ಕವಡಿಮಟ್ಟಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ನಮಗೆ ಸಂದ ಪುರಸ್ಕಾರ ನಮ್ಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರಿಗೆ ಸಲ್ಲುತ್ತದೆ

Team Udayavani, Oct 2, 2021, 5:40 PM IST

ಕವಡಿಮಟ್ಟಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಮುದ್ದೇಬಿಹಾಳ: ಪಂಚಾಯತ್‌ ರಾಜ್‌ ಇಲಾಖೆಯು ಕೊಡಮಾಡುವ 2020-21ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮುದ್ದೇಬಿಹಾಳ ತಾಲೂಕಿನ ಕವಡಿಮಟ್ಟಿ ಗ್ರಾಪಂ ಆಯ್ಕೆ ಆಗಿದೆ. ತಾಲೂಕಿನಿಂದ 5 ಪಂಚಾಯಿತಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆಯಾ ಪಂಚಾಯಿತಿಗಳ ಸಾಧನೆಗೆ ನೀಡುವ ಅಂಕಗಳ ಆಧಾರದಲ್ಲಿ ಹೆಚ್ಚು ಅಂಕ ಗಳಿಸಿದ್ದರಿಂದ ಈ ಪಂಚಾಯಿತಿ ಆಯ್ಕೆ ಮಾಡಿ ವಿಜಯಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯದರ್ಶಿಗಳು ಇಲಾಖೆಗೆ ಶಿಫಾರಸು
ಮಾಡಿದ್ದರು.

ಕೋವಿಡ್‌-19 ನಿಯಮಗಳ ಹಿನ್ನೆಲೆ ಪ್ರತಿ ವರ್ಷ ಅಕ್ಟೋಬರ್‌ 2ರ ಗಾಂಧಿ ಜಯಂತಿಯಂದು ಡೆಯಬೇಕಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಕಳೆದ ವರ್ಷದಿಂದ ನಡೆಸಿಲ್ಲ. ಸದ್ಯ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಿ ಪಂಚಾಯಿತಿ ಅಧ್ಯಕ್ಷ, ಪಿಡಿಒ ಅವರನ್ನು ಕರೆಸಿಕೊಂಡು ಪುರಸ್ಕಾರ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಸಂತಸ ತಂದಿದೆ: ತಮ್ಮ ಪಂಚಾಯಿತಿ ರಾಜ್ಯಮಟ್ಟದ ಪುರಸ್ಕಾರಕ್ಕೆ ಆಯ್ಕೆ ಆಗಿದ್ದಕ್ಕೆ ಹರ್ಷ ವ್ಯಕ್ತಪಡಿಸಿರುವ ಅಧ್ಯಕ್ಷ ಸಿದ್ರಾಮಯ್ಯ ಗುರುವಿನ್‌ ಮತ್ತು ಪಿಡಿಒ ಪರಶುರಾಮ ಕಸನಕ್ಕಿ ಅವರು ಉದಯವಾಣಿಯೊಂದಿಗೆ ಮಾತನಾಡಿ ನಮ್ಮ ಕಾರ್ಯನಿಷ್ಠೆ, ಜನಪರ ಚಟುವಟಿಕೆಗಳು ಮತ್ತು ಸಾಧನೆ ಪರಿಗಣಿಸಿ ಹೆಚ್ಚಿನ ಅಂಕ ದೊರೆತಿದ್ದರಿಂದ ಪುರಸ್ಕಾರ ದೊರೆತು ನಮ್ಮ ಜವಾಬ್ದಾರಿ ಹೆಚ್ಚಿಸಿದಂತಾಗಿದೆ. ತೆರಿಗೆ ವಸೂಲಾತಿ, ಮೂಲಸೌಕರ್ಯ ಒದಗಿಸುವಿಕೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಪ್ರಗತಿ, ಬೀದಿ ದೀಪ ನಿರ್ವಹಣೆ, ವೈಯುಕ್ತಿಕ ಶೌಚಾಲಯ ನಿರ್ಮಾಣ ಹೀಗೆ ಹತ್ತು ಹಲವು ಅಭಿವೃದ್ಧಿಪರ ಚಟುವಟಿಕೆಗಳು ನಮಗೆ ಪ್ರಶಸ್ತಿ ದೊರಕಿಸಿಕೊಟ್ಟಿವೆ. ನಮಗೆ ಸಂದ ಪುರಸ್ಕಾರ ನಮ್ಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರಿಗೆ ಸಲ್ಲುತ್ತದೆ ಎಂದರು.

ಹೇಗಿರುತ್ತದೆ ಆಯ್ಕೆ?: ಪುರಸ್ಕಾರಕ್ಕೆ ಪಂಚಾಯಿತಿ ಆಯ್ಕೆ ಮಾಡಲು ಹಲವು ಮಾನದಂಡ ರೂಪಿಸಲಾಗಿರುತ್ತದೆ. ಹಣಕಾಸಿನ ನಿರ್ವ ಹಣೆ, ಮೂಲ ಸೌಕರ್ಯ, ಆಡಳಿತ, ಜೀವನ ಗುಣಮಟ್ಟ ವಿಭಾಗಗಳನ್ನು ಮಾಡಿ 132 ಪ್ರಶ್ನೆಗಳಿಗೆ 250 ಅಂಕ ನಿಗದಿಪಡಿಸಲಾಗಿರುತ್ತದೆ. ಇದರಲ್ಲಿ ಸಾಧನೆ ತೋರುವ, ಅತಿ ಹೆಚ್ಚು ಅಂಕ ಪಡೆಯುವ ಪಂಚಾಯಿತಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಅಭಿವೃದ್ದಿಗೆ ವಿಶೇಷ ವಿಧಾನ ಅಳವಡಿಸಿಕೊಂಡಿದ್ದರ ಮಾಹಿತಿ ಅಪೇಕ್ಷಿತವಾಗಿರುತ್ತದೆ. ಮಾನದಂಡಗಳಿಗೆ ಉತ್ತರಿಸಲು ಆನ್‌ಲೈನ್‌ನಲ್ಲೇ ಅವಕಾಶ ಮಾಡಿಕೊಡಲಾಗಿರುತ್ತದೆ. ನೈಜ ಮಾಹಿತಿಯನ್ನು ನೀಡುವ ಮೂಲಕ ಪುರಸ್ಕಾರಕ್ಕೆ ಸ್ಪರ್ಧಿಸಿ ಅರ್ಹತೆ ಗಳಿಸಬಹುದಾಗಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.