28ರಂದು ಸಿಂಧನೂರಿನಲ್ಲಿ ರೈತರ ಸಮಾವೇಶ: ಶರಣಪ್ಪ

Team Udayavani, Oct 19, 2021, 1:40 PM IST

18

ರಾಯಚೂರು: ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲಬೆಲೆಗೆ ಖರೀದಿಸಬೇಕು, ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಮುಂದಿಟ್ಟುಕೊಂಡು ಸಿಂಧನೂರು ಎಪಿಎಂಸಿ ಸಭಾಂಗಣದಲ್ಲಿ ಅ.28ರಂದು ರೈತರ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ಕೃಷಿ ವಲಯ ದುರ್ಬಲಗೊಳಿಸಲು ಎಲ್ಲ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ರೈತರ ಆದಾಯ ದುಪ್ಪಟ್ಟುಗೊಳಿಸುವುದಾಗಿ ಘೋಷಣೆ ಮಾಡಿದ್ದ ಬಿಜೆಪಿ, ಈವರೆಗೂ ಅನುಷ್ಠಾನಕ್ಕೆ ಮುಂದಾಗಿಲ್ಲ. ರೈತರ ಬೆಳೆಗಳಿಗೆ ಬೆಲೆ ನೆಲಕಚ್ಚಿದರೂ ಸರ್ಕಾರ ಮಾತ್ರ ನೆರವಿಗೆ ಬರುತ್ತಿಲ್ಲ ಎಂದರು.

ಸ್ವಾಮಿನಾಥನ್‌ ವರದಿ ಜಾರಿಗೊಳಿಸುವುದಾಗಿ ಘೋಷಣೆ ಮಾಡಿ ಏಳು ವರ್ಷ ಕಳೆದರೂ ಜಾರಿ ಮಾಡಿಲ್ಲ. ಹೂಡಿದ ಹಣ ಮರಳಿ ಬಾರದಂತಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಷ್ಟಾದರೂ ಸರ್ಕಾರ ಉತ್ಪಾದನೆ, ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ, ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್‌ ಕಾಯ್ದೆ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸಿ ದೇಶದ ಕೃಷಿ ಕ್ಷೇತ್ರವನ್ನು ಬಂಡವಾಳ ಶಾಹಿಗಳ ಕೈಗೆ ನೀಡಲು ಮುಂದಾಗಿದೆ. ಇದನ್ನೇ ದೇಶದ ಸರ್ವತೋಮುಖ ಅಭಿವೃದ್ಧಿ ಎಂದು ಬಿಂಬಿಸುತ್ತಿರುವುದು ಖಂಡನೀಯ ಎಂದರು.

ಇದನ್ನೂ ಓದಿ: ಕಾಂಗ್ರೆಸ್-ಬಿಜೆಪಿ ಎರಡೂ ಪರ್ಸೆಂಟೆಜ್ ಪಕ್ಷಗಳು: ಮಾಜಿ ಸಿಎಂ ಕುಮಾರಸ್ವಾಮಿ

ಭತ್ತ ದರ ಕುಸಿತವಾಗಿ ರೈತರು ಕಂಗೆಟ್ಟಿದ್ದಾರೆ. ರಸಗೊಬ್ಬರ ಬೆಲೆ ಏರುತ್ತಲೇ ಇದೆ. ಇಂಧನ ಬೆಲೆಗಳು ಕೈ ತಪ್ಪಿ ಹೋಗಿವೆ. ಖರ್ಚು ವೆಚ್ಚಗಳನ್ನು ನಿಭಾಯಿಸಲಾಗದೆ ಇರುವಾಗಲೇ ರೋಗ ಬಾಧೆಯ ಮಧ್ಯೆ ಭತ್ತ ಬೆಳೆಗಾರರಿಗೆ ಬೆಲೆಯೇ ಇಲ್ಲದಾಗಿದೆ. ಪ್ರತಿ ಕ್ವಿಂಟಲ್‌ ಭತ್ತಕ್ಕೆ ಒಂದು ಸಾವಿರ ರೂ. ಪ್ರೋತ್ಸಾಹ ಧನ ನೀಡಿ ಬೆಂಬಲ ಬೆಲೆ ನಿಗದಿ ಮಾಡಬೇಕು. ಹೋಬಳಿ ಕೇಂದ್ರದಲ್ಲಿಯೂ ಖರೀದಿ ಕೇಂದ್ರ ಪ್ರಾರಂಭಿಸಿ ವಾರದೊಳಗೆ ಹಣ ಪಾವತಿ ವ್ಯವಸ್ಥೆ ಮಾಡಬೇಕಿದೆ. ನಿರಂತರ ವಿದ್ಯುತ್‌ ಪೂರೈಕೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ ರದ್ದು, ರೈತರ ಸಾಲಮನ್ನಾ ಬೇಡಿಕೆಗಳನ್ನು ಇಟ್ಟುಕೊಂಡು ಸಮಾವೇಶ ನಡೆಸಲಾಗುತ್ತದೆ ಎಂದರು.

ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಸಮಾವೇಶ ಉದ್ಘಾಟಿಸುವರು. ಜಿಲ್ಲೆಯ ಎಲ್ಲ ತಾಲೂಕುಗಳ ರೈತರು ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಸಮಾವೇಶ ದಿನದಂದು ಜಿಲ್ಲಾಧಿಕಾರಿಗಳು ಸಿಂಧನೂರಿಗೆ ಆಗಮಿಸಿ ಮನವಿ ಪಡೆಯಬೇಕು. ಇಲ್ಲದೇ ಹೋದಲ್ಲಿ ಮುಂದಾಗುವ ಅನಾಹುತಗಳಿಗೆ ಆಡಳಿತವೇ ಹೊಣೆ ಆಗಬೇಕು ಎಂದು ಎಚ್ಚರಿಸಿದರು. ಸಂಘಟನೆ ಮುಖಂಡರಾದ ನರಸಪ್ಪ ದೇವಸೂಗೂರು, ರಾಮಬಾಬು, ಶಿವರಾಜ್‌ ಸಾಸಲಮರಿ, ರಾಮಪ್ಪ ನಾಯಕ ಜವಳಗೇರಾ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.