ಪರಿಷತ್ ಟಿಕೆಟ್ಗೆ ಅರ್ಜಿಗೆ ಕಾಂಗ್ರೆಸ್ನಿಂದ 1 ಲಕ್ಷ ರೂ. ನಿಗದಿ ?
Team Udayavani, Sep 5, 2021, 9:49 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಅರ್ಜಿ ಸಲ್ಲಿಸಲು 1 ಲಕ್ಷ ರೂ. ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮುಂದಿನ ಜನವರಿಯಲ್ಲಿ ನಡೆಯುವ 25 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್, ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾವಾರು ಸರಣಿ ಸಭೆಗಳನ್ನು ನಡೆಸುತ್ತಿದೆ. ಈ ಸಭೆಯಲ್ಲಿ ಜಿಲ್ಲಾ ಮುಖಂಡರುಗಳಿಗೆ ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇರುವವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರಿಷತ್ ಚುನಾವಣೆಗೆ ಟಿಕೆಟ್ ಗೆ ಅರ್ಜಿ ಸಲ್ಲಿಸಲು 1 ಲಕ್ಷ ರೂ. ನಿಗದಿ ಮಾಡಿದ್ದಾರೆ ಎನ್ನಲಾಗಿದ್ದು, ಆ ಹಣವನ್ನು ಪಕ್ಷದ ಕಚೇರಿ ನಿರ್ಮಾಣಕ್ಕೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:ಯುಎಸ್ ಓಪನ್ ಟೆನಿಸ್ : ಬಾರ್ಟಿಗೆ ಆಘಾತವಿಕ್ಕಿದ ಶೆಲ್ಬಿ ರೋಜರ್
ಅಭ್ಯರ್ಥಿಗಳಿಗೆ ಸಂದರ್ಶನ
ಟಿಕೆಟ್ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕ್ಷೇತ್ರದಲ್ಲಿ ಅವರ ಕಾರ್ಯ ಚಟುವಟಿಕೆ, ಅವರ ವರ್ಚಸ್ಸು, ಜನರೊಂದಿಗೆ ಸಂಪರ್ಕ ಪಕ್ಷದ ನಾಯಕರೊಂದಿಗೆ ಹೊಂದಿರುವ ಸಂಬಂಧದ ಕುರಿತು ಸಂದರ್ಶನ ನಡೆಸಿ, ಬಳಿಕ ಟಿಕೆಟ್ ನೀಡಲು ಕೆಪಿಸಿಸಿ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು