ಎಸ್.ನಾರಾಯಣ್ ಫೇಸ್ಬುಕ್ ಖಾತೆ ಹ್ಯಾಕ್
Team Udayavani, Oct 10, 2021, 10:39 AM IST
ಬೆಂಗಳೂರು: ನಟ, ನಿರ್ದೇಶಕ ಎಸ್.ನಾರಾಯಣ್ ಹೆಸರಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ ಮೂಲಕ ವಂಚನೆ ಮಾಡುತ್ತಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಎಸ್.ನಾರಾಯಣ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ಅಲ್ಲದೆ, ತಮ್ಮ ಫೇಸ್ಬುಕ್ ಖಾತೆ ಹ್ಯಾಕ್ ಆಗಿರುವ ಕುರಿತು ಖುದ್ದು ಎಸ್. ನಾರಾಯಣ್ ಸೆಲ್ಫಿ ವಿಡಿಯೊ ಹರಿಬಿಟ್ಟು ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ಕಿಡಿಗೇಡಿಗಳು ತಮ್ಮ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ಸ್ನೇಹಿತರಿಗೆ ಸಂದೇಶ ರವಾನಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ;- ಸರಗಳ್ಳನನ್ನು ಹಿಡಿದ ಆಟೋ ಚಾಲಕ
ಈಗಾಗಲೇ ಕೆಲವರು ಹಣ ಕಳುಹಿಸಿದ್ದಾರೆ. ದಯವಿಟ್ಟು ಯಾರು ಹಣ ಕಳುಹಿಸಬೇಡಿ. ಮುಖ್ಯವಾಗಿ ಪ್ರತಿಕ್ರಿಯಿಸಬೇಡಿ. ಒಂದು ವೇಳೆ ಮೋಸ ಹೋದರೆ ನಾನು ಹೊಣೆ ಅಲ್ಲ. ಈ ಸಂಬಂಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದೇನೆ ಎಂದು ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