ಹೆದ್ದಾರಿಯಿಂದ ಪ್ರವೇಶ ಕೊಡಲು ಡಿಸಿಗೆ ಪುರಸಭೆ ನಿಯೋಗ ಮನವಿ

Team Udayavani, Oct 15, 2021, 1:20 PM IST

7

ಕುಂದಾಪುರ: ಉಪ ವಿಭಾಗೀಯ ಕೇಂದ್ರ ಕುಂದಾಪುರ ನಗರಕ್ಕೆ ರಾಷ್ಟ್ರೀಯ ಹೆದ್ದಾರಿಯಿಂದ ಪ್ರವೇಶ ನೀಡುವ ಅಗತ್ಯವಿದೆ. ಜನರ ಬೇಡಿಕೆಯಿದೆ. ವ್ಯಾಪಾರ ವಹಿವಾಟು, ಪ್ರವಾಸೋದ್ಯಮಕ್ಕೆ ಹಿನ್ನಡೆಯಾಗುತ್ತದೆ ಎಂದು ಪುರಸಭೆ ಅಧ್ಯಕ್ಷರ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಹೆದ್ದಾರಿಯನ್ನು ವಿನ್ಯಾಸಗೊಳಿಸಿ ಅನುಷ್ಠಾನಗೊಳಿಸುವಾಗ ಪುರಸಭೆಗೆ ವಿನ್ಯಾಸದ ಮಾದರಿ ಪ್ರತಿ ನೀಡದೇ ಹಾಲಾಡಿ, ಉಡುಪಿ, ಮಂಗಳೂರು ಭಾಗದಿಂದ ಕುಂದಾಪುರ ಪಟ್ಟಣಕ್ಕೆ ಬರುವ ವಾಹನಗಳಿಗೆ ಸರಿಯಾಗಿ ಪ್ರವೇಶ ಮತ್ತು ನಿರ್ಗಮನಕ್ಕೆ ಸರಿಯಾದ ವ್ಯವಸ್ಥೆ ಮಾಡದೇ ಪೂರ್ತಿ ಕುಂದಾಪುರ ಪಟ್ಟಣ ತೊಂದರೆ ಅನುಭವಿಸುವಂತಾಗಿದೆ. ಇದರ ಪರಿಣಾಮವಾಗಿ ವ್ಯಾಪಾರಿಗಳು, ಸರಕಾರಿ ಕಚೇರಿಗಳು, ಆಸ್ಪತ್ರೆ, ದೇವಸ್ಥಾನ, ಕಲ್ಯಾಣ ಮಂಟಪ, ಶಾಲೆ ಕಾಲೇಜುಗಳು ತೊಂದರೆ ಅನುಭವಿಸುವಂತಾಗಿದೆ. ಭವಿಷ್ಯದಲ್ಲಿ ಇದು ಪರಸಭೆಯ ತೆರಿಗೆ ಸಂಗ್ರಹದ ಮೇಲೂ ಪರಿಣಾಮ ಬೀರಲಿದೆ. ಕುಂದಾಪುರ ಪಟ್ಟಣ ಪ್ರವೇಶಕ್ಕೆ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಸಂಗಮ್‌ದ ಹಿಂಬದಿಯಿಂದ ಕುಂದಾಪುರ ಪ್ರವೇಶಿಸುವಂತಾಗಿದೆ.

