ದಸರಾ ಜಂಬೂ ಸವಾರಿಗೆ 8 ಆನೆ ಆಯ್ಕೆ

ಈ ಬಾರಿಯೂ ಅಂಬಾರಿ ಹೊರಲಿರುವ ಕೂಂಬಿಂಗ್‌ ಸ್ಪೆಷಲಿಸ್ಟ್‌ ಅಭಿಮನ್ಯು

Team Udayavani, Sep 8, 2021, 4:00 PM IST

ದಸರಾ ಜಂಬೂ ಸವಾರಿಗೆ 8 ಆನೆ ಆಯ್ಕೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿಯೂ ಕೂಂಬಿಂಗ್‌ ಸ್ಪೆಷಲಿಸ್ಟ್‌ ಅಭಿಮನ್ಯು ಅಂಬಾರಿ ಹೊರುವುದು
ಖಚಿತವಾಗಿದ್ದು, ಈ ಬಾರಿ 8 ಆನೆಗಳನ್ನು ಕರೆತರಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಸತತ 2ನೇ ವರ್ಷವೂ ನಾಡಹಬ್ಬ ದಸರಾ ಸರಳ ಹಾಗೂ ಸಾಂಪ್ರದಾಯಿಕ ಆಚರಣೆಗಷ್ಟೇ ಸೀಮಿತಗೊಳಿಸಲಾಗಿದೆ. ಬೆಂಗಳೂರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ದಸರಾ ಉನ್ನತ ಸಮಿತಿ ಸಭೆಯಲ್ಲಿ ಜಂಬೂಸವಾರಿ ಮೆರವಣಿಗೆಯನ್ನು ಕಳೆದ ವರ್ಷದಂತೆ ಈ ಬಾರಿಯೂ ಅರಮನೆ ಅಂಗಳಕ್ಕಷ್ಟೇ ಸೀಮಿತಗೊಳಿಸಿರುವುದರಿಂದ ದಸರಾ ಗಜಪಡೆಯಲ್ಲಿ 8 ಆನೆಗಳು
ಸ್ಥಾನ ಪಡೆಯಲಿದೆ.

ಕಳೆದ ವರ್ಷ ಅರಮನೆ ಅಂಗಳಕ್ಕೆ ಸೀಮಿತವಾಗಿದ್ದ ಜಂಬೂ ಸವಾರಿಯಲ್ಲಿ ಕೇವಲ 5 ಆನೆಗಳಷ್ಟೇ ಪಾಲ್ಗೊಂಡಿದ್ದವು. ಈ ಸಲಹೆಚ್ಚುವರಿಯಾಗಿ 3 ಆನೆಗಳನ್ನೂ ಕರೆತರಲಾಗುತ್ತಿದ್ದು, ಹೆಚ್ಚುವರಿ ಆನೆಗಳ ಪೈಕಿ 2 ಗಂಡಾನೆ ಮತ್ತು1ಹೆಣ್ಣಾನೆ ಸೇರಿವೆ. ಆನೆಗಳ ಆರೋಗ್ಯ ಕೈಕೊಟ್ಟರೆ ಪರ್ಯಾಯ ಆನೆಗಳ ಬಳಕೆ ಮಾಡಲು ಹೆಚ್ಚುವರಿ 3 ಆನೆಗಳನ್ನು ತಂದು ತಾಲೀಮು ನೀಡಲು ಅರಣ್ಯ ಇಲಾಖೆ ನಿರ್ಧರಿಸಿದೆ.

ಈ ಬಾರಿಯ ಗಜಪಡೆ: ಈ ಸಾಲಿನ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊರಲಿರುವ ಗಜಪಡೆಯ ನಾಯಕ, ಮತ್ತಿಗೋಡು ಶಿಬಿರದ ಅಭಿಮನ್ಯು (55), ಗೋಪಾಲಸ್ವಾಮಿ (39), ಆನೆಕಾಡು ಶಿಬಿರದ ವಿಕ್ರಮ (48), ದುಬಾರೆ ಶಿಬಿರದ ಕಾವೇರಿ (43), ಧನಂಜಯ (38), ನಾಗರಹೊಳೆಯ ದೊಡ್ಡಹರವೆ ಶಿಬಿರದ ಅಶ್ವತ್ಥಾಮ (34), ಬಂಡೀಪುರ ರಾಂಪುರ ಶಿಬಿರದ ಚೈತ್ರಾ (50) ಹಾಗೂ ಲಕ್ಷ್ಮೀ(17) ಪಾಲ್ಗೊಳ್ಳುವುದು ಖಚಿತವಾಗಿದೆ.

