ಅ.20 ಬಿಡುಗಡೆಯಾಗಲಿದೆ ‘ಭಜರಂಗಿ-2’ ಟ್ರೇಲರ್
Team Udayavani, Oct 18, 2021, 11:41 AM IST
ಶಿವರಾಜ್ ಕುಮಾರ್ ನಟನೆಯ “ಭಜರಂಗಿ-2′ ಚಿತ್ರ ಅ.29ರಂದು ಬಿಡುಗಡೆಯಾಗುತ್ತಿದೆ. ಈಗ ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದೆ. ಅ.20ರಂದು ಸಂಜೆ ವೇಳೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಈ ಮೂಲಕ ಚಿತ್ರದ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಲಿದೆ.
ಎ.ಹರ್ಷ ನಿರ್ದೇಶನದ ಈ ಚಿತ್ರವನ್ನು ಜಯಣ್ಣ ಮತ್ತು ಭೋಗೇಂದ್ರ ನಿರ್ಮಾಣ ಮಾಡುತ್ತಿದ್ದಾರೆ. “ಭಜರಂಗಿ’ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಯಶಸ್ಸು ಪಡೆದಿತ್ತು. ಅದೇ ಯಶಸ್ಸಿನ ಬಳಿಕ ನಿರ್ದೇಶಕ ಹರ್ಷ ಅವರು “ಭಜರಂಗಿ 2′ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್, ಟೀಸರ್ ನೋಡಿದವರಿಗೆ ಇಲ್ಲೂ ಹೊಸದೊಂದು ಕಥೆ ಬಿಚ್ಚಿಕೊಳ್ಳುವ ನಿರೀಕ್ಷೆ ಹೆಚ್ಚಿದೆ.
ಅದೇನೆ ಇರಲಿ, “ಭಜರಂಗಿ’ ಮೂಲಕ ಶಿವರಾಜಕುಮಾರ್ ಹೊಸ ವಿಷಯ ಹೇಳಿದ್ದರು. ಈ ಬಾರಿ “ಭಜರಂಗಿ 2′ ಮೂಲಕವೂ ಹೊಸತನ ಕಟ್ಟಿಕೊಡುತ್ತಾರೆ ಎಂಬ ನಂಬಿಕೆ ಅವರ ಅಭಿಮಾನಿಗಳಲ್ಲಿದೆ.
ಇದನ್ನೂ ಓದಿ:ನಿಖೀಲ್ ಕುಮಾರ್ ‘ರೈಡರ್’ ರಿಲೀಸ್ ದಿನಾಂಕ ಫಿಕ್ಸ್
ಚಿತ್ರಕ್ಕೆ ಅರ್ಜುನ್ ಜನ್ಯಾ ಸಂಗೀತವಿದೆ. ಸ್ವಾಮಿ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ದೀಪು ಎಸ್. ಕುಮಾರ್ ಸಂಕಲನ ಮಾಡಿದರೆ, ರವಿ ಸಂತೆಹೈಕ್ಲು ಕಲಾ ನಿರ್ದೇಶನವಿದೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್