ಹಾಡಹಗಲೇ ಒಂಟಿ ಮಹಿಳೆ ಭೀಕರ ಹತ್ಯೆ

ಚಾಕು, ಕತ್ತರಿಯಿಂದ 17ಕೂ ಹೆಚ್ಚು ಬಾರಿ ಇರಿದು ಕೊಲೆ |ಅಫ್ರೀನಾಖಾನಂ ಪರಿಚಯಸನಿಂದಲೇ ಕೃತ್ಯ

Team Udayavani, Oct 21, 2021, 10:11 AM IST

crime 2

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ್ದ ದುಷ್ಕರ್ಮಿ ಒಂಟಿ ಮಹಿಳೆಯನ್ನು ಕತ್ತರಿ, ಚಾಕುವಿ ನಿಂದ ಇರಿದು ಕೊಲೆಗೈದು, ಬಳಿಕ ಶವಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಭೀಕರ ಘಟನೆ ಬನಶಂಕರಿಯಲ್ಲಿ ಮಂಗಳವಾರ ನಡೆದಿದೆ.

ಬನಶಂಕರಿಯ ಯಾರಬ್‌ ನಗರ ನಿವಾಸಿ ಅಫ್ರೀನಾಖಾನಂ (28) ಕೊಲೆಯಾದ ಮಹಿಳೆ. ಘಟನೆ ಸಂಬಂಧ ಮಹಿಳೆಯ ಪತಿ ಲಾಲುಖಾನ್‌ ಎಂಬಾತ ನನ್ನು ವಶಕ್ಕೆ ಪಡೆಯಲಾಗಿದೆ. ಮಂಗಳವಾರ ಮಧ್ಯಾಹ್ನ ಕೃತ್ಯ ನಡೆದಿದ್ದು, ಸಂಜೆ 6 ಗಂಟೆ ಸುಮಾರಿಗೆ ಮನೆಯಿಂದ ಬರುತ್ತಿದ್ದ ಹೊಗೆ ಕಂಡು ಸ್ಥಳೀಯರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆಯಿದ್ದು, ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಗುರಪ್ಪನಪಾಳ್ಯದಲ್ಲಿರುವ ಟಿಂಬರ್‌ ಯಾರ್ಡ್‌ನಲ್ಲಿ ಕೆಲಸ ಮಾಡುವ ಲಾಲುಖಾನ್‌ 8 ವರ್ಷಗಳ ಹಿಂದೆ ಅಫ್ರೀನಾಖಾನಂರನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ ಅಫ್ರೀನಾಖಾನಂ ಮನೆಯಲ್ಲಿಯೇ ಟೈಲರಿಂಗ್‌ ಕೆಲಸ ಮಾಡಿಕೊಂಡಿದ್ದರು. ದಂಪತಿ ಮಕ್ಕಳ ಜತೆ ಯಾರಬ್‌ನಗರದಲ್ಲಿ ಪಾಷಾ ಎಂಬವರ ಮನೆಯನ್ನು ಭೋಗ್ಯಕ್ಕೆ ಪಡೆದು ವಾಸವಾಗಿದ್ದರು. ಈ ಮಧ್ಯೆ ಪತಿ ಲಾಲುಖಾನ್‌, ಪತ್ನಿಯ ಮೇಲೆ ಅನುಮಾನಿಸಿ ಆರೇಳು ತಿಂಗಳಿಂದ ಜಗಳ ಮಾಡುತ್ತಿದ್ದು, ಹಲ್ಲೆ ಕೂಡ ನಡೆಸುತ್ತಿದ್ದ.

ಮಂಗಳವಾರ ಬೆಳಗ್ಗೆಯೂ ದಂಪತಿ ನಡುವೆ ವಾಗ್ವಾದ ನಡೆದಿದ್ದು, ಪತಿ ಟಿಂಬರ್‌ ಯಾರ್ಡ್‌ಗೆ ಕೆಲಸಕ್ಕೆ ಹೋಗಿದ್ದಾನೆ. ಅಫ್ರೀನಾಖಾನಂ ಮನೆಯಲ್ಲಿ ಒಬ್ಬರೇ ಟೈಲರಿಂಗ್‌ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಪರಿಚಯಸ್ಥನೊಬ್ಬ ಮನೆಗೆ ಬಂದಿದ್ದು ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

ದಟ್ಟವಾದ ಹೊಗೆಯಿಂದ ಘಟನೆ ಬೆಳಕಿಗೆ: ಮಂಗಳವಾರ ಸಂಜೆ ಆರು ಗಂಟೆ ಸುಮಾರಿಗೆ ಅಫ್ರೀನಾಖಾನಂ ಮನೆಯಿಂದ ದಟ್ಟವಾದ ಹೊಗೆ ಬರುತ್ತಿತ್ತು. ಅದನ್ನು ಗಮನಿಸಿದ ಸ್ಥಳೀಯರು ಆಕೆಯ ಸಹೋದರ ಇಮ್ರಾನ್‌ಗೆ ಮಾಹಿತಿ ನೀಡಿದ್ದಾರೆ. ಆತ ತನ್ನ ಬಾವ ಲಾಲುಖಾನ್‌ಗೆ ಮಾಹಿತಿ ನೀಡಿದ್ದಾನೆ.

