ಕಾರಹಳ್ಳಿ ಕೆರೆ ಅಭಿವೃದ್ಧಿಗೆ 48 ಲಕ್ಷ ರೂ.ಅನುಮೋದನೆ


Team Udayavani, Oct 26, 2021, 1:47 PM IST

ಕಾರಹಳ್ಳಿ ಕೆರೆ ಅಭಿವೃದ್ಧಿಗೆ 48 ಲಕ್ಷ ರೂ.ಅನುಮೋದನೆ

ದೇವನಹಳ್ಳಿ: ಕಳೆದ 25 ವರ್ಷ ನಂತರ ಕೆರೆಗಳು ತುಂಬಿ ಕೋಡಿ ಹರಿಯುತ್ತಿರುವುದು ಸಂತಸ ತಂದಿದೆ. ಅಂತರ್ಜಲ ಮಟ್ಟ ಹೆಚ್ಚಳದಿಂದ ನೀರಿನ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

ತಾಲೂಕಿನ ಕಾರಹಳ್ಳಿ ಕೆರೆಗೆ ಸೋಮವಾರ ಸಣ್ಣ ನೀರಾವರಿ ಇಲಾಖೆಯಿಂದ ಬಾಗಿನ ಅರ್ಪಿಸಿ ಮಾತನಾಡಿದ ಅವರು, ತಾಲೂಕಿನ ಕೆರೆಗಳಿಗೆ ಎಚ್‌. ಎನ್‌.ವ್ಯಾಲಿ ಯೋಜನೆಯಡಿ ನೀರು ಹರಿಸಲಿಕ್ಕಾಗಿಸರ್ಕಾರದೊಂದಿಗೆ ಚರ್ಚಿಸುತ್ತೇನೆ. ಕೆರೆಯ ಸಮಗ್ರ ಅಭಿವೃದ್ಧಿಗಾಗಿ 48 ಲಕ್ಷ ಅನುಮೋದನೆ ಆಗಿದೆ. ಸುತ್ತಲೂ ಕಾಂಪೌಂಡ್‌ ನಿರ್ಮಾಣ ಮಾಡಲಾಗುತ್ತದೆ ಎಂದು ವಿವರಿಸಿದರು.

ರೈತರಿಗೆ ವರದಾನ: ಗುಣಮಟ್ಟದ ಕಾಮಗಾರಿ ಮಾಡಬೇಕಾಗಿದೆ. ತೀವ್ರ ಬರಗಾಲಕ್ಕೆ ತುತ್ತಾಗಿದ್ದ ಬಯಲುಸೀಮೆ ಪ್ರದೇಶವಾದ ದೇವನಹಳ್ಳಿಯ ಕೆರೆಗಳಿಗೆ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಹೆಚ್ಚು ನೀರು ಸಂಗ್ರಹಗೊಂಡು ಕೋಡಿ ಹರಿದಿರುವುದು ರೈತರ ಪಾಲಿಗೆ ವರದಾನವಾಗಿದೆ ಎಂದು ಹೇಳಿದರು.

ನೀರಿನ ಬವಣೆ ನೀಗಲಿದೆ: ಸಾರ್ವಜನಿಕರ ಬೇಡಿಕೆ ಈಡೇರಿದೆ. ಇಲ್ಲಿನ ಕೆರೆಗಳು ಭರ್ತಿಯಾಗಿ ಬೇರೆ ಕೆರೆಗಳಿಗೆ ಹರಿಯುತ್ತಿರುವುದು ಸಂತಸ ತಂದಿದೆ. ಇದರಿಂದ ಈ ಭಾಗದಲ್ಲಿನ ಕೊಳವೆಬಾವಿಗಳಲ್ಲಿಅಂತರ್ಜಲ ವೃದ್ಧಿ ಆಗುವುದರ ಜೊತೆಗೆ ಜನರ ಕುಡಿಯುವ ನೀರಿನ ಬವಣೆ ನೀಗಿಸಲಿಕ್ಕಾಗಿ ಅನುಕೂಲವಾಗಲಿದೆ ಎಂದು ಹೇಳಿದರು.

ಮಳೆ ಹಾನಿ: 129 ಮನೆಗಳಿಗೆ ಹಾನಿಯಾಗಿದೆ, ಕಂದಾಯ ಇಲಾಖೆ ಅಧಿಕಾರಿಗಳನ್ನು ಕಳುಹಿಸಿ ವರದಿ ತರಿಸಿಕೊಂಡು ಅವರಿಗೆ ಸೂಕ್ತ ಪರಿಹಾರ ಒದಗಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ. ರೈತರ ಬೆಳೆಗಳೂ ನಷ್ಟವಾಗಿದ್ದು, ಅದರ ಪರಿಹಾರವಾಗಿ ಸರ್ಕಾರ, ಎಸ್‌ಡಿಆರ್‌ಎಫ್ನಲ್ಲಿ ಒಂದು ಎಕರೆಗೆ ಕೇವಲ ಒಂದೂವರೆ ಸಾವಿರ ಪರಿಹಾರ ಕೊಡ್ತಾರೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ, ಬೆಳೆ ನಷ್ಟಕ್ಕೆ 10 ಪಟ್ಟು ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ವಿವರಿಸಿದರು.

ಮೊಯ್ಲಿಗೆ ಅಪಾರ ಅನುಭವ: ನನ್ನ ವಯಸ್ಸಿನಷ್ಟು, ವೀರಪ್ಪಮೊಯ್ಲಿಗೆ ರಾಜಕೀಯ ಅನುಭವವಿದೆ. ನನಗೆ ಸದನದಲ್ಲಿ ನೀರಾವರಿ ಸಚಿವರು ಏನು ಉತ್ತರ ಕೊಟ್ಟಿದ್ದಾರೋ ಅದನ್ನೇ ಜನರಿಗೆ ಹೇಳಿದ್ದೇನೆ. ನಾನು ಕ್ಷೇತ್ರದ ಜನತೆಗೆ ಸುಳ್ಳು ಹೇಳಿಕೊಂಡು ರಾಜಕೀಯ ಮಾಡುವ ಅಗತ್ಯವಿಲ್ಲ,ಜನರಿಗೆ ಸುಳ್ಳು ಹೇಳುವುದು ಕಾಂಗ್ರೆಸ್‌ ನವರ ವಾಡಿಕೆ ಎಂದು ಹೇಳಿದರು.

ಈ ವೇಳೆಯಲ್ಲಿ ಗ್ರಾಪಂ ಅಧ್ಯಕ್ಷೆ ಚಂದ್ರಿಕಾರವಿ ಕುಮಾರ್‌, ಪಿಡಿಒ ಕವಿತಾ, ಉಪತಹಶೀಲ್ದಾರ್‌ ಚೈತ್ರಾ, ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ಆರ್‌.ಮುನೇಗೌಡ, ಪ್ರಧಾನ ಕಾರ್ಯದರ್ಶಿ ಕಲ್ಯಾಣ್‌ ಕುಮಾರ್‌ ಬಾಬು, ಮುಖಂಡದೇವರಾಜು, ಮಂಜಣ್ಣ, ರಾಜೇಂದ್ರ, ರಮೇಶ್‌,ಹನುಮಂತಪ್ಪ, ವೆಂಕಟಗಿರಿಕೋಟೆ ಗ್ರಾಪಂ ಅಧ್ಯಕ್ಷ ಎಚ್‌.ಶ್ರೀನಿವಾಸ್‌, ವೆಂಕಟೇಶಪ್ಪ, ಸುಬ್ಬಣ್ಣ, ಕಾರಹಳ್ಳಿ ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.