ಗೊಂಡ ಸಮುದಾಯದಿಂದ ಸಿಎಂ ಬಳಿ ನಿಯೋಗ

Team Udayavani, Oct 22, 2021, 3:09 PM IST

—–18

ಬೀದರ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತ ಕೋಶ) ವರದಿ ಪಡೆದ ನಂತರವೇ ಗೊಂಡ ಸೇರಿದಂತೆ ವಿವಿಧ ಜಾತಿಗಳ ಸಿಂಧುತ್ವ ಪ್ರಮಾಣಪತ್ರ ನೀಡುವಂತೆ ಹೊರಡಿಸಿರುವ ಆದೇಶ ಹಿಂಪಡೆಯಲು ಒತ್ತಾಯಿಸಿ ಜಿಲ್ಲೆಯ ಗೊಂಡ ಸಮುದಾಯದ ಮುಖಂಡರು ನವೆಂಬರ್‌ ಮೊದಲ ವಾರದಲ್ಲಿ ಜನಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಳಿಗೆ ನಿಯೋಗ ಒಯ್ಯಲು ನಿರ್ಧರಿಸಿದ್ದಾರೆ.

ಗುರುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಕಲಬುರ್ಗಿ-ಬೀದರ-ಯಾದಗಿರಿ ಹಾಲು ಒಕ್ಕೂಟದ ನಿರ್ದೇಶಕ ಮಲ್ಲಿಕಾರ್ಜುನ ಬಿರಾದಾರ, ರಾಜ್ಯ ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್‌ ಚಿದ್ರಿ ಹಾಗೂ ಜಿಲ್ಲಾ ಗೊಂಡ ನೌಕರರ ಸಂಘದ ಅಧ್ಯಕ್ಷ ಬಸವರಾಜ ಮಾಳಗೆ ಈ ಮಾಹಿತಿ ನೀಡಿದರು.

ಜಿಲ್ಲಾ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಗೊಂಡ ಸಂಘದ ಅಧ್ಯಕ್ಷ ಬಾಬುರಾವ್‌ ಮಲ್ಕಾಪೂರ ಹಾಗೂ ಜಿಪಂ ಮಾಜಿ ಅಧ್ಯಕ್ಷ ವಿಜಯಕುಮಾರ ಕಾಂಶೆಂಪೂರ ಅವರ ನೇತೃತ್ವದಲ್ಲಿ 24 ಗೊಂಡ ಸಮುದಾಯದ ಮುಖಂಡರ ನಿಯೋಗ ಒಯ್ಯಲಾಗುವುದು. ಕಾಗಿನೆಲೆ ಕನಕಗುರುಪೀಠದ ಶ್ರೀಗಳು, ಸಮುದಾಯದವರೇ ಆಗಿರುವ ಸಚಿವರಾದ ಕೆ.ಎಸ್. ಈಶ್ವರಪ್ಪ, ಬಸವರಾಜ ಭೈರತಿ, ಎಂ.ಟಿ.ಬಿ. ನಾಗರಾಜ, ಮಾಜಿ ಸಚಿವ ಎಚ್‌. ಎಂ. ರೇವಣ್ಣ, ಶಾಸಕ ಬಂಡೆಪ್ಪ ಕಾಶೆಂಪೂರ ಹಾಗೂ ಎಂಎಲ್‌ಸಿ ರಘುನಾಥರಾವ್‌ ಮಲ್ಕಾಪೂರೆ ಅವರ ಮುಂದಾಳತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸಮುದಾಯದ ಬೇಡಿಕೆ ಕುರಿತು ಗಮನ ಸೆಳೆಯಲಾಗುವುದು ಎಂದರು.