ಇದನ್ನೂ ಓದಿ:ಮುಸ್ಲಿಂ ಕುಟುಂಬ ತಯಾರಿಸುವ ಗಣಪನಿಗೆ ಭಾರೀ ಬೇಡಿಕೆ

ಕೆಲ ದಿನಗಳ ಹಿಂದೆಯೇ ಅರಣ್ಯಾಧಿಕಾರಿಗಳ ತಂಡ ಎಲ್ಲ ಶಿಬಿರಗಳಿಗೆ ತೆರಳಿ, ಆನೆಗಳ ದೈಹಿಕ ಸದೃಢತೆ ಪರಿಶೀಲನೆ ನಡೆಸಿ 14 ಆನೆಗಳ ಪಟ್ಟಿ ಸಿದ್ಧಪಡಿಸಿದೆ. ಇದರಲ್ಲಿ8ಆನೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಗಜಪಡೆಗೆ ಈಗಾಗಲೇ ಅರಣ್ಯ ಇಲಾಖೆಯ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಿದೆ. ಜಿಲ್ಲಾಡಳಿತಕ್ಕೆಈಕುರಿತುಮಾಹಿತಿರವಾನಿಸಲಾಗಿದೆ. ಜಿಲ್ಲಾ ಸಮಿತಿ ಹಾಗೂ ಪಿಸಿಸಿಎಫ್(ವನ್ಯಜೀವಿ) ಅನುಮತಿ ದೊರೆಯುವ ಸಾಧ್ಯತೆ ಇದೆ.

13ರಂದು ಸಪ್ತಮಿ ಶುಭ ದಿನ ಗಜಪಯಣ ಸಾಧ್ಯತೆ
ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಕರೆತರಲು ಮೂರು ದಿನಗಳನ್ನು ಪಟ್ಟಿ ಮಾಡಲಾಗಿದೆ. ಸೆ.13, 15 ಹಾಗೂ 16ರಂದು ಶುಭ ದಿನವಾಗಿದೆ. ಅದರಲ್ಲೂ ಸೆ.13 ಉತ್ತಮ ದಿನವಾಗಿದ್ದು, ಭಾದ್ರಪದ ಸಪ್ತಮಿ ದಿನ ಆಗಿರುವುದರಿಂದ ಗಜಪಯಣಕ್ಕೆ
ಒಳ್ಳೆಯ ದಿನ ಎನ್ನಲಾಗಿದೆ. ಸೆ.13ರಂದು ಬೆಳಗ್ಗೆ 11ರಂದು ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್‌ ಬಳಿ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮೈಸೂರಿನ ಅರಣ್ಯ ಭನವನಕ್ಕೆ ಕರೆತರಲಾಗುತ್ತದೆ. ಸೆ.16ರಂದು ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಪೂಜೆ ಸಲ್ಲಿಸಿ, ನಂತರ ಅರಮನೆಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ

ಇಂದು ಅಂತಿಮ ನಿರ್ಧಾರ
ದಸರಾ ಕಾರ್ಯಕಾರಿ ಸಮಿತಿ ಸಭೆ ನಗರದಲ್ಲಿ ಬುಧವಾರ ಮಧ್ಯಾಹ್ನ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ನೇತೃತ್ವದಲ್ಲಿ ನಡೆಯಲಿದೆ. ಈ ವೇಳೆ ದಸರಾ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದ್ದು, ಗಜಪಡೆ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದೇ ಸಂದರ್ಭದಲ್ಲಿ ಗಜಪಯಣ ಮತ್ತು ಸ್ವಾಗತ ಕಾರ್ಯಕ್ರಮದ ದಿನಾಂಕ ನಿಗದಿಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.