ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಆದ್ಯತೆ ಬೇಕು


Team Udayavani, Oct 19, 2021, 6:30 AM IST

ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಆದ್ಯತೆ ಬೇಕು

ಸಾಂದರ್ಭಿಕ ಚಿತ್ರ.

ಸರಿಸುಮಾರು ಒಂದೂವರೆ ವರ್ಷದಿಂದ ಶಾಲೆಯತ್ತ ಸುಳಿಯದ ಪುಟ್ಟ ಮಕ್ಕಳೀಗ ಶಾಲೆಗೆ ಹೋಗಲು ಸಿದ್ಧರಾಗಬೇಕಿದೆ. ಇದೇ 25ರಿಂದ ಪ್ರಾಥಮಿಕ ಶಾಲೆಗಳೂ ಆರಂಭವಾಗಲಿದ್ದು, ರಾಜ್ಯ ಸರಕಾರ ಸೋಮವಾರ ಅಧಿಕೃತವಾಗಿ ಪ್ರಕಟನೆ ಹೊರಡಿಸಿದೆ. ಸದ್ಯ 6ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೂ ಭೌತಿಕ ತರಗತಿಗಳು ಆರಂಭವಾಗಿದ್ದು, ಇವು ಉತ್ತಮವಾಗಿಯೇ ನಡೆಯುತ್ತಿವೆ. ಜತೆಗೆ ರಾಜ್ಯದ ಯಾವುದೇ ಭಾಗದಲ್ಲೂ ಶಾಲೆಗಳಲ್ಲಿ ಕೊರೊನಾ ಕಾಣಿಸಿಕೊಂಡಿರುವುದಾಗಲಿ, ಇನ್ನಾವುದೇ ಸಮಸ್ಯೆಗಳಾಗಲಿ ಕಾಣಿಸಿಕೊಂಡಿಲ್ಲ. ಆದರೂ ಕೇರಳದಿಂದ ಬಂದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡು ಈ ಸಮಸ್ಯೆಯೂ ಸದ್ಯ ಬಗೆಹರಿದಿದೆ.

ಪ್ರಸ್ತುತದಲ್ಲಿ ತಜ್ಞರೇ ಹೇಳಿರುವಂತೆ ಮೂರನೇ ಅಲೆಯ ಅಪಾಯದಿಂದ ಪಾರಾಗಿದ್ದೇವೆ. ತ್ವರಿತಗತಿಯಲ್ಲಿ ಲಸಿಕೆ ನೀಡುತ್ತಿರುವ ಕ್ರಮವಾಗಿರಬಹುದು, ಸರಕಾರಗಳ ನಿಯಂತ್ರಣ ಕ್ರಮಗಳಿರಬಹುದು. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನಕ್ಕೆ ಸರಾಸರಿ 500ಕ್ಕಿಂತ ಕೆಳಗೆ ಇಳಿದಿವೆ. ಎಷ್ಟೋ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗುತ್ತಿವೆ. ಅಲ್ಲದೆ ಮರಣ ದರವೂ ಇಳಿದಿದೆ.

ಇದುವರೆಗೆ ರಾಜ್ಯ ಸರಕಾರ ಮತ್ತು ಹೆತ್ತವರಿಗೆ ಇದ್ದ ಒಂದೇ ಒಂದು ಆತಂಕವೆಂದರೆ ಅದು ಮೂರನೇ ಅಲೆ. ಸೆಪ್ಟಂಬರ್‌ನಲ್ಲಿಯೇ ಮೂರನೇ ಅಲೆ ಕಾಡಲಿದೆ ಎಂದು ಬಹುಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದರಲ್ಲೂ 3ನೇ ಅಲೆ ವೇಳೆ ಮಕ್ಕಳಿಗೇ ಹೆಚ್ಚು ಅಪಾಯ ಎಂಬ ಆತಂಕವೂ ಇತ್ತು. ಮಧ್ಯಾಂತರದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಸೆಪ್ಟಂಬರ್‌ನಲ್ಲಿ ಮಕ್ಕಳಲ್ಲಿ ಶೀತ, ಜ್ವರದಂಥ ಕಾಯಿಲೆಗಳು ಕಾಣಿಸಿಕೊಂಡಿದ್ದರೂ ಇದು ಕೊರೊನಾ ಆಗಿರಲಿಲ್ಲ. ಒಂದು ಲೆಕ್ಕಾಚಾರದಲ್ಲಿ ಮಕ್ಕಳಲ್ಲೂ ಕೊರೊನಾ ಪ್ರತಿಕಾಯಗಳು ಬೆಳೆದಿರುವ ಸಾಧ್ಯತೆಗಳನ್ನೂ ತಳ್ಳಿಹಾಕುವಂತಿಲ್ಲ. ಇನ್ನು ಇಡೀ ದೇಶದಲ್ಲಿ ಕೇರಳ ರಾಜ್ಯವೊಂದನ್ನು ಹೊರತುಪಡಿಸಿದರೆ ಅಷ್ಟೇನೂ ಕೊರೊನಾ ಕಾಟವೂ ಇಲ್ಲ.