ಸುಳ್ಳು ಜಾತಿ ಸಿಂಧುತ್ವ ಪ್ರಮಾಣ ಪತ್ರ ತಡೆಯುವ ದಿಸೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯು ಸರ್ಕಾರದ ಇಲಾಖೆಗಳು ಹಾಗೂ ಸಂಸ್ಥೆಗಳಿಗೆ ಉದ್ಯೋಗಕ್ಕೆ ಆಯ್ಕೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೆಲ ಜಾತಿಗಳ ಅಭ್ಯರ್ಥಿಗಳ ಸಿಂಧುತ್ವ ಪ್ರಮಾಣ ಪತ್ರಕ್ಕಾಗಿ ನಾಗರಿಕ ಹಕ್ಕು ನಿರ್ದೇಶನಾಲಯ (ಜಾಗೃತ ಕೋಶ)ದ ವರದಿ ಕಡ್ಡಾಯಗೊಳಿಸಿರುವುದು ಅನ್ಯಾಯವಾಗಿದೆ ಎಂದು ದೂರಿದರು.

ಎಲ್ಲ ಜಾತಿಗಳ ಸಿಂಧುತ್ವ ಪ್ರಮಾಣಪತ್ರ ವಿತರಣೆ ನಿಯಮ ಒಂದೇ ಆಗಿರಬೇಕು. ಆದರೆ, ಗೊಂಡ, ರಾಜಗೊಂಡ, ನಾಯ್ಕಪೋಡ, ಜೇನು ಕುರುಬ, ಕಾಡು ಕುರುಬ, ಟೋಕರೆ ಕೋಳಿ ಸೇರಿದಂತೆ ಕೆಲ ಜಾತಿಗಳ ಸಿಂಧುತ್ವಕ್ಕೆ ಮಾತ್ರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿರುವುದು ಸರಿಯಲ್ಲ. ಇದರಿಂದಾಗಿ ಸಮುದಾಯದ ಅಭ್ಯರ್ಥಿಗಳು ತೀವ್ರ ಪರದಾಡುವಂತಾಗಿದೆ. ಹೀಗಾಗಿ ಕೂಡಲೇ ಆದೇಶ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಸಂಗೊಳ್ಳಿ ರಾಯಣ್ಣ ಗೊಂಡ ಸಂಘದ ಅಧ್ಯಕ್ಷ ಬಾಬುರಾವ್‌ ಮಲ್ಕಾಪೂರ, ಜಿಪಂ ಮಾಜಿ ಅಧ್ಯಕ್ಷ ವಿಜಯಕುಮಾರ ಕಾಶೆಂಪೂರ, ಮುಖಂಡರಾದ ಎಂ.ಎಸ್‌. ಕಟಗಿ, ಮಾಳಪ್ಪ ಅಡಸಾರೆ, ರವಿ ಕಣಜಿ, ನಗರಸಭೆ ಸದಸ್ಯ ಹಣಮಂತ, ಗಣಪತಿ ಕಮಠಾಣ ಸುದ್ದಿಗೋಷ್ಠಿಯಲ್ಲಿ ಇದ್ದರು.

ಕೆಲ ಜಾತಿಗಳ ಎಳ್ಗೆಯನ್ನು ಸಹಿಸಲಾಗುತ್ತಿಲ್ಲ. ಈ ಕಾರಣಕ್ಕಾಗಿ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ರೀತಿ ಆದೇಶ ಹೊರಡಿಸಿ ಸ್ವಜಾತಿ ಪ್ರೇಮ ಮೆರೆಯುತ್ತಿದ್ದಾರೆ. ಇದರಿಂದ ಗೊಂಡ, ರಾಜಗೊಂಡ ಮತ್ತು ಟೋಕರಿ ಕೋಳಿ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದು, ಇದು ಸಂವಿಧಾನದ ಕಲಂ 15ರ ಸ್ಪಷ್ಟ ಉಲ್ಲಂಘನೆಯಾಗಲಿದೆ. ಆಗಿರುವ ಅನ್ಯಾಯವನ್ನು ಸಿಎಂ ಸರಿಪಡಿಸದಿದ್ದರೆ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. -ಬಸವರಾಜ ಮಾಳಗೆ, ಜಿಲ್ಲಾ ಗೊಂಡ ನೌಕರರ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.