ಕಂಠಿ ಸ್ನಾತಕೋತ್ತರ ಕೇಂದ್ರ ಸ್ಥಳಾಂತರ ಬೇಡ

ಅಂಕಪಟ್ಟಿಯನ್ನು ಸಮಯಕ್ಕೆ ಸರಿಯಾಗಿ ವಿಶ್ವವಿದ್ಯಾಲಯ ಕಾಲೇಜುಗಳಿಗೆ ತಲುಪಿಸಬೇಕು.

Team Udayavani, Oct 29, 2021, 9:25 PM IST

ಕಂಠಿ ಸ್ನಾತಕೋತ್ತರ ಕೇಂದ್ರ ಸ್ಥಳಾಂತರ ಬೇಡ

ಬಾಗಲಕೋಟೆ: ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಅಧೀನದಲ್ಲಿ ನಗರದಲ್ಲಿ ನಡೆಯುತ್ತಿರುವ ಎಸ್‌. ಆರ್‌. ಕಂಠಿ ಅನುಭಾವ ಸಂಗಮ ಸ್ನಾತಕೋತ್ತರ ಅಧ್ಯಯನ ಕೇಂದ್ರವನ್ನು ಬಾಗಲಕೋಟೆಯಲ್ಲೇ ಮುಂದುವರಿಸಬೇಕು ಎಂದು ಎಬಿವಿಪಿ ಒತ್ತಾಯಿಸಿದೆ. ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಬಾಗಲಕೋಟೆ ಶಾಖೆಯಿಂದ ವಿದ್ಯಾರ್ಥಿಗಳ ವಿವಿಧ ಸಮಸ್ಯೆ ಬಗೆಹರಿಸುವಂತೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು.

ಎಸ್‌ಆರ್‌ ಕಂಠಿ ಅನುಭಾವ ಸಂಗಮ ಸ್ನಾತಕೋತ್ತರ ಕೇಂದ್ರವನ್ನು ಬಾಗಲಕೋಟೆ ನಗರದಲ್ಲಿ ಮುಂದುವರಿಸಬೇಕು. ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಸಮಯಕ್ಕೆ ಸರಿಯಾಗಿ ವಿಶ್ವವಿದ್ಯಾಲಯ ಕಾಲೇಜುಗಳಿಗೆ ತಲುಪಿಸಬೇಕು. ಪ್ರವೇಶದ ಸಮಯದಲ್ಲಿ ಆನ್‌ಲೈನ್‌ನಲ್ಲಿ ಆಗಿರುವ ಡಬಲ್‌ ಹಾಗೂ ಮಲ್ಟಿಪಲ್‌ ಪೇಮೆಂಟ್‌ ಗಳನ್ನು ವಿದ್ಯಾರ್ಥಿಗಳಿಗೆ ಕೂಡಲೇ ಹಿಂತಿರುಗಿಸಬೇಕು. ಒಂದು ಕಾಲೇಜಿನಿಂದ ಇನ್ನೊಂದು ಕಾಲೇಜಿಗೆ ವರ್ಗಾವಣೆ ಹೊಂದುವುದು ವಿದ್ಯಾರ್ಥಿಗಳ ಹಕ್ಕಾಗಿದ್ದು, ಈಗಿರುವ 5 ಸಾವಿರ ಶುಲ್ಕ ಬಡವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ. ಆದ್ದರಿಂದ ವರ್ಗಾವಣೆ ಶುಲ್ಕವನ್ನು ಕಡಿಮೆಗೊಳಿಸಬೇಕು.

ಘಟಿಕೋತ್ಸವ ಪ್ರಮಾಣಪತ್ರವನ್ನು ಕಾಲೇಜಿಗೆ ಅಥವಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯವೇ ಶೀಘ್ರವಾಗಿ ತಲುಪಿಸಬೇಕು ಎಂದು ಆಗ್ರಹಿಸಿದರು. ಪ್ರವೇಶ ಹಾಗೂ ಪರೀಕ್ಷೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತಡವಾದಾಗ ಬಡ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ದಂಡ ವಿಧಿಸಬೇಕು. ಈಗಿರುವ 1500 ರೂ.ಗಳ ದಂಡ ಅಮಾನವೀಯವಾಗಿದೆ. ತಕ್ಷಣವೇ ಅದನ್ನು ಕಡಿಮೆಗೊಳಿಸಬೇಕು. ರಾಜ್ಯದ ಬೇರೆ ವಿಶ್ವವಿದ್ಯಾಲಯಗಳು ಕೋವಿಡ್‌-19ರ ಸಮಯದಲ್ಲಿ ಶೇ.50 ಪರೀಕ್ಷಾ ಶುಲ್ಕವನ್ನು ಮಾತ್ರ ಪಡೆದಿವೆ. ಆದರೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶೇ.100 ಶುಲ್ಕ ಪಡೆದಿದೆ. ಆದ್ದರಿಂದ ತಕ್ಷಣವೇ ಶೇ.50 ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂತಿರುಗಿಸಬೇಕು.

ವಿಶ್ವವಿದ್ಯಾಲಯವು ಸುತ್ತೋಲೆ, ಯಾವುದೇ ಸೂಚನೆಗಳನ್ನು ಸಾಕಷ್ಟು ಮುಂಚಿತವಾಗಿ ಹಾಗೂ ವ್ಯವಸ್ಥಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು. ಎಬಿವಿಪಿ ಕರ್ನಾಟಕ ರಾಜ್ಯ ಹಾಸ್ಟೆಲ್‌ ಪ್ರಮುಖ ಪ್ರಕಾಶ್‌ ಪೂಜಾರ, ಜಿಲ್ಲಾ ಸಂಚಾಲಕ ಉನ್ನತ ಬೇವಿನಕಟ್ಟಿ, ತಾಲೂಕು ಸಂಚಾಲಕ ಪ್ರಶಾಂತ್‌ ಮುರನಾಳ, ಕಾರ್ಯಕರ್ತರಾದ ಹಯವದನ ದೇಸಾಯಿ, ನಿಖೀಲ್‌ ಹೆಬ್ಟಾಳ, ಫನ್ನಿ ದೇಸಾಯಿ, ಶ್ರೇಯಸ್‌ ಶೆಟ್ಟಿ, ಧೀರಜ್‌ ವರ್ನೆàಕರ, ಜ್ಯೋತಿ ಸಜ್ಜನ, ಭವಾನಿ, ಸ್ವಸ್ತಿಕ್‌ ಶೆಟ್ಟಿ, ಚಂಡಕ, ವೈಜಿನಾಥ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.