ಸ್ಥಿತಿವಂತರು ಬಡವರನ್ನು ಮೇಲೆತ್ತಲಿ


Team Udayavani, Oct 23, 2021, 1:05 PM IST

16poor

ಕಲಬುರಗಿ: ಸಮಾಜದ ಬಡ ಜನರಿಗೆ ಸಹಾಯ ಮಾಡುವ ಮನೋಭಾವ ಎಲ್ಲರಲ್ಲೂ ಬೆಳೆಯಬೇಕು ಎಂದು ಉತ್ತರಾದಿ ಮಠದ ಮಠಾಧೀಶ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಪೂರ್ವಾಶ್ರಮದ ಸಹೋದರ ಪಂ. ವಿದ್ಯಾ ಧೀಶಾಚಾರ್ಯ ಗುತ್ತಲ ಹೇಳಿದರು.

ನ್ಯೂ ಜಯತೀರ್ಥ ಕಲ್ಯಾಣ ಮಂಟಪ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿಪ್ರ ಸಮಾಜದ ಬಡ ಜನರನ್ನು ಮೇಲೆತ್ತುವ ಕೆಲಸ ಮಾಡಬೇಕಿದೆ. ಸಮಾಜದ ಬಡ ವಿದ್ಯಾರ್ಥಿಗಳ ಓದಿಗೆ ನೆರವಾಗಬೇಕು. ಶಿಕ್ಷಣದಲ್ಲಿ ಪ್ರಗತಿ ಹೊಂದಿದಾಗ ಮಾತ್ರ ವಿಪ್ರ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ಉತ್ತರಾದಿ ಮಠದಿಂದಲೂ ವಿದ್ಯಾರ್ಜನೆಗೆ ಸಹಾಯ ಮಾಡಲಾಗುತ್ತಿದೆ ಎಂದರು.

ವಿಶ್ವ ಮಧ್ವ ಮಹಾ ಪರಿಷತ್‌ ಮೂಲಕ ಶ್ರೀಪಾದಂಗಳವರು ಬಡ ವಿದ್ಯಾರ್ಥಿಗಳ ನೆರವಿಗೆ ಬರುವ ಉದ್ದೇಶದಿಂದ ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ. ನಮ್ಮಿಂದ ಭಗವಂತನನು ಏನನ್ನು ಅಪೇಕ್ಷಿಸುವುದಿಲ್ಲ. ನಿಶ್ಚಲವಾದಭಕ್ತಿ ಒಂದಿದ್ದರೆ ಸಾಕು ಎಂದರು.

ಲಾತೂರಕರ ಕುಟುಂಬ ಧಾರ್ಮಿಕ, ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದ್ದು ಶ್ಲಾಘನೀಯ. ಸ್ಥಿತಿವಂತರು ಬಡವರನ್ನು ಮೇಲೆತ್ತುವ ಕೆಲಸ ಮಾಡಬೇಕು. ನಮ್ಮ ಸಂಸ್ಕಾರ ಉಳಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪ.ಗೋಪಾಲಾಚಾರ್ಯ ಅಕಮಂಚಿ ನೇತೃತ್ವದಲ್ಲಿ ಶ್ರೀನಿವಾಸ ಪದ್ಮಾವತಿ ವಿವಾಹಮಹೋತ್ಸವ ಜರುಗಿತು. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಶಾಸಕ ಶಶೀಲ್‌ ನಮೋಶಿ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಕುಡಾ ಅಧ್ಯಕ್ಷ ದಯಾಘನ್‌ ಧಾರವಾಡಕರ್‌, ಪ್ರಮುಖರಾದ ರಾಮಾಚಾರ್ಯ ಅವಧಾನಿ, ಹಣಮಂತಾಚಾರ್ಯ ಸರಡಗಿ, ಪ್ರಸನ್ನಾಚಾರ್ಯ ಜೋಶಿ, ಗಿರೀಶಾಚಾರ್ಯ ಅವಧಾನಿ, ಶ್ರೀನಿವಾಸಾಚಾರ್ಯ ಸರಡಗಿ, ಬಿಷ್ಣುದಾಸಾಚಾರ್ಯ ಖಜೂರಿ, ಭೀಮಸೇನಾಚಾರ್ಯ, ಉತ್ತರಾದಿ ಮಠಾಧಿಕಾರಿ ರಾಮಾಚಾರ್ಯ ಘಂಟಿ, ವಿಶ್ವ ನಧ್ವ ಮಹಾ ಪರಿಷತ್‌ ಅಧ್ಯಕ್ಷ ರಾಮಾಚಾರ್ಯ ಮೋಘರೆ, ವ್ಯಾಸ ರಾಜ ಸಂತೆ ಕೆಲ್ಲೂರ, ಕೃಷ್ಣ ಕಾಕಲವಾರ, ವಿದ್ಯಾಸಾಗರ ಕುಲಕರ್ಣಿ, ರಾಘವೇಂದ್ರ ಕೋಗನೂರ, ಶಾಮಚಾರ್ಯ ಬೈಚಬಾಳ, ಡಾ| ಪ್ರಹ್ಲಾದ ಬುರ್ಲಿ, ಜಯರಾವ್‌ ದೇಶಪಾಂಡೆ, ಬಾಲಕೃಷ್ಣ ಲಾತೂರಕರ್‌, ಉಷಾ ಲಾತೂರ, ರವಿ ಲಾತೂರಕರ್‌, ಜ್ಯೋತಿ ಲಾತೂರಕರ್‌, ಛಾಯಾ ಮುಳೂರು, ಅರುಣ ಮುಳೂರು, ಪ್ರಹ್ಲಾದ ಪೂಜಾರಿ, ಶ್ರೀನಿವಾಸ ದೇಸಾಯಿ, ಗುಂಡಾಚಾರ್ಯ ನರಬೋಳಿ, ಶ್ರೀನಿವಾಸ ನೆಲೋಗಿ, ದೀಪಾ ಸಾವಳಗಿ ಹಾಗೂ ಹಂಸನಾಮಕ, ಶ್ರೀ ಲಕ್ಷ್ಮೀನಾರಾಯಣ ಪಾರಾಯಣ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.