ಬೆಲೆ ಏರಿಕೆಗೆ ಬಿಜೆಪಿ ಕಾರಣವಲ್ಲ: ಡಾ.ಅಶ್ವತ್ಥನಾರಾಯಣ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯೇಕಾರಣ ; ಸದ್ಯದಲ್ಲೇ ಬೆಲೆಕಡಿಮೆ ಆಗಲಿದೆ: ಉನ್ನತ ಶಿಕ್ಷಣ ಸಚಿವ

Team Udayavani, Sep 7, 2021, 4:53 PM IST

ಬೆಲೆ ಏರಿಕೆಗೆ ಬಿಜೆಪಿ ಕಾರಣವಲ್ಲ: ಡಾ.ಅಶ್ವತ್ಥನಾರಾಯಣ

ಮಂಡ್ಯ: ದೇಶದಲ್ಲಿ ಪೆಟ್ರೋಲ್‌, ಡೀಸೆಲ್‌, ಅಡುಗೆ ಗ್ಯಾಸ್‌ ಬೆಲೆ ಹೆಚ್ಚಳಕ್ಕೆ ಬಿಜೆಪಿ ಕಾರಣವಲ್ಲ. ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಏರಿಕೆಯೇ ಕಾರಣವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಐಟಿಬಿಟಿ ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು.

ತಾಲೂಕಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಲು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕ
ರಿಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲೇ ಬೆಲೆಗಳು ಏರಿಕೆಯಾಗಿರುವುದರಿಂದ ಪೆಟ್ರೋಲ್‌, ಡೀಸೆಲ್‌ ಮತ್ತು ಅಡುಗೆ ಗ್ಯಾಸ್‌ ಬೆಲೆ ಏರಿಕೆಯಾಗಿದೆ. ಸದ್ಯದಲ್ಲೇ ಅದರ ಬೆಲೆ ಕಡಿಮೆ ಆಗಲಿದೆ. ಜನಸಾಮಾನ್ಯರ ಹಿತಕಾಯಲು ಬೆಲೆ ಕಡಿಮೆ ಮಾಡುವ ಪ್ರಯತ್ನ ಆಗಲಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಆಡಳಿತ ಉತ್ತಮವಾಗಿರುವುದರಿಂದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರದ ಸಾಧನೆಗೆ ಸಾಕ್ಷಿಯಾಗಿದೆ. ಬಿಜೆಪಿ ಮೇಲೆ ಜನರ ಆಶೀರ್ವಾದ ಸದಾ ಇರಲಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲಿ ನಮ್ಮ ಪಕ್ಷ ಉತ್ತಮವಾದ ಆಡಳಿತ ನೀಡಿದೆ. ಬೆಳಗಾವಿ ನಗರ ಬಹಳಷ್ಟು ಅಭಿ ವೃದ್ಧಿಯಾಗಿದ್ದು, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಎಂದು ತಿಳಿಸಿದರು.

ಇದನ್ನೂ ಓದಿ:ಐಮೊಬೈಲ್ ಪೇ ಆ್ಯಪ್ ಮೂಲಕ ಯಾವುದೇ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ಬಾಕಿ ತಕ್ಷಣ ಪಾವತಿಸಿ

ಸಿಎಂ ನೇತೃತ್ವದಲ್ಲೇ ಚುನಾವಣೆ: ಮುಂದಿನ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪಕ್ಷದ ಅಧ್ಯಕ್ಷರ ನೇತೃತ್ವದಲ್ಲಿ
ಎದುರಿಸಲಾ ಗುವುದು. ಮುಂದಿನ ದಿನಗಳಲ್ಲಿ ಮಂಡ್ಯ ಭಾಗದಲ್ಲಿ ಮುಖ್ಯಮಂತ್ರಿ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.

ಎನ್‌ಇಪಿಯಿಂದ ಶಿಕ್ಷಣ ಅಭಿವೃದ್ಧಿ: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪ್ರತಿಯೊಬ್ಬರ ಬದುಕು ಹಸನಾಗಲಿದೆ. ಆದ್ದರಿಂದ ಕರ್ನಾಟಕದಲ್ಲೇ ಮೊದಲ
ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗುತ್ತಿದೆ. ಇದರಲ್ಲಿ ಏನು ತಪ್ಪು ಇದೆ ಅಂತ ವಿರೋಧ ಪಕ್ಷದವರು ಹೇಳುತ್ತಿಲ್ಲ ಎಂದು ಹೇಳಿದರು.

ಹಂತ ಹಂತವಾಗಿ ಜಾರಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಂತ ಹಂತವಾಗಿ ಜಾರಿ ಮಾಡಲಿದ್ದೇವೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ಜಾರಿ ಮಾಡಿ ದ್ದು ಕರ್ನಾಟಕವಾಗಿದೆ. ಅಭಿವೃದ್ದಿಗೆ ಹೊಸ ಐತಿಹ್ಯ ಬರೆಯಲಿದೆ ಎಂದು ಎಂದರು.

ಗಣೇಶ ಉತ್ಸವ ನಿಯಮ ಸಡಿಲ:ಗಣೇಶೋತ್ಸವಕ್ಕೆ ಕೋವಿಡ್‌-19ರ ಮಾರ್ಗಸೂಚಿಯ ನಡುವೆಯೂ ನಿಯಮಗಳನ್ನು ಸಡಿಲಗೊಳಿಸಿದ್ದೇವೆ. ಈಗ 5 ದಿನ ಹಬ್ಬ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ. ಜನರಪರ ವಾಗಿ ಮಾಡಿದ್ದೇವೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣ ಗೌಡ, ಬಿಜೆಪಿ ನಗರಾಧ್ಯಕ್ಷ ವಿವೇಕ್‌, ಮಾಜಿ ಅಧ್ಯಕ್ಷ ಎಚ್‌.ಆರ್‌. ಅರವಿಂದ್‌, ಡಾ.ಸಿದ್ದರಾಮಯ್ಯ, ಯುವ ಮುಖಂಡಕೇಶವ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.