ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಬಿಜೆಪಿಗರ ರಕ್ತದಲ್ಲಿಯೇ ಸೇರಿಕೊಂಡಿದೆ: ವೆರೋನಿಕಾ

Team Udayavani, Oct 1, 2021, 2:43 PM IST

Veronica Cornelio stetment

ಉಡುಪಿ: ಮಹಿಳೆಯರನ್ನು ಸದಾ ಬಿಜೆಪಿಗರು ಮಾತೆ, ತಾಯಿ ಎಂದು ಕೇವಲ ನಾಟಕೀಯವಾಗಿ ಸಂಬೋಧಿಸುವುದು ಬಿಟ್ಟರೆ ನಿಜವಾಗಿ ಮಹಿಳೆಯರ ಮೇಲೆ ಇರುವ ಗೌರವ ಏನು ಎಂಬುದು ಬೆಳಗಾವಿ ಮಾಜಿ ಶಾಸಕ ಸಂಜಯ ಪಾಟೀಲ್‌ ಅವರ ಹೇಳಿಕೆಯಿಂದ ಮತ್ತೊಮ್ಮೆ ಸಾಬೀತಾಗಿದೆ ಎಂದು ಕೆಪಿಸಿಸಿ ಪ್ಯಾನಲಿಸ್ಟ್  ವೆರೋನಿಕಾ ಕರ್ನೆಲಿಯೋ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಮಹಿಳೆಯರನ್ನು ಕೀಳಾಗಿ ಕಾಣುವುದು ಬಿಜೆಪಿಗರಿಗೆ ಇದು ಹೊಸದೇನಲ್ಲ ಓರ್ವ ಶಾಸಕಿಯಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು ರಾತ್ರಿ ರಾಜಕೀಯ ಮಾಡುವ ಶಾಸಕಿ ಎನ್ನುವ ರೀತಿ ಕೀಳಾಗಿ ಮಾತನಾಡಿರುವುದು ಖಂಡನೀಯ ಎಂದರು.

ಮಹಿಳೆಯರನ್ನು ಮಾತೆ, ತಾಯಿ ಇನ್ನೆಲ್ಲಾ ಹೆಸರಿನಿಂದ ಕರೆಯುವ ಇವರಿಗೆ ಒರ್ವ ಮಹಿಳೆಗೆ ಯಾವ ರೀತಿಯಲ್ಲಿ ಗೌರವಿಸಬೇಕು ಎನ್ನುವ ಕನಿಷ್ಠ ಜ್ಞಾನ ಇಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಬಿಜೆಪಿಗರ ರಕ್ತದಲ್ಲಿಯೇ ಸೇರಿಕೊಂಡಿದೆ ಎನ್ನುವುದು ಪದೇ ಪದೇ ಇವರ ನಾಯಕರು ಮಾಡಿದ ವರ್ತನೆಗಳಿಂದ ಈಗಾಗಲೇ ಸಾಬೀತಾಗಿದೆ. ಇಷ್ಟಾದರೂ ಕೂಡ ತಾವು ಸಾಚಾ ಎನ್ನುವ ರೀತಿ ಮಾತನಾಡುತ್ತಿರುವ ಬಿಜೆಪಿಗರು ಮೊದಲು ತಮ್ಮ ಬಳಸುವ ಭಾಷೆಯನ್ನು ಬದಲಾಯಿಸಿಕೊಳ್ಳುವುದು ಸೂಕ್ತ ಎಂದು ತಿಳಿಸಿದರು.

ಇದನ್ನೂ ಓದಿ:ಮಾತು ಬಾರದ, ಕಿವಿ ಕೇಳದ ಬಾಲಕಿಯ ಮೇಲೆ ಗ್ಯಾಂಗ್ ರೇಪ್

ಓರ್ವ ಮಹಿಳಾ ಶಾಸಕಿಯಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು, ಬಿಜೆಪಿ ಆಡಳಿತದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯ ರಕ್ಷಣೆ ಇಲ್ಲ ಎನ್ನುವುದು ಇತ್ತೀಚೆಗೆ ರಾಜ್ಯದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳಿಂದ ಜಗತ್ತಿಗೆ ತಿಳಿದಿದೆ. ಮಹಿಳೆಯರು ಸ್ವತಂತ್ರವಾಗಿ ತಿರುಗಾಡುವುದು ಸಹ ಕಷ್ಟ ಸಾಧ್ಯವಾಗುತ್ತಿದೆ. ಒಂದು ಕಡೆ ದೇಶದ ಪ್ರಧಾನಿಗಳು ಬೇಟಿ ಪಡಾವೋ ಬೇಟಿ ಬಚಾವೋ ಎಂಬ ಘೋಷಣೆ ಕೂಗುತ್ತಿದ್ದರೆ ಇವರದ್ದೇ ಪಕ್ಷದ ಶಾಸಕರು, ನಾಯಕರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುವುದು ಮಾತ್ರವಲ್ಲದೆ ಮಹಿಳೆಯ ಬಗ್ಗೆ ಕೀಳಾಗಿ ಮಾತನಾಡುತ್ತಿದ್ದಾರೆ. ಇಂತಹ ವರ್ತನೆ ಬಿಜೆಪಿಗರ ನೈಜ ಸಂಸ್ಕೃತಿ ಏನು ಎನ್ನುವುದನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಹೆಣ್ಣನ್ನು ಪೂಜಿಸುವ ಸಮಾಜದಲ್ಲಿ ಒಬ್ಬ ಶಾಸಕಿಯ ಬಗ್ಗೆ ಹಗುರವಾಗಿ ಮಾತನಾಡಿರುವ ಸಂಜಯ ಪಾಟೀಲ ಅವರು ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದ ಮಹಿಳೆಯರು ಬಿಜೆಪಿಗೆ ತಕ್ಕ ಪಾಠ ಕಲಿಸುವುದರಲ್ಲಿ ಸಂಶಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಟಾಪ್ ನ್ಯೂಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.