ಮಂಗಳೂರು: ಮರೋಳಿಯಲ್ಲಿ ಚಿರತೆ ಪ್ರತ್ಯಕ್ಷ?
Team Udayavani, Oct 4, 2021, 11:58 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಮರೋಳಿಯಲ್ಲಿ ರವಿವಾರ ಸಂಜೆ ಚಿರತೆಯೊಂದು ಕಂಡು ಬಂದಿದೆ ಎನ್ನಲಾಗಿದ್ದು, ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸಂಜೆ ವೇಳೆ ಮರೋಳಿಯಲ್ಲಿ ಮಕ್ಕಳು ಆಟ ಆಡುತ್ತಿದ್ದಾಗ ಚಿರತೆಯನ್ನು ಹೋಲುವ ಪ್ರಾಣಿಯೊಂದನ್ನು ದೂರದಿಂದ ನೋಡಿದ್ದಾರೆ. ಆ ವೇಳೆ ಕತ್ತಲಾಗುತ್ತ ಬಂದಿದ್ದರಿಂದ ಅಸ್ಪಷ್ಟವಾಗಿ ಗೋಚರವಾಗಿತ್ತು. ಮೊಬೈಲ್ ಫೋನಿನಲ್ಲಿ ಜನರು ಫೋಟೋ ತೆಗೆದಿದ್ದು, ಫೋಟೋದಲ್ಲಿ ಕೂಡಾ ಸರಿಯಾಗಿ ಕಾಣಿಸುತ್ತಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೋಮವಾರ ಬೆಳಗ್ಗೆ ಪುನಃ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು ಪರಿಶೀಲನೆ ನಡೆಸುತಿದ್ದಾರೆ. ಅದು ಚಿರತೆಯೇ ಇರಬಹುದು ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ಪ್ರಶಾಂತ್ ಪೈ ಅವರು ಅಭಿಪ್ರಾಯ ಪಟ್ಟಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು