ಬಂಡಿಪೋರಾದಲ್ಲಿ ಬಾಂಬ್ ಸ್ಪೋಟ: ಆರು ಮಂದಿಗೆ ಗಾಯ
Team Udayavani, Oct 26, 2021, 11:55 AM IST
ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ಬಾಂಬ್ ಸ್ಪೋಟದಲ್ಲಿ ಆರು ಮಂದಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಬಂಡಿಪೋರಾದ ಸಂಬಾಲ್ ನ ಸುಮೋ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಆರು ಜನರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.
ಸೇನೆಯ ಬೆಂಗಾವಲು ಪಡೆಯನ್ನು ಗುರಿಯನ್ನಾಗಿಸಿ ದಾಳಿ ಮಾಡಲಾಗಿದೆ ಎನ್ನಲಾಗಿದೆ. “ಬೆಂಗಾವಲು ಪಡೆ ಚಲಿಸುವ ಮೊದಲು, ಸ್ಫೋಟ ಸಂಭವಿಸಿದೆ. ಮಹಿಳೆಯರು ಸೇರಿದಂತೆ ಆರು ಜನರು ಗಾಯಗೊಂಡಿದ್ದಾರೆ. ಇಬ್ಬರನ್ನು ಎಸ್ಎಂಹೆಚ್ಎಸ್ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ ಮತ್ತು ನಾಲ್ವರಿಗೆ ಸಂಬಲ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು; ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರು
ಗಾಯಗೊಂಡವರನ್ನು ಮೊಹಮ್ಮದ್ ಅಲ್ತಾಫ್, ಫೈಸಲ್ ಫಯಾಜ್, ಮುಷ್ತಾಕ್ ಅಹ್, ತಸ್ಲೀಮಾ ಬಾನೋ, ಅಬ್ ಹಮೀದ್ ಮತ್ತು ಫಯಾಜ್ ಅಹ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