ಮೆರವಣಿಗೆಗೆ ತಡೆ; ಮುಸ್ಲಿಮರ ಆಕ್ರೋಶ

Team Udayavani, Oct 19, 2021, 10:30 AM IST

4

ವಾಡಿ: ಪಟ್ಟಣದಲ್ಲಿ ಸೋಮವಾರ ಈದ್‌ ಮಿಲಾದ್‌ ಹಬ್ಬದ ಸಾಂಪ್ರದಾಯಿಕ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದಿರುವುದು ಮುಸ್ಲಿಂ ಯುವಕರ ಆಕ್ರೋಶಕ್ಕೆ ಕಾರಣವಾಯಿತು.

ಸ್ಥಳೀಯ ಜಾಮಿಯಾ ಮಸೀದಿಯಿಂದ ಹೊರಡಬೇಕಿದ್ದ ಇಸ್ಲಾಂ ಧಾರ್ಮಿಕ ಸ್ತಬ್ಧಚಿತ್ರಗಳ ಮೆರವಣಿಗೆಗೆ ಅಡ್ಡಲಾಗಿ ಬ್ಯಾರಿಕೇಡ್‌ ಅಳವಡಿಸಿ ರ್ಯಾಲಿ ಸಾಗದಂತೆ ನೋಡಿಕೊಂಡ ಪೊಲೀಸರ ನಡೆ ಪ್ರಶ್ನಿಸಿದ ಕೆಲವರು ವಾಗ್ವಾದ ನಡೆಸಿದರು.

ಪ್ರತಿವರ್ಷದಂತೆ ವಿವಿಧ ಬಡಾವಣೆಗಳಿಂದ ಜಾಮಿಯಾ ಮಸೀದಿ ವರೆಗೆ ತಳ್ಳುಗಾಡಿಯಲ್ಲಿ ಹಲವು ಸ್ತಬ್ಧಚಿತ್ರಗಳನ್ನು ತಂದಿದ್ದ ಮುಸ್ಲಿಂ ಯುವಕರ ಗುಂಪುಗಳು, ಅವುಗಳನ್ನು ಒಂದೆಡೆ ಸಾಲಾಗಿ ನಿಲ್ಲಿಸಿ ಮೆರವಣಿಗೆ ಹೊರಡಲು ಅಣಿಯಾಗಿದ್ದರು. ಮಧ್ಯೆ ಪ್ರವೇಶಿಸಿದ ಪಿಎಸ್‌ಐ ವಿಜಯಕುಮಾರ ಭಾವಗಿ, ಸರ್ಕಾರದ ಕೋವಿಡ್‌ ಮಾರ್ಗಸೂಚಿಗಳನ್ವಯ ಈದ್‌ ಮೆರವಣಿಗೆಗೆ ಅವಕಾಶ ನೀಡಲಾಗಿಲ್ಲ. ದಯವಿಟ್ಟು ಯಾರೂ ಮೆರವಣಿಗೆ ಹೊರಡುವ ಪ್ರಯತ್ನ ಮಾಡಬಾರದು. ವಾಪಸ್‌ ಹೋಗಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಯಾವುದೇ ಗದ್ದಲ, ಗಲಾಟೆ ಮಾಡದೆ ಶಾಂತಿಯುತ ಮೆರವಣಿಗೆ ಹೊರಡುತ್ತೇವೆ ಅವಕಾಶ ನೀಡಬೇಕು ಎಂದು ಮುಸ್ಲಿಂ ಮುಖಂಡರು ಮನವಿ ಮಾಡಿದರು. ಇದನ್ನು ನಿರಾಕರಿಸಿದ ಪಿಎಸ್‌ಐ ಭಾವಗಿ, ಸರ್ಕಾರ ಹೊರಡಿಸಿರುವ ಕಾನೂನು ಪಾಲಿಸುವುದು ನಮ್ಮ ಕರ್ತವ್ಯ. ಆದೇಶ ಉಲ್ಲಂಘಿ ಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ಇತರ ಧಾರ್ಮಿಕ, ರಾಜಕೀಯ ಸಭೆ ಮೆರವಣಿಗೆಗೆ ಅವಕಾಶ ನೀಡುತ್ತೀರಿ. ನಮ್ಮ ಹಬ್ಬದ ಮೆರವಣಿಗೆಯನ್ನೇಕೆ ತಡೆಯುತ್ತೀರಿ? ಅವರಿಗೊಂದು ಕಾನೂನು ನಮಗೊಂದು ಕಾನೂನಾ ಎಂದು ಕೆಲ ಯುವಕರು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯರು ಕಿರಿಯರನ್ನು ಸಮಾಧಾನಪಡಿಸಿ ಮೆರವಣಿಗೆ ರದ್ದುಗೊಳಿಸಿದರು. ಮೆಕ್ಕಾ, ಮದೀನಾ ಸೇರಿದಂತೆ ಖುರಾನ್‌, ಚಾಂದ್‌, ಮಿನಾರ್‌ ಪ್ರತಿಕೃತಿಗಳನ್ನು ಮೆರವಣಿಗೆಗೆಂದು ಸಿದ್ಧಪಡಿಸಿ ತಂದವರು ವಾಪಸ್‌ ಬಡಾವಣೆಗೆ ಸಾಗಿಸಿದರು. ಜಾಮಿಯಾ ಮಸೀದಿ ಮುಂದೆ ಜಮಾಯಿಸಿದ್ದ ಯುವಕರು ಧರ್ಮದ ನೂರಾರು ಧ್ವಜಗಳನ್ನು ಪ್ರದರ್ಶಿಸಿದರು. ಇದೇ ವೇಳೆ ಅತಿಥಿಗಳಾಗಿ ಆಗಮಿಸಿದ್ದ ಅನ್ಯಕೋಮಿನ ಮುಖಂಡರನ್ನು ಮಸೀದಿಯಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

1-wqeewqewq

UP ರ್‍ಯಾಲಿಯಲ್ಲಿ ಗಲಾಟೆ: ಮಾತಾಡದೆ ರಾಹುಲ್‌, ಅಖಿಲೇಶ್‌ ವಾಪಸ್‌!

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

ಜೂನ್‌ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ

Amit Shah

NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

Prajwal ಬಂಧನಕ್ಕೆ ರೆಡ್‌ ಕಾರ್ನರ್‌ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.