18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್‌ ಸೋಂಕು

Team Udayavani, Oct 18, 2021, 8:44 PM IST

 18 ತಿಂಗಳಲ್ಲಿ ಅತೀ ಕಡಿಮೆ ಕೋವಿಡ್‌ ಸೋಂಕು

ಸಾಂದರ್ಭಿಕ ಚಿತ್ರ.

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಕೋವಿಡ್‌ ಸೋಂಕು ಹೊಸ ಪ್ರಕರಣಗಳು 100ಕ್ಕಿಂತ ಕಡಿಮೆ ವರದಿಯಾಗಿವೆ. ಅಲ್ಲದೆ, 18 ತಿಂಗಳ ಅನಂತರ ಇದೇ ಮೊದಲ ಬಾರಿ ಹೊಸ ಪ್ರಕರಣಗಳು 200 ಆಸುಪಾಸಿಗೆ ಇಳಿಕೆಯಾಗಿವೆ.

ಸೋಮವಾರ 214 ಮಂದಿಗೆ ಸೋಂಕು ದೃಢಪಟ್ಟಿದ್ದು, 12 ಮಂದಿ ಮೃತಪಟ್ಟಿದ್ದಾರೆ. 488 ಮಂದಿ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇ. 0.3ರಷ್ಟಿದೆ.

ಎಲ್ಲಿ ಎಷ್ಟು ಮಂದಿಗೆ ಸೋಂಕು:
ಅತಿ ಹೆಚ್ಚು ಬೆಂಗಳೂರು 83 ಪ್ರಕರಣ ವರದಿಯಾಗಿದೆ. ದಕ್ಷಿಣ ಕನ್ನಡ 22, ಮೈಸೂರು 27, ತುಮಕೂರು 14, ಶಿವಮೊಗ್ಗ ಮತ್ತು ಹಾಸನ ತಲಾ 13 ಮಂದಿಗೆ ಸೋಂಕು ತಗುಲಿದ್ದು, ಉಳಿದಂತೆ 13 ಜಿಲ್ಲೆಗಳಲ್ಲಿ ಬೆರಳೆಣಿಕೆ, 12 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿದೆ. ಹೊಸ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು 12 ಸಾವಿನ ಪೈಕಿ ಬೆಂಗಳೂರು ನಗರದಲ್ಲಿ 4, ಮೈಸೂರು 2, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಮಂಡ್ಯ, ತುಮಕೂರು ಹಾಗೂ ಉಡುಪಿಯಲ್ಲಿ ತಲಾ ಒಂದು ಸಾವು ವರದಿಯಾಗಿದೆ.

ಇದನ್ನೂ ಓದಿ:ಮುಂಬರುವ ದಿನಗಳಲ್ಲಿ ಕರ್ನಾಟಕ ಎಲ್ಲಾ ಕ್ಷೇತ್ರದಲ್ಲೂ ಅಗ್ರಸ್ಥಾನ ಪಡೆಯಲಿದೆ :ಅಶ್ವತ್ಥನಾರಾಯಣ

