ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

Team Udayavani, Oct 21, 2021, 6:21 AM IST

ಅ.25ರವರೆಗೆ ಮುಂಗಾರು ಮಳೆ- ದಕ್ಷಿಣ ಒಳನಾಡು,ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಮೇಲ್ಮೆ„ ಸುಳಿಗಾಳಿ ಇರುವುದರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ. 25ರ ವರೆಗೆ ಮುಂಗಾರು ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಒಣಹವೆ ಇರಲಿದ್ದು, ಅ.22ರಿಂದ 24ರ ವರೆಗೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆ ಸೇರಿದಂತೆ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ತಮಿಳುನಾಡು ಕರಾವಳಿ ದಕ್ಷಿಣ ಭಾಗದಲ್ಲಿ ಮೇಲ್ಮೆ„ ಸುಳಿಗಾಳಿ 1.5 ಕಿ.ಮೀ. ಎತ್ತರದವರೆಗೂ ಬೀಸುವುದರಿಂದ ರಾಜ್ಯದಲ್ಲಿ ಮಳೆಯಾಗಲಿದೆ. ಅ.25ರಂದು ಮುಂಗಾರು ಮಾರುತಗಳು ಅಂತ್ಯವಾಗಲಿವೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ.

ಅಕ್ಟೋಬರ್‌ನಲ್ಲಿ 305 ಮಿ.ಮೀ. ಮಳೆ: ಈ ಬಾರಿ ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮೇಲ್ಮೆ„ ಸುಳಿಗಾಳಿ ಬೀಸುತ್ತಿರುವುದರಿಂದ ಮುಂಗಾರು ಮಾರುತಗಳು ಮುಂದುವರಿಯುತ್ತಿವೆ. ಮಾತ್ರವಲ್ಲ, ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಅಕ್ಟೋಬರ್‌ ತಿಂಗಳಿನಲ್ಲಿ 170 ಮಿ.ಮೀ. ವಾಡಿಕೆ ಮಳೆಯಾಗಬೇಕು. ಆದರೆ, 20 ದಿನಗಳಲ್ಲಿ ಬರೋಬ್ಬರಿ 305 ಮಿ.ಮೀ. ಮಳೆಯಾಗಿದೆ. ವಾಡಿಕೆಗಿಂತ 135 ಮಿ.ಮೀ. ಜಾಸ್ತಿಯಾಗಿದೆ. ಕಳೆದ ವರ್ಷ 204.3 ಮಿ.ಮೀ. ಮಳೆಯಾಗಿತ್ತು. ಕಳೆದ ವರ್ಷಕ್ಕಿಂತಲೂ ಸುಮಾರು 100 ಮಿ.ಮೀ. ಮಳೆ ಜಾಸ್ತಿಯಾಗಿದೆ.

ಇದನ್ನೂ ಓದಿ:ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

26ರಂದು ಹಿಂಗಾರು ಪ್ರವೇಶ
25ರಂದು ಮುಂಗಾರು ಮಾರುತಗಳು ಅಂತ್ಯವಾಗಲಿದ್ದು, 26 ಕ್ಕೆ ರಾಜ್ಯಕ್ಕೆ ಹಿಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ತಜ್ಞ ಸದಾನಂದ ಅಡಿಗ ತಿಳಿಸಿದ್ದಾರೆ. ಸಾಮಾನ್ಯವಾಗಿ ಸೆ.30ಕ್ಕೆ ಮುಂಗಾರು ಅಂತ್ಯವಾಗಲಿದೆ. ಆದರೆ, ಈ ಬಾರಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಮೇಲ್ಮೆ„ ಸುಳಿಗಾಳಿ ಬೀಸಿದ್ದರಿಂದ ಮುಂಗಾರು ಮಾರುತಗಳು ಇನ್ನೂ ಅಂತ್ಯವಾಗಿಲ್ಲ. ಅ.15ರ ವೇಳೆಗೆ ಮುಂಗಾರು ಅಂತ್ಯವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಇದೀಗ ಮತ್ತೆ ಹತ್ತು ದಿನ ಮುಂದುವರಿದಿದ್ದು, 25ರಂದು ಅಂತ್ಯವಾಗಲಿವೆ. 27ರಿಂದ ಹಿಂಗಾರು ಪ್ರವೇಶವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

2005ರಲ್ಲಿ ಅತಿ ಹೆಚ್ಚು ಮಳೆ:   ಅಕ್ಟೋಬರ್‌ ತಿಂಗಳಿನಲ್ಲಿ 2005 ರಲ್ಲಿ  605.6 ಮಿಮೀ ಮಳೆಯಾಗಿದ್ದು, ಈ ವರೆಗಿನ ದಾಖಲೆ.  2017ರಲ್ಲಿ 385.7 ಮಿಮೀ, 2014ರಲ್ಲಿ 343.8 ಮಿಮೀ, 2020ರಲ್ಲಿ 204.3 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಂಕಿ ಅಂಶ ನೀಡಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.