ಈಚನೂರು ಕೆರೆಗೆ ಕಲುಷಿತ ನೀರು

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಿವಾಸಿಗಳ ಆಕ್ರೋಶ „ ನಗರವಾಸಿಗಳ ಆರೋಗ್ಯಕ್ಕೆ ಕುತ್ತು

Team Udayavani, Oct 9, 2021, 6:20 PM IST

ಈಚನೂರು ಕೆರೆಗೆ ಕಲುಷಿತ ನೀರು copy

ತಿಪಟೂರು: ನಗರದ ಸಾವಿರಾರು ಜನರಿಗೆ ಕುಡಿಯುವ ನೀರೋದಗಿಸುವ ಈಚನೂರು ಕೆರೆಗೆ ಯುಜಿಡಿ ಕಲುಷಿತ ನೀರು ಸೇರ್ಪಡೆಯಾಗಿದ್ದು, ನಗರವಾಸಿಗಳಲ್ಲಿ ಆತಂಕ ಉಂಟಾಗಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಆರೋಗ್ಯಕ್ಕೆ ಕುತ್ತು ತರಲಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವತ್ಛತೆ, ನೈರ್ಮಲ್ಯತೆ ಕಾಪಾಡಿಕೊಳ್ಳಿ ನಗರವನ್ನು ಅನೈರ್ಮಲ್ಯದಿಂದ ಮುಕ್ತರಾಗಿಸೋಣ ಎಂದು ಬೊಬ್ಬೆ ಹೊಡೆಯುವ ನಗರಸಭೆಯ ನಿರ್ಲಕ್ಷ್ಯಕ್ಕೆ ನಗರವಾಸಿಗಳ ಕುಡಿಯುವ ನೀರಿಗೂ ಕಂಟಕ ಉಂಟಾಗಿದೆ. ನಗರದ ವಿವಿಧ ಬಡಾವಣೆಗಳಿಂದ ಯುಜಿಡಿ ನೀರನ್ನು ಕಲ್ಲೇಗೌಡನಪಾಳ್ಯದ ಬಳಿ ಇರುವ ಹೂವಿನಕಟ್ಟೆಗೆ ಬಿಡಲಾಗಿದೆ.

ಆದರೆ, ಅದನ್ನು ಅಧಿಕಾರಿಗಳು ಸರಿಯಾಗಿ ನಿರ್ವಹಿಸದ ಕಾರಣ ಈಡೇನಹಳ್ಳಿ ಜಾಕ್‌ವೆಲ್‌ನಲ್ಲಿ ಯುಜಿಡಿ ನೀರು ಹಾಗೂ ಮಳೆ ನೀರು ಹೆಚ್ಚಾಗಿ ಹಳ್ಳಗಳ ಮೂಲಕ ಹಿಂಡಿಸ್ಕೆರೆ ಹಾಗೂ ಹುಲ್ಲುಕಟ್ಟೆ ಮಧ್ಯೆ ಹಾಯ್ದುಹೋಗಿರುವ ಹೇಮಾವತಿ ನಾಲೆಗೆ ನುಗ್ಗುತ್ತಿರುವುದರಿಂದ ತಿಪಟೂರಿಗೆ ಕುಡಿಯುವ ನೀರು ಪೂರೈಸುವ ಈಚನೂರು ಕೆರೆಗೆ ಮಿಶ್ರಣವಾಗಿ ಇಡೀ ನಗರದ ಜನರು ಕೊಳಚೆ ಹಾಗೂ ಅನೈರ್ಮಲ್ಯಯುಕ್ತ ನೀರು ಕುಡಿಯುವಂತಾಗಿದೆ. ಇಂತಹ ಘಟನೆ ಮೊದಲೇನಲ್ಲ.

ಇದನ್ನೂ ಓದಿ:- ಶೀಘ್ರವೇ ಸಿದ್ದು-ಎಂ.ಬಿ.ಪಾಟೀಲ ಬಿಜೆಪಿ ಸೇರ್ಪಡೆ: ಕಟೀಲ್‌

ಇದು ಸಾಮಾನ್ಯವಾಗಿ ಬಿಟ್ಟಿದ್ದು ಪತ್ರಿಕೆ, ಮಾಧ್ಯಮಗಳಲ್ಲಿ ಈ ಹಿಂದೆ ಸುದ್ದಿ ಬಿತ್ತರವಾಗಿತ್ತು. ಆದರೆ, ಸುದ್ದಿ ಬಂದ ನಂತರ ಎಚ್ಚೆತ್ತುಕೊಳ್ಳುವ ಅಧಿಕಾರಿಗಳು ಶಾಶ್ವತವಾಗಿ ಈಸಮಸ್ಯೆಗೆ ಪರಿಹಾರ ಕಂಡುಕೊಳ್ಳದೆ, ತಾತ್ಕಾಲಿಕ ಕೆಲಸ ಮಾಡುವ ಮೂಲಕ ಯುಜಿಡಿ ನೀರು ಈಚನೂರು ಕೆರೆಯನ್ನು ಸೇರುವಂತೆ ಮಾಡಿದ್ದಾರೆ ಎಂಬುದು ನಾಗರೀಕರ ಆಕ್ರೋಶವಾಗಿದೆ.

ಒಟ್ಟಾರೆ ನಗರಸಭೆ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಮತ್ತು ಜವಾಬ್ದಾರಿಯುತ ಜನಪ್ರತಿನಿಧಿಗಳು ಈಗಲಾದರೂಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ತಿಪಟೂರಿನ ಜನತೆಯ ಆರೋಗ್ಯ, ಗೌರವನ್ನು ಉಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.