ಬ್ರಹ್ಮಾವರ ಕೃಷಿ ಡಿಪ್ಲೊಮಾ ಕಾಲೇಜು: ಕರಾವಳಿಗರು ಕೇವಲ 16 ಮಂದಿ,ಹೊರನಾಡಿಗರದ್ದೇ ಮೇಲುಗೈ


Team Udayavani, Oct 1, 2021, 3:40 AM IST

ಬ್ರಹ್ಮಾವರ ಕೃಷಿ ಡಿಪ್ಲೊಮಾ ಕಾಲೇಜು: ಕರಾವಳಿಗರು ಕೇವಲ 16 ಮಂದಿ,ಹೊರನಾಡಿಗರದ್ದೇ ಮೇಲುಗೈ

ಉಡುಪಿ: ಕರಾವಳಿ ಜಿಲ್ಲೆಗಳ ಕೃಷಿಕರ ಮಕ್ಕಳು ವೈಜ್ಞಾನಿಕ ಕೃಷಿ ಅಧ್ಯಯನ ನಡೆಸಿ ತಮ್ಮ ಜಮೀನಿನಲ್ಲಿ ಅದನ್ನು ಅಳವಡಿಸಿ ಉತ್ತಮ ಇಳುವರಿ ಪಡೆಯುವಂತಾಗಬೇಕು ಎಂಬ ಉದ್ದೇಶದಿಂದ ಸ್ಥಾಪಿಸಲಾದ ಬ್ರಹ್ಮಾವರ ಕೃಷಿ ಡಿಪ್ಲೊಮಾ ಕಾಲೇಜಿನಲ್ಲಿ ಸ್ಥಳೀಯ ವಿದ್ಯಾರ್ಥಿಗಳ ಕೊರತೆ ಎದ್ದು ಕಾಣುತ್ತಿದೆ. 2014ರಿಂದ ಇಲ್ಲಿಯ ವರೆಗೆ ತರಬೇತಿ ಪಡೆದ ಕರಾವಳಿ ವಿದ್ಯಾರ್ಥಿಗಳ ಸಂಖ್ಯೆ ಕೇವಲ 16 ಮಾತ್ರ.

ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಪ್ರಾರಂಭವಾಗಿಲ್ಲ. ಸರಕಾರ ಪ್ರತೀ ವರ್ಷ 35 ಸೀಟುಗಳನ್ನು ಮಂಜೂರು ಮಾಡುತ್ತಿದ್ದು, ಎಲ್ಲ ಸೀಟು ಭರ್ತಿಯಾಗುತ್ತದೆ. ಪ್ರತೀ ಶೈಕ್ಷಣಿಕ ವರ್ಷದಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಂದ ಸುಮಾರು 2ರಿಂದ 3 ವಿದ್ಯಾರ್ಥಿಗಳು ಮಾತ್ರ ಸೇರ್ಪಡೆಯಾಗುತ್ತಿದ್ದಾರೆ. ಕರಾವಳಿಯಲ್ಲಿ ವಿದ್ಯಾರ್ಥಿಗಳು ಕೃಷಿ ಕುಟುಂಬದಿಂದ ಬಂದವರಾಗಿದ್ದರೂ ಅವ ರನ್ನು  ಕೃಷಿ ಶಿಕ್ಷಣಕ್ಕೆ ಸೇರ್ಪಡೆ ಮಾಡುವ ಹೆತ್ತ ವರ ಸಂಖ್ಯೆ ತೀರಾ ಕಡಿಮೆ ಇದೆ. ಹೆಚ್ಚಿನವರು ಐಟಿ- ಬಿಟಿ ಉದ್ಯೋಗದತ್ತ ಒಲವು ತೋರಿಸುತ್ತಿರುವು ದರಿಂದ ಕೃಷಿಯತ್ತ ಒಲವು ಕಡಿಮೆಯಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಹೊರ ಜಿಲ್ಲೆಯ ಒಲವು:

ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಹೊರ ಜಿಲ್ಲೆಯವರಿಗೆ ಹಾಗೂ ಕರಾವಳಿಗರಿಗೆ ತಲಾ ಶೇ.50ರಷ್ಟು ಸೀಟು ಮೀಸಲಿಡಲಾಗಿದೆ. ಅಲ್ಲಿನ ರೈತ ಕುಟುಂಬದ ಹೆಚ್ಚಿನ ಮಕ್ಕಳು ಕೃಷಿಗೆ ಒಲವು ತೋರಿಸುತ್ತಿದ್ದು, ಕಳೆದ ವರ್ಷದಲ್ಲಿ 23 ವಿದ್ಯಾರ್ಥಿಗಳು ಯಶಸ್ವಿಯಾಗಿ ತರಬೇತಿ ಪಡೆದು ಹೋಗಿದ್ದಾರೆ.

ಎರಡು ವರ್ಷಗಳ ಕೋರ್ಸ್‌:

ರಾಜ್ಯ ಸರಕಾರವು 2014ರಲ್ಲಿ ಕರಾವಳಿಯ ವಿದ್ಯಾರ್ಥಿಗಳಿಗೆಂದು 4.8 ಕೋ.ರೂ. ವೆಚ್ಚದಲ್ಲಿ ಕೃಷಿ ಡಿಪ್ಲೊಮಾ ಮಹಾವಿದ್ಯಾಲಯ ಸ್ಥಾಪಿಸಿತ್ತು. 2 ವರ್ಷಗಳ ಕೋರ್ಸ್‌ ಇದಾಗಿದ್ದು, ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ವರ್ಷದಿಂದ ವರ್ಷಕ್ಕೆ ಸೀಟುಗಳನ್ನು ಏರಿಸಲಾಗುತ್ತದೆ. ಪ್ರಸಕ್ತ ಸಾಲಿನಲ್ಲಿ 35 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದೆ. ಎಸೆಸೆಲ್ಸಿಯಲ್ಲಿ ಕನಿಷ್ಠ ಶೇ.45 ಅಂಕ ಗಳಿಸಿದ 19 ವರ್ಷದೊಳಗಿ ನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿಜ್ಞಾನಿಗಳಿಂದ ಬೋಧನೆ :

ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಬೇಸಾಯಶಾಸ್ತ್ರ, ತಳಿ ವಿಜ್ಞಾನ, ಕೀಟ ಶಾಸ್ತ್ರ, ರೋಗ ಶಾಸ್ತ್ರ, ಕೃಷಿ ಯಾಂತ್ರೀಕೃತ ವಿಷಯಗಳಿಗೆ ಸಂಬಂಧಿಸಿ 25 ವಿಜ್ಞಾನಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಂದಲೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪಾಠ-ಪ್ರವಚನ ನಡೆಯುತ್ತವೆ.

ಸುಸಜ್ಜಿತ ಕಟ್ಟಡ :

ಬ್ರಹ್ಮಾವರದ ಕೃಷಿ ಕೇಂದ್ರದ ಸಮೀಪದಲ್ಲಿನ ಕಾಲೇಜು 35 ಎಕರೆ ವಿಶಾಲ ಜಾಗದಲ್ಲಿದ್ದು, ಪ್ರಾಯೋಗಿಕ ಕೃಷಿ, ತೋಟಗಾರಿಕೆ ಚಟುವಟಿಕೆಗೆ ಪೂರಕವಾಗಿದೆ. ಬೃಹತ್‌ ಕಟ್ಟಡ, ಸುಸಜ್ಜಿತ 2 ತರಗತಿ ಕೋಣೆಗಳು, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌, ಕೃಷಿ ಲ್ಯಾಬ್‌ಗಳನ್ನೊಳಗೊಂಡಿದೆ. ದೂರದ ಮನೆಗಳಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿವಿ ಆವರಣದಲ್ಲಿಯೇ ಬಾಲಕರ ಹಾಗೂ ಬಾಲಕಿಯರ ಹಾಸ್ಟೆಲ್‌ ವ್ಯವಸ್ಥೆ ಇದೆ. ಕೇಂದ್ರವು ಉಡುಪಿಯಿಂದ 12 ಕಿ.ಮೀ. ದೂರದಲ್ಲಿ ಇದೆ.

ತರಬೇತಿ ಪಡೆದ ವಿದ್ಯಾರ್ಥಿಗಳು :

ಇಸವಿ  ಕರಾವಳಿ           ಹೊರ ಜಿಲ್ಲೆ

2014-15                00           50

2015-16                05           45

2016-17                01           34

2017-18                02           33

2018-19                04           31

2019-20                02           33

2020-21                02           23

ಒಟ್ಟು 16           247

ಬ್ರಹ್ಮಾವರ ಕೃಷಿ ಡಿಪ್ಲೊಮಾ ಕಾಲೇಜಿನಲ್ಲಿ ಪ್ರತೀ ವರ್ಷ 35 ವಿದ್ಯಾರ್ಥಿಗಳು ಅಧ್ಯಯನ ಮುಗಿಸುತ್ತಿದ್ದಾರೆ. ಅವರಲ್ಲಿ  ಕೆಲವರು  ಬಿಎಸ್ಸಿ ಅಗ್ರಿಕಲ್ಚರ್‌ ಪದವಿ ಪಡೆಯಲು ಸೇರ್ಪಡೆಯಾಗುತ್ತಿದ್ದಾರೆ. ಪ್ರಸಕ್ತ ಸಾಲಿನ (2021-22) ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿಲ್ಲ. – ಡಾ| ಸುಧೀರ್‌ ಕಾಮತ್‌, ಬ್ರಹ್ಮಾವರ ಕೃಷಿ ಡಿಪ್ಲೊಮಾ ಕಾಲೇಜು ಪ್ರಾಂಶುಪಾಲರು

ತೃಪ್ತಿಕುಮ್ರಗೋಡು

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.