವಮಾನಿಸುತ್ತಿದ್ದೀರಾ? ಎಂದು ಅವರು ಕಿಡಿ ಕಾರಿದ್ದಾರೆ.

 ರೈತರ ಮಹಾ ಪಂಚಾಯತ್ ಹಿನ್ನೆಲೆಯಲ್ಲಿ ಹೆಚ್ಚಿದ ಬಿಗಿ ಭದ್ರತೆ :

ಕೇಂದ್ರದ ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳು ಸೇರಿದಂತೆ ರೈತರಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಭಾನುವಾರ(ಸೆ.5) ಇಲ್ಲಿ ಆಯೋಜಿಸಲಾಗಿರುವ ‘ರೈತರ ಮಹಾಪಂಚಾಯತ್‌‘ ಹಿನ್ನೆಲೆಯಲ್ಲಿ ವ್ಯಾಪಕ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.

ಭದ್ರತೆಗಾಗಿ ಆರು ಪ್ರಾಂತೀಯ ಸಶಸ್ತ್ರ ಪೊಲೀಸ್‌ ಪಡೆಗಳ (ಪಿಎಸಿ) ತಂಡಗಳು ಮತ್ತು ಎರಡು ಕ್ಷಿಪ್ರ ಕಾರ್ಯಪಡೆಯ (ಆರ್‌ ಎ ಎಫ್‌) ತುಕಡಿಗಳನ್ನು ನಿಯೋಜಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಸಹಾರನ್‌ಪುರ ವಲಯದ ಡಿಐಜಿ ಪ್ರೀತಿಂದರ್ ಸಿಂಗ್, ‘ರೈತ ಮಹಾಪಂಚಾಯತ್ ಹಿನ್ನೆಲೆಯಲ್ಲಿ ಐದು ಎಸ್‌ಎಸ್‌ಪಿ, ಏಳು ಎಎಸ್‌ಪಿ ಮತ್ತು 40 ಪೊಲೀಸ್ ಇನ್‌ಸ್ಪೆಕ್ಟರ್‌ಗಳನ್ನು ಭದ್ರತೆಗೆ ನಿಯೋಜಿಸಲಾಗುವುದು. ಇಡೀ ಕಾರ್ಯಕ್ರಮವನ್ನು ವಿಡಿಯೊ ಚಿತ್ರೀಕರಣ ಮಾಡಿಸಲಾಗುವುದು‘ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೆರಿಸ್ಟೋ ಮೇಲೆ ಹಲ್ಲೆ ಆರೋಪ: ವಿಚಿತ್ರ ಅಭಿಮಾನಿ ‘ಜಾರ್ವೋ’ ಇದೀಗ ಪೊಲೀಸರ ಅತಿಥಿ!

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.