ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಪಾಕಿಸ್ಥಾನದ ಆಟಗಾರ ರಿಜ್ವಾನ್

Team Udayavani, Oct 26, 2021, 4:57 PM IST

ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಪಾಕಿಸ್ಥಾನದ ಆಟಗಾರ ರಿಜ್ವಾನ್

ದುಬೈ: ಪಾಕಿಸ್ಥಾನ ವಿರುದ್ಧ ಸೋಲನುಭವಿಸಿದ ಬಳಿಕ ತೀವ್ರ ಟೀಕೆಗೊಳಗಾಗಿ, ಸಾಮಾಜಿಕ ಜಾಲತಾಣಿಗರ ದಾಳಿಗೆ ತುತ್ತಾಗಿರುವ ಟೀಂ ಇಂಡಿಯಾ ಬೌಲರ್ ಮೊಹಮ್ಮದ್‌ ಶಮಿ ಬೆಂಬಲಕ್ಕೆ ಪಾಕಿಸ್ಥಾನದ ಆಟಗಾರ ಮೊಹಮ್ಮದ್ ರಿಜ್ವಾನ್ ಧಾವಿಸಿದ್ದಾರೆ.

ಟಿ20 ವಿಶ್ವಕಪ್ ನ ಪಾಕಿಸ್ಥಾನ ಎದುರಿನ ಸೋಲಿನಲ್ಲಿ ಭಾರತದ ಬೌಲಿಂಗ್‌ ದಯನೀಯ ವೈಫ‌ಲ್ಯ ಕಂಡಿತ್ತು. ತಂಡದ ವೇಗಿ ಮೊಹಮ್ಮದ್‌ ಶಮಿ 3.5 ಓವರ್‌ಗಳಲ್ಲಿ 43 ರನ್‌ ನೀಡಿ ದುಬಾರಿಯಾಗಿದ್ದರು. ಇದನ್ನು ಸಹಿಸದ ಜಾಲತಾಣಿಗರು, “ನೀವು ಪಾಕಿಸ್ಥಾನದ ಪರ ಆಡುವುದಿದ್ದರೆ ಭಾರತದ ಜೆರ್ಸಿ ತೊಡುವುದೇಕೆ..’ ಎಂದೆಲ್ಲ ಟೀಕಾಪ್ರಹಾರ ಮಾಡಿದ್ದರು.

ಇದನ್ನೂ ಓದಿ:ಪೋರ್ನ್ ಹಬ್ ನಲ್ಲಿ ಗಣಿತ ಪಾಠ ಮಾಡುವ ಟೀಚರ್! ವರ್ಷಕ್ಕೆ 2 ಕೋಟಿ ರೂ. ಸಂಪಾದನೆ

ಸದ್ಯ ಶಮಿ ಬೆಂಬಲಕ್ಕೆ ನಿಂತಿರುವ ಪಾಕ್ ಆಟಗಾರ ರಿಜ್ವಾನ್ ಟ್ವೀಟ್ ಮಾಡಿದ್ದು, “ಒಬ್ಬ ಆಟಗಾರನು ತನ್ನ ದೇಶಕ್ಕಾಗಿ ಮತ್ತು ಅವನ ಜನರಿಗಾಗಿ ಅನುಭವಿಸಬೇಕಾದ ಒತ್ತಡ, ಹೋರಾಟಗಳು ಮತ್ತು ತ್ಯಾಗಗಳು ಅಳೆಯಲಾಗದು. ಮೊಹಮ್ಮದ್ ಶಮಿ ಒಬ್ಬ ಸ್ಟಾರ್ ಆಟಗಾರ, ವಿಶ್ವದ ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರು. ದಯವಿಟ್ಟು ನಿಮ್ಮ ಸ್ಟಾರ್ ಗಳನ್ನು ಗೌರವಿಸಿ. ಈ ಆಟವು ಜನರನ್ನು ಒಟ್ಟಿಗೆ ಸೇರಿಸಬೇಕೇ ಹೊರತು ವಿಭಜಿಸಬಾರದು” ಎಂದು ಬರೆದುಕೊಂಡಿದ್ದಾರೆ.

ಭಾರತೀಯ ಆಟಗಾರರಿಂದ ಬೆಂಬಲ: ಪಂದ್ಯದ ಬಳಿಕ ಶಮಿ ವಿರುದ್ಧ ಎದುರಾದ ಟೀಕೆಗಳಿಗೆ ಭಾರತೀಯ ಮಾಜಿ ಆಟಗಾರರು ಉತ್ತರಿಸಿದ್ದಾರೆ. ದಿಗ್ಗಜ ಆಟಗಾರ ಸಚಿನ್ ತೆಂಡುಲ್ಕರ್ ಅವರು “ನಾವು ಟೀಮ್‌ ಇಂಡಿಯಾವನ್ನು ಬೆಂಬಲಿಸುವಾಗ ತಂಡದ ಎಲ್ಲ ಆಟಗಾರರನ್ನೂ ಬೆಂಬಲಿಸುತ್ತೇವೆ. ಮೊಹಮ್ಮದ್‌ ಶಮಿ ವಿಶ್ವ ದರ್ಜೆಯ ಬೌಲರ್‌. ಇದು ಅವರ ದಿನವಾಗಿರಲಿಲ್ಲ, ಅಷ್ಟೇ. ನಾನು ಶಮಿ ಮತ್ತು ಟೀಮ್‌ ಇಂಡಿಯಾ ಪರವಾಗಿ ನಿಲ್ಲುತ್ತೇನೆ” ಎಂದು ಹೇಳಿದ್ದರು.

“ಶಮಿ ಮೇಲಿನ ಆನ್‌ಲೈನ್‌ ಆಕ್ರಮಣ ಅತ್ಯಂತ ಆಘಾತಕಾರಿ. ಅವರೋರ್ವ ಚಾಂಪಿಯನ್‌ ಬೌಲರ್‌. ಆನ್‌ಲೈನ್‌ನಲ್ಲಿ ಗಲಭೆ ಎಬ್ಬಿಸುವವರಿಗಿಂತ ಹೆಚ್ಚಿನ ದೇಶಪ್ರೇಮ ಭಾರತದ ಕ್ಯಾಪ್‌ ಧರಿಸಿದವರ ಹೃದಯದಲ್ಲಿರುತ್ತದೆ. ಶಮಿ, ಮುಂದಿನ ಪಂದ್ಯದಲ್ಲಿ ನಿಮ್ಮ ತಾಕತ್ತು ತೋರಿಸಿ. ನಿಮ್ಮ ಬೆಂಬಲಕ್ಕೆ ನಾವಿದ್ದೇವೆ’ ಎಂದು ಸೆಹವಾಗ್‌ ಆತ್ಮವಿಶ್ವಾಸ ತುಂಬಿದ್ದಾರೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.