ಅ.20ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಸಚಿವ  ಬಿ. ಶ್ರೀರಾಮುಲು

Team Udayavani, Oct 13, 2021, 7:28 PM IST

fdsfre

ಬೆಂಗಳೂರು: ರಾಜ್ಯಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು  ಅ.20ರಂದು ಬೆಂಗಳೂರಿನಲ್ಲಿ ಆಚರಿಸಲಾಗುವುದು ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.

ವಿಧಾನಸೌಧದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 10.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು  ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಈ ವರ್ಷ ಐವರು ಸಾಧಕರಿಗೆ ಹಾಗೂ ಕಳೆದ ಸಾಲಿಗೆ ಐವರು ಸಾಧಕರಿಗೆ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗುವುದು. ಈಗಾಗಲೇ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು,ನಿಯಮಾನುಸಾರ ಅರ್ಹ ಸಾಧಕರನ್ನು ಸಮಿತಿಯು ಆಯ್ಕೆ ಮಾಡಲಿದೆ. ಮಹರ್ಷಿ ವಾಲ್ಮೀಕಿ ಗುರುಪೀಠದ  ಶ್ರೀ ಪ್ರಸನ್ನ ನಂದಪುರಿ ಮಹಾಸ್ಬಾಮಿಗಳು ದಿವ್ಯಸಾನಿಧ್ಯವಹಿಸಲಿದ್ದಾರೆ. ಅದಕ್ಕೂ ಮುನ್ನ ಶಾಸಕರ ಭವನದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಗುವುದು. ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಪರಿಶಿಷ್ಟ ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ‌ ಬದ್ದವಾಗಿದ್ದು, ಪರಿಶಿಷ್ಟ ವರ್ಗಗಳ ಅಭಿವೃದ್ಧಿಯ ಮೇಲುಸ್ತುವಾರಿಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್.  ನಾಗಾಂಬಿಕ ದೇವಿ ಮತ್ತು ನಿರ್ದೇಶಕರಾದ ಪಿ.ಎಸ್. ಕಾಂತರಾಜು ಅವರು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದರು.

ಸಭೆಯಲ್ಲಿ ಸಂಸದ ರಾಜ ಅಮರೇಶ ನಾಯಕ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ, ಶಾಸಕ ಇ.ತುಕಾರಾಮ್, ರಘುಮೂರ್ತಿ, ವಿಧಾನಪರಿಷತ್ ಸದಸ್ಯರಾದ ಶಾಂತರಾಂ ಬುದ್ನಸಿದ್ದಿ , ಸಮುದಾಯದ ವಿವಿಧ  ಮುಖಂಡರು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ ಉಪಕಾರ್ಯದರ್ಶಿ ಶಂಭುಲಿಂಗಯ್ಯ, ಸಚಿವರ ಆಪ್ತಕಾರ್ಯದರ್ಶಿ ರಾಘವೇಂದ್ರ, ಕರ್ನಾಟಕ ಮಹರ್ಷಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕವಿತಾ ವಾರಂಗಲ್, ಪ್ರಧಾನ ವ್ಯವಸ್ಥಾಪಕರಾದ ರಾಜು, ಉಪನಿರ್ದೇಶಕರಾದ ರಾಜಕುಮಾರ್, ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.