ಕೋವಿಡ್‌ ಮೂರನೇ ಅಲೆ ಆತಂಕ ದೂರ ಎನ್ನುತ್ತಿವೆ ಈ ಅಂಶಗಳು:
*ಸಾವಿರಕ್ಕೆ ನಾಲ್ಕು ಮಂದಿಗೆ ಮಾತ್ರ ಸೋಂಕು:
ಅಕ್ಟೋಬರ್‌ನಲ್ಲಿ ಮೂರನೇ ಅಲೆ ಎಂದು ತಜ್ಞರು ಅಂದಾಜಿಸಿದ್ದರು. ಆದರೆ, ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಸೋಂಕು ಪರೀಕ್ಷೆಗಳ ಪಾಸಿಟಿವಿಟಿ ದರ ಸರಾಸರಿ ಶೇ.0.4 ರಷ್ಟಿದೆ. ಅಂದರೆ, ಸೋಂಕು ಪರೀಕ್ಷೆಗೊಳಪಡುವ ಪ್ರತಿ ಒಂದು ಸಾವಿರ ಮಂದಿಯಲ್ಲಿ ನಾಲ್ಕು ಮಂದಿಯಲ್ಲಿ ಮಾತ್ರ ಕೊರೊನಾ ಪತ್ತೆಯಾಗುತ್ತಿದೆ.
*ನಾಲ್ಕು ತಿಂಗಳಾದರೂ ಡೆಲ್ಟಾ ಪ್ಲಸ್‌ ನಾಲ್ಕೇ/ಹೆಚ್ಚಲಿಲ್ಲ:
ಮೂರನೇ ಅಲೆಗೆ ಡೆಲ್ಟಾ ಪ್ಲಸ್‌ ರೂಪಾಂತರಿ ಕಾರಣವಾಗುತ್ತದೆ ಎಂದು ವಂಶವಾಹಿ ತಜ್ಞರು ತಿಳಿಸಿದ್ದರು. ಆದರೆ, ಡೆಲ್ಟಾ ಪ್ಲಸ್‌ ಮೊದಲ ಪ್ರಕರಣಗಳ ವರದಿಯಾಗಿ ನಾಲ್ಕು ತಿಂಗಳಾದರೂ ಇವರೆಗೂ ಒಟ್ಟಾರೆ ಪ್ರಕರಣಗಳು ನಾಲ್ಕು ಮಾತ್ರ.
*ಕೇರಳ ಕಾಡಲಿಲ್ಲ:
ನೆರೆಯ ಕೇರಳದಲ್ಲಿ ವೈರಾಣು ಆರ್ಭಟಿಸಿದರೂ, ರಾಜ್ಯದಲ್ಲಿ ಅಕ್ಟೋಬರ್‌ನಿಂದೀಚೆಗೆ ಸರಾಸರಿ 420 ಪ್ರಕರಣಗಳು ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಸೋಂಕು ಹೊಸ ಪ್ರಕರಣಗಳು ಇಳಿಕೆಯಾಗಿ 200 ಆಸುಪಾಸಿಗೆ ಬಂದಿದೆ.
*ಸರ್ಕಾರವೂ ವಿನಾಯ್ತಿ:
ತಜ್ಞರು ವಿದೇಶದಿಂದ ಬರುವ ಪ್ರಯಾಣಿಕರ ತಪಾಸಣೆ ವಿನಾಯ್ತಿ ನೀಡಿದ್ದು, 1-5 ನೇ ತರಗತಿ ಮಕ್ಕಳ ಶಾಲೆ ಆರಂಭಕ್ಕೆ ಸೂಚನೆ ನೀಡಿದ್ದಾರೆ.
*ಲಸಿಕೆ ಶಕ್ತಿ:
ರಾಜ್ಯದಲ್ಲಿ ಲಸಿಕೆ ಅಭಿಯಾನ ಯಶಸ್ವಿಯಾಗಿ ಸಾಗಿದ್ದು, ಶೇ.85 ರಷ್ಟು ಮಂದಿ ಮೊದಲ ಡೋಸ್‌, ಶೇ.43 ರಷ್ಟು ಮಂದಿ ಎರಡನೂ ಡೋಸ್‌ ಪೂರ್ಣಗೊಳಿಸಿದ್ದಾರೆ. ಲಸಿಕೆಯ ಪ್ರತಿಕಾಯ ಅಂಶ ಸೋಂಕನ್ನು ಹತ್ತಿಕ್ಕಲು ಸಹಕಾರಿಯಾಗಿವೆ.

ಟಾಪ್ ನ್ಯೂಸ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Election; ಲೋಕಸಭೆ ಮುಗಿಯಿತು, ಪರಿಷತ್‌ ಹಣಾಹಣಿ ಆರಂಭ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Prajwal Revanna Case 25 ಸಾವಿರ ಪೆನ್‌ಡ್ರೈವ್‌, ಡಿಕೆಶಿ ರೂವಾರಿ: ಎಚ್‌ಡಿಕೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

Rain ಮೇ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

1-qweqwwqe

Mangaluru:ರೈಲ್ವೆ ಸ್ಟೇಷನ್ ನಲ್ಲಿ ರಿಕ್ಷಾ ಚಾಲಕರು ಮತ್ತು ಪ್ರಯಾಣಿಕರ ಹೊಡೆದಾಟ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.