ಬೀದರ ಈಗ ಪ್ರವಾಹ ಪೀಡಿತ ಜಿಲ್ಲೆ!


Team Udayavani, Oct 27, 2021, 12:07 PM IST

10flood

ಬೀದರ: ಮುಂಗಾರು ಋತುವಿನಲ್ಲಿ ಬಿದ್ದ ಭಾರೀ ಮಳೆ ಮತ್ತು “ಮಹಾ’ ನೀರಿನ ಕಂಟಕದಿಂದ ಲಕ್ಷಾಂತರ ಹೆಕ್ಟೇರ್‌ ಬೆಳೆ ಹಾನಿಯಾಗಿರುವ ಇಡೀ ಗಡಿ ನಾಡು ಬೀದರ ಅತಿವೃಷ್ಟಿ/ಪ್ರವಾಹ ಪೀಡಿತ ಜಿಲ್ಲೆ. ಕಳೆದೆರಡು ತಿಂಗಳ ಹಿಂದೆ ಜಿಲ್ಲೆಯ ಮೂರು ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಿಸಿದ್ದ ಸರ್ಕಾರ ಈಗ ಇನ್ನುಳಿದ ಐದು ತಾಲೂಕುಗಳನ್ನೂ ಆ ಪಟ್ಟಿಗೆ ಸೇರಿಸಿ ಮಂಗಳವಾರ ಆದೇಶಿಸಿದೆ.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನಾಧರಿಸಿ 2021ನೇ ಮುಂಗಾರು ಹಂಗಾಮಿನ ಸೆಪ್ಟೆಂಬರ್‌ ಮಾಹೆಯಲ್ಲಿ ಅತಿವೃಷ್ಟಿ ಮತ್ತು ಮಾಂಜ್ರಾ ನದಿ ಹರಿವಿನಿಂದ ಜಿಲ್ಲೆಯ ಔರಾದ, ಬೀದರ ಬಸವಕಲ್ಯಾಣ, ಕಮಲನಗರ ಮತ್ತು ಹುಲಸೂರು ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದೆ.

ಕಂದಾಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್‌ ಮಂಗಳವಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಮೊದಲೇ ಜಿಲ್ಲೆಯ ಭಾಲ್ಕಿ, ಹುಮನಾಬಾದ ಮತ್ತು ಚಿಟಗುಪ್ಪ ತಾಲೂಕುಗಳು ಆ ಪಟ್ಟಿಗೆ ಸೇರಿದ್ದವು. ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರ್ಕಾರದ ಆದೇಶ ಮತ್ತು ಸುತ್ತೋಲೆಗಳಲ್ಲಿನ ನಿರ್ದೇಶನ ಕಟ್ಟುನಿಟ್ಟಾಗಿ ಪಾಲಿಸಿ, ಜಿಲ್ಲಾಡಳಿತ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಸದಾ ಪ್ರಕೃತಿ ವಿಕೋಪದ ಹೊಡೆತಕ್ಕೆ ಸಿಲುಕುವ ಬಿಸಿಲೂರಿನ ಅನ್ನದಾತರು ಕಳೆದೆರಡು ವರ್ಷದಿಂದ ವರುಣನ ಅವಕೃಪೆಗೆ ಒಳಗಾಗುತ್ತಿದ್ದು, ಅಕ್ಷರಶಃ ನಲುಗಿ ಹೋಗಿದ್ದಾರೆ. ಜಿಲ್ಲೆಯಲ್ಲಿ ಕಳೆದ ಜ.1ರಿಂದ ಅ. 20ರವರೆಗೆ 882 ಮಿ.ಮೀ (795 ಮಿ.ಮೀ) ಮಳೆ ಆಗಿದೆ. ಮುಂಗಾರು ಹಂಗಾಮಿನಲ್ಲಿ 3.71 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಅದರಲ್ಲಿ 1,83,660 ಹೆಕ್ಟೇರ್‌ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ.

ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

ಕೃಷಿ-ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಅ. 18ರಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿಗಳಿಗೆ ನಷ್ಟದ ಬಗ್ಗೆ ನೆರವು ಕೋರಿ ಪ್ರಸ್ತಾವನೆ ಸಲ್ಲಿಸಿದ್ದರು. ಜಿಲ್ಲಾದ್ಯಂತ ಈ ಹಿಂದೆ ಸುರಿದ ಮಳೆಗೆ ಸಮೃದ್ಧವಾಗಿ ಬೆಳೆದಿದ್ದ, ಉದ್ದು ಮತ್ತು ಹೆಸರು ಬೆಳೆ ಹಾನಿಗೀಡಾಗಿತ್ತು. ನಂತರ ರಾಜ್ಯದಲ್ಲೇ ಅತಿ ಹೆಚ್ಚು ಪ್ರಮಾಣದಲ್ಲಿ ಬೆಳೆಯುವ ಸೋಯಾಬಿನ್‌ ನೀರು ಪಾಲಾಗಿದೆ. ಕಟಾವು ಮಾಡಿ ಕೂಡಿಟ್ಟಿದ್ದ ಬೆಳೆ ಕೊಳೆತು ಹೋಗುತ್ತಿದ್ದರೆ, ಇನ್ನೂ ಕೆಲವೆಡೆ ಭೂಮಿಯಲ್ಲಿನ ತೇವಾಂಶದಿಂದಾಗಿ ಕಟಾವು ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಸಾಲ-ಸೂಲ ಮಾಡಿ ಭೂಮಿಗೆ ಸಾವಿರಾರು ರೂ. ಖರ್ಚು ಮಾಡಿದ ರೈತರು ಕಣ್ಣೀರಲ್ಲಿ ಕೈತಳೆಯುವಂತಾಗಿದೆ.

ಮುಂದಿನ ಬದುಕು ಹೇಗೆ? ಎಂಬ ಚಿಂತೆಯಲ್ಲಿದ್ದರು. ಆದರೆ, ಕೊನೆಗೂ ಸರ್ಕಾರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಅತಿವೃಷ್ಟಿ/ ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದೆ. ತ್ವರಿತ ಪರಿಹಾರ ಸಿಗಲಿ ಕಳೆದ ಮುಂಗಾರು ಹಂಗಾಮಿನಲ್ಲೂ ಜಿಲ್ಲೆಯಲ್ಲಿ ರೈತರ ಬದುಕು ದುಸ್ತರಗೊಂಡಿತ್ತು.

ಪ್ರಸಕ್ತ ವರ್ಷದ ಮುಂಗಾರಿನಲ್ಲಿ ಮಾರಣಾಂತಿಕ ಕೋವಿಡ್‌ ಸಂಕಷ್ಟದ ನಡುವೆಯೂ ಬಿತ್ತನೆ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದ ಅನ್ನದಾತರಿಗೆ ಮಳೆ ಅಬ್ಬರ ಮತ್ತೆ ಸಂತ್ರಸ್ತರನ್ನಾಗಿಸಿದೆ. ಬೆಳೆ ಹಾನಿ ಸಮೀಕ್ಷೆ ವರದಿ ಸಲ್ಲಿಸಿಕೆ ಬಳಿಕ ಈಗ ಸರ್ಕಾರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಅತಿವೃಷ್ಟಿ/ ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಿದೆ. ಮಾರ್ಗಸೂಚಿಯಂತೆ ತ್ವರಿತವಾಗಿ ಪರಿಹಾರ ಒದಗಿಸಿ ಕೃಷಿಕರಿಗೆ ನೆರವಾಗಬೇಕಿದೆ.

-ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.