ಬ್ರಹ್ಮಾವರ, ತೆಕ್ಕಟ್ಟೆ, ಉಡುಪಿ, ಕೋಟೇಶ್ವರ ಭಾಗಗಳಲ್ಲಿ ಬಾರಿಕೇಡ್‌ ಅಳವಡಿಸಿ ಯಾವುದೇ ದುರಂತ ಸಂಭವಿಸದಂತೆ ಪೇಟೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದೇ ಮಾದರಿ ಕುಂದಾಪುರಕ್ಕೂ ಅನುಸರಿಸಬಹುದು. ಪುರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡು, ಅತೀ ಅಗತ್ಯವಾಗಿ ನಾನಾಸಾಹೇಬ್‌ ಬೊಬ್ಬರ್ಯನಕಟ್ಟೆ ಹತ್ತಿರ ನಗರಕ್ಕೆ ಸಂಚರಿಸಲು ರಾಷ್ಟ್ರೀಯ ಹೆದ್ದಾರಿಗೆ ಅಳವಡಿಸಿರುವ ಎಡಭಾಗದ ಡಿವೈಡರ್‌ ತೆರವುಗೊಳಿಸಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವಿಸ್ ರಸ್ತೆ ಮತ್ತು ಆ ಮೂಲಕ ಪಟ್ಟಣ ಪ್ರವೇಶಿಸಲು ಅನುಕೂಲ ಕಲ್ಪಿಸುವಂತೆ ಸರ್ವ ಸದಸ್ಯರು ಹೆದ್ದಾರಿ ಅಧಿಕಾರಿಗಳಿಗ ಸೂಚಿಸಿದ್ದರು. ಯೋಜನಾ ನಿರ್ದೇಶಕರು ಅಸಮ್ಮತಿಸಿದ್ದು ಮತ್ತೂಮ್ಮೆ ಚರ್ಚಿಸು ವುದಾಗಿ ಹೈವೇ ಅಧಿಕಾರಿಗಳು ತಿಳಿಸಿದ್ದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೇಂದ್ರ ಕಚೇರಿಯು ತನ್ನ ಪ್ರಕಟನೆಯಲ್ಲಿ ಯಾವುದೇ ಪಟ್ಟಣಗಳು ಇಬ್ಭಾಗವಾಗದಂತೆ ಮತ್ತು ಅಲ್ಲಿನ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹೆದ್ದಾರಿಯನ್ನು ವಿನ್ಯಾಸಗೊಳಿಸಬೇಕು ಎಂದು ತನ್ನ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ. ನಿರ್ಧಾರ ಆಗುವವರೆಗೆ ತಾತ್ಕಾಲಿಕವಾಗಿ ಬೊಬ್ಬರ್ಯನಕಟ್ಟೆ ಹತ್ತಿರ ಪಟ್ಟಣಕ್ಕೆ ಪ್ರವೇಶ ನೀಡಲು ವಿನಂತಿಸಲಾಗಿದೆ.

ಹಾಗೆಯೇ ಹೆದ್ದಾರಿಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಶಾಸ್ತ್ರಿ ಸರ್ಕಲ್‌ನಲ್ಲಿ ಹೈಮಾಸ್ಟ್‌ ದೀಪ ಈ ವರೆಗೆ ಅಳವಡಿಸಿಲ್ಲ. ವಿನಾಯಕ ಥಿಯೇಟರ್‌ ಬಳಿ, ಹೊಟೇಲ್‌ ಹರಿಪ್ರಸಾದ್‌ ಬಳಿ, ಸಂಗಮ್‌ ಬಳಿ, ಮಳೆ ನೀರು ಹೋಗುವ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದನ್ನೆಲ್ಲ ಸರಿಪಡಿಸಬೇಕು ಎಂದು ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್‌, ಉಪಾಧ್ಯಕ್ಷ ಸಂದೀಪ್‌ ಖಾರ್ವಿ, ಸ್ಥಾಯೀ ಸಮಿತಿ ಅಧ್ಯಕ್ಷ ಶೇಖರ್‌ ಪೂಜಾರಿ, ಸದಸ್ಯರಾದ ದೇವಕಿ ಸಣ್ಣಯ್ಯ, ಗಿರೀಶ್‌ ಜಿ.ಕೆ., ಸಂತೋಷ್‌ ಶೆಟ್ಟಿ, ವನಿತಾ ಬಿಲ್ಲವ, ಶ್ವೇತಾ ಸಂತೋಷ್‌, ಪ್ರಭಾಕರ್‌ ವಿ., ನಾಮನಿರ್ದೇಶಿತ ಸದಸ್ಯರಾದ ಪುಷ್ಪಾಶೇಟ್‌, ರತ್ನಾಕರ್‌ ಶೇರುಗಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.