ಅಷ್ಟರಲ್ಲಿ ಸ್ಥಳೀಯರ ಜತೆ ಸೇರಿಕೊಂಡು ಇಮ್ರಾನ್‌ ಬಾಗಿಲು ಮುರಿದು ಒಳ ಹೋಗಿದ್ದು, ನೀರು ಹಾಕಿ ಹೊಗೆ ಆರಿಸಿದ್ದು, ಹಾಸಿಗೆ ಮೇಲೆ ಮೃತ ದೇಹ ಬಿದ್ದಿರುವುದು ಕಂಡುಬಂದಿದೆ. ವಿಷಯ ತಿಳಿದು ಬನಶಂಕರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಅನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪತಿ ಲಾಲುಖಾನ್‌ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ. ಪತ್ನಿ ಬೇರೊಬ್ಬ ಪುರುಷನ ಜತೆ ಆತ್ಮೀಯತೆ ಹೊಂದಿದ್ದಾರೆ ಎಂದು ಶಂಕಿಸಿ ಲಾಲುಖಾನ್‌ ಜಗಳ ಮಾಡುತ್ತಿದ್ದ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಮತ್ತೂಂದೆಡೆ ಘಟನೆ ವೇಳೆ ಲಾಲುಖಾನ್‌ ಕೆಲಸದ ಸ್ಥಳದಲ್ಲೇ ಇದ್ದ ಎಂಬುದು ಪತ್ತೆಯಾಗಿದೆ. ಹೀಗಾಗಿ ಆಕೆಗೆ ಪರಿಚಯಸ್ಥನೇ ಕೃತ್ಯ ಎಸಗಿದ್ದಾನೆ ಎಂಬ ಅನುಮಾನವಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

17 ಕ್ಕೂ ಹೆಚ್ಚು ಬಾರಿ ಇರಿದು ಕೊಲೆ-

ಮಹಿಳೆ ಜತೆ ಜಗಳ ಮಾಡಿರುವ ವ್ಯಕ್ತಿ ಮನೆಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ. ಬಳಿಕ ಆಕೆಯನ್ನು ಹಾಸಿಗೆ ಮೇಲೆ ತಳ್ಳಿ, ಅಡುಗೆ ಮನೆಯಲ್ಲಿದ್ದ ಚಾಕುವಿನಿಂದ ಮೊದಲಿಗೆ ಕುತ್ತಿಗೆ, ಹೊಟ್ಟೆ, ಮಖ, ಕೈ, ಕಾಲುಗಳಿಗೆ ನಾಲ್ಕೈದು ಬಾರಿ ಇರಿದಿದ್ದು, ಚಾಕು ಬೆಂಡ್‌ ಆಗಿದ್ದರಿಂದ ಅದನ್ನು ಬಿಸಾಡಿದ್ದಾನೆ.

ಅನಂತರ ಅಲ್ಲೇ ಇದ್ದ ಕತ್ತರಿಯಿಂದ ಕುತ್ತಿಗೆ ಭಾಗಕ್ಕೆ ನಾಲ್ಕು ಬಾರಿ ಮತ್ತು ಹೊಟ್ಟೆಗೆ 9 ಬಾರಿ ಹೀಗೆ ದೇಹದ ವಿವಿಧೆಡೆ 17ಕ್ಕೂ ಹೆಚ್ಚು ಬಾರಿ ಇರಿದು ಭೀಕರವಾಗಿ ಇರಿದು ಕೊಲೆಗೈದಿದ್ದಾನೆ. ಬಳಿಕ ಮನೆಯ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

ಸಾಕ್ಷ್ಯನಾಶಕ್ಕೆ ಯತ್ನ ಅನಂತರ ಬಟ್ಟೆಗಳನ್ನು ಗ್ಯಾಸ್‌ ಸ್ಟೌವ್‌ನಿಂದ ಸುಟ್ಟಿ ಆ ಬಟ್ಟೆಗಳನ್ನು ಹಾಸಿಗೆ ಮೇಲಿದ್ದ ಆಕೆಯ ಶವದ ಮೇಲೆ ಎಸಿದ್ದಾನೆ. ಪರಿಣಾಮ ಆಕೆಯ ದೇಹ ಶೇ.30ರಷ್ಟು ಸುಟ್ಟಿದ್ದು, ಅರ್ಧ ಹಾಸಿಗೆ ಕೂಡ ಸುಟ್ಟಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.