ಇದನ್ನೂ ಓದಿ:ಸೆಕ್ಯೂರಿಟಿ ಗಾರ್ಡ್‌ ಸೋಗಿನಲ್ಲಿ ಮನೆ ಕಳವು: ನಾಲ್ವರು ಭದ್ರತಾ ಸಿಬ್ಬಂದಿ ಸೇರಿ ಐವರ ಬಂಧನ

ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಮಕ್ಕಳಿಗೂ ಶಾಲೆ ಆರಂಭಿಸುತ್ತಿರುವುದು ಉತ್ತಮ ನಿರ್ಧಾರವೇ ಸರಿ. ಕಳೆದ ಒಂದೂವರೆ ವರ್ಷದಿಂದಲೂ ಮಕ್ಕಳು ಶಾಲೆಯನ್ನೇ ಮರೆತಿದ್ದಾರೆ. ಇದರ ನಡುವೆ ಆನ್‌ಲೈನ್‌ ಪಾಠದ ಕಿರಿಕಿರಿಗೂ ತುತ್ತಾಗಿದ್ದಾರೆ. ಒಂದನೇ ತರಗತಿಯಿಂದ ಐದನೇ ತರಗತಿ ಮಕ್ಕಳನ್ನು ಆನ್‌ಲೈನ್‌ ಪಾಠದ ನೆಪದಲ್ಲಿ ಕಂಪ್ಯೂಟರ್‌ ಅಥವಾ ಮೊಬೈಲ್‌ ಮುಂದೆ ಕುಳಿಸುವುದು ಕಷ್ಟವಾಗಿತ್ತು ಎಂಬುದೂ ಎಲ್ಲರಿಗೂ ಗೊತ್ತಿರುವ ವಿಚಾರ. ಹೀಗಾಗಿ ಮಕ್ಕಳು ಶಾಲೆಗೆ ಹೋದರೆ ಕಲಿಯುವ ಸಾಮರ್ಥ್ಯ ಇನ್ನಷ್ಟು ಹೆಚ್ಚಳವಾಗಬಹುದು. ಮಕ್ಕಳ ಕಲಿಕಾ ಸಾ ಮರ್ಥ್ಯ ಹೆಚ್ಚಿಸುವುದು ಶಿಕ್ಷಕ ಸಮುದಾಯಕ್ಕೂ ದೊಡ್ಡ ಸವಾಲು. ಮಕ್ಕಳ ಮಾನಸಿಕತೆಯನ್ನು ಅರ್ಥ ಮಾಡಿಕೊಂಡು ಅವರ ಕಲಿಕಾ ಸಾಮರ್ಥ್ಯ ವೃದ್ಧಿಸುವತ್ತ ಶಿಕ್ಷಕರು ಹಾಗೂ ಹೆತ್ತವರು ಗಮನಹರಿಸಬೇಕು. ಶಾಲೆ ಎನ್ನುವುದು ಮಕ್ಕಳಿಗೆ ಶಿಕ್ಷೆ ಎಂಬ ಅಭಿಪ್ರಾಯ ಬಾರದಂತೆ ನೋಡಿಕೊಳ್ಳುವ ಅಗತ್ಯವಿದೆ.

ಅ.25ರಂದು ಶಾಲೆ ಆರಂಭವಾಗಲಿದೆ. ಆದರೆ ಇಲ್ಲಿ ಹೆತ್ತವರಾಗಲಿ ಅಥವಾ ಶಿಕ್ಷಕರಾಗಲಿ ಮೈಮರೆಯಲೇಬಾರದು. ಎಲ್ಲ ಕೊರೊನಾ ನಿಯಮಾವಳಿಗಳನ್ನು ಪಾಲಿಸಿಕೊಂಡೇ ಶಾಲಾ ತರಗತಿ ನಡೆಸಬೇಕು. ಇಲ್ಲಿ ಒಂದು ಚೂರು ಯಾಮಾರಿದರೂ ಸಂಕಷ್ಟ ಎದುರಾಗುತ್ತದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಹೀಗಾಗಿ ಎಲ್ಲ ಎಚ್ಚರಿಕೆಯನ್ನು ಪಾಲನೆ ಮಾಡಿಕೊಂಡು ಶಾಲೆಗಳನ್ನು ತೆರೆಯಲಿ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.