ಸೆಪ್ಟೆಂಬರ್ 17ರಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನ: ಸಚಿವ ಭೈರತಿ ಬಸವರಾಜ್

Team Udayavani, Sep 16, 2021, 2:50 PM IST

ಭೈರತಿ ಬಸವರಾಜ್

ಬೆಂಗಳೂರು: ನಾಳೆ (ಸೆಪ್ಟೆಂಬರ್ 17ರಂದು) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವಿದ್ದು, ಅಕ್ಟೋಬರ್ 7ರಂದು ನರೇಂದ್ರ ಮೋದಿಯವರು ಮೊದಲ ಬಾರಿ ಗುಜರಾತಿನ ಮುಖ್ಯಮಂತ್ರಿಯಾದ 20ನೇ ವಾರ್ಷಿಕೋತ್ಸವ ಬರಲಿದೆ. ಆದ್ದರಿಂದ ಸೆ.17ರಿಂದ ಅಕ್ಟೋಬರ್ 7ರ ವರೆಗೆ ಕೆರೆಕಟ್ಟೆಗಳ ಸ್ವಚ್ಛತೆ, ಜಲಮೂಲಗಳ ಪ್ಲಾಸ್ಟಿಕ್ ಹೆಕ್ಕುವುದು ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು. ರೋಗಿಗಳಿಗೆ ಅಗತ್ಯ ಸೇವೆ ಮಾಡಲಾಗುವುದು ಎಂದರಲ್ಲದೆ, ದೇಶದಲ್ಲಿ 100 ಸ್ಮಾರ್ಟ್ ಸಿಟಿ ನೀಡಿದ ಗೌರವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ರಾಜ್ಯಕ್ಕೆ 7 ಸ್ಮಾರ್ಟ್ ಸಿಟಿಗಳನ್ನು ನೀಡಿದ್ದು, ಅವರಿಗೆ ಜನರ ಪರವಾಗಿ ಧನ್ಯವಾದ ಸಮರ್ಪಿಸುವುದಾಗಿ ಹೇಳಿದರು.

ಸೆ. 19ರಂದು ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ದಾವಣಗೆರೆಯಲ್ಲಿ ನಡೆಯಲಿದೆ. ರಾಜ್ಯದ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಸಚಿವರು, ಆಹ್ವಾನಿತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, ಸೆಪ್ಟೆಂಬರ್ 17ರಿಂದ ಅಕ್ಟೋಬರ್ 7ರವರೆಗೆ 20 ದಿನಗಳ ಕಾಲ ಸೇವೆ ಹಾಗೂ ಸಮರ್ಪಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ದಿವ್ಯಾಂಗರಿಗೆ ನೆರವು ಮತ್ತು ಸೈಕಲ್, ಬೈಕ್, ಶ್ರವಣ ಉಪಕರಣ ಸೇರಿ ಉಪಯುಕ್ತ ಸಲಕರಣೆಗಳ ವಿತರಣೆ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂಘಟಿಸಲಾಗುವುದು. ಆಸ್ಪತ್ರೆಗಳಲ್ಲಿ ಹಣ್ಣು ಹಂಪಲು ವಿತರಿಸಲಾಗುವುದು ಎಂದರು.

ಕಿಸಾನ್ ಸನ್ಮಾನ್ ನಿಧಿ, ಉಚಿತ ಪಡಿತರ, ಗರ್ಭಿಣಿಯರ ರಜೆಯನ್ನು ಆರು ತಿಂಗಳಿಗೆ ಹೆಚ್ಚಿಸಿರುವುದು, ವಿದ್ಯಾರ್ಥಿಗಳಿಗಾಗಿ ಕೈಗೊಂಡ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲಾಗುವುದು. ಅ. 2ರಂದು ಮಹಾತ್ಮ ಗಾಂಧಿಯವರ ಜಯಂತಿ ಇದ್ದು, ವಿಶಿಷ್ಟವಾಗಿ ಆಚರಿಸಲಾಗುವುದು. ಸ್ವದೇಶಿ ವಸ್ತು ಖರೀದಿಯ ಅಭಿಯಾನ ನಡೆಯಲಿದೆ. ಪ್ರತಿಯೊಬ್ಬ ಕಾರ್ಯಕರ್ತರು ಇದರಲ್ಲಿ ಭಾಗವಹಿಸುವರು. ಖಾದಿ, ಸ್ವದೇಶಿ ಬಟ್ಟೆ ಖರೀದಿಸಲಾಗುವುದು ಎಂದರು. ಕುಂಬಾರರು, ಕಮ್ಮಾರರು ಸೇರಿ ಕೌಶಲ್ಯ ಆಧರಿತ ಬದುಕು ಸಾಗಿಸುವವರಿಂದ ವಸ್ತುಗಳನ್ನು ಖರೀದಿಸಲಾಗುತ್ತದೆ. ಟಾಯ್ಲೆಟ್ ಕಟ್ಟಿಸಿಕೊಡಲು ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರಕಾರದ ಅನುದಾನ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 7 ರವರೆಗೆ ಪ್ರಧಾನಮಂತ್ರಿಗಳು ಸ್ವೀಕರಿಸಿದ ಉಡುಗೊರೆಗಳು, ಸ್ಮರಣಿಕೆಗಳು ಇತ್ಯಾದಿಗಳು ಹರಾಜಿಗೆ ಲಭ್ಯವಿರುತ್ತದೆ. ಹರಾಜಿನಲ್ಲಿ ಗರಿಷ್ಠ ನೋಂದಣಿ ಮತ್ತು ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಪ್ರಚಾರ ಮಾಡಲಿದ್ದೇವೆ. ಸಂಗ್ರಹಿಸಿದ ದೊಡ್ಡ ಮೊತ್ತದ ನಿಧಿಯನ್ನು ‘ನಮಾಮಿ ಗಂಗೆ ಯೋಜನೆ’ಗೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ನಮೋ ಆಪ್‍ನಲ್ಲಿ ‘ಮೈ ಸೇವಾ ಟ್ರಿಬ್ಯೂಟ್’ (ನನ್ನ ಸೇವಾ ಕೊಡುಗೆ) ಮಾಡ್ಯೂಲ್ ಲಭ್ಯವಿದೆ. ಇಲ್ಲಿ ಪಕ್ಷದ ಕಾರ್ಯಕರ್ತರು ಅವರು ಕೈಗೊಂಡ ಸೇವಾ ಕಾರ್ಯದ ಬಗ್ಗೆ ವಿವರಗಳು ಮತ್ತು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಪ್ರಧಾನ ಮಂತ್ರಿಗಳಿಗೆ ಹಾರೈಸಲು ಉತ್ತೇಜನ